ಕೀರ್ತನೆಗಳು 7 : 1 (OCVKN)
ನನ್ನ ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿದ್ದೇನೆ; ನನ್ನನ್ನು ಬೆನ್ನಟ್ಟಿದ ಎಲ್ಲರಿಂದಲೂ ನನ್ನನ್ನು ರಕ್ಷಿಸಿ ಕಾಪಾಡಿರಿ,
ಕೀರ್ತನೆಗಳು 7 : 2 (OCVKN)
ಇಲ್ಲದಿದ್ದರೆ, ನನ್ನನ್ನು ಸಿಂಹದಂತೆ ಅವರು ಹರಿದುಬಿಡುವರು ರಕ್ಷಿಸಲು ಯಾರೂ ಇಲ್ಲವೆಂದು ನನ್ನನ್ನು ನಾಶಮಾಡಿಬಿಡುವರು.
ಕೀರ್ತನೆಗಳು 7 : 3 (OCVKN)
ನನ್ನ ಯೆಹೋವ ದೇವರೇ, ನಾನು ಅನ್ಯಾಯ ಮಾಡಿದ್ದರೆ, ನನ್ನ ಕೈಗಳಲ್ಲಿ ಅಪರಾಧವಿದ್ದರೆ,
ಕೀರ್ತನೆಗಳು 7 : 4 (OCVKN)
ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡುಮಾಡಿದ್ದರೆ, ಕಾರಣವಿಲ್ಲದೆ ನನ್ನ ವೈರಿಯಿಂದ ಏನನ್ನಾದರೂ ಸುಲಿದುಕೊಂಡಿದ್ದರೆ,
ಕೀರ್ತನೆಗಳು 7 : 5 (OCVKN)
ಆಗ ನನ್ನ ವೈರಿಯು ಬೆನ್ನಟ್ಟಿ ನನ್ನನ್ನು ಹಿಡಿದುಕೊಳ್ಳಲಿ. ನನ್ನ ಜೀವವನ್ನು ನೆಲಕ್ಕೆ ಹಾಕಿ ತುಳಿದು ಬಿಡಲಿ ಮತ್ತು ನನ್ನ ಮಾನವನ್ನು ಮಣ್ಣು ಪಾಲಾಗುವಂತೆ ಮಾಡಲಿ.
ಕೀರ್ತನೆಗಳು 7 : 6 (OCVKN)
ಯೆಹೋವ ದೇವರೇ, ನೀವು ಕೋಪದಿಂದ ಎದ್ದೇಳಿರಿ; ನನ್ನ ವೈರಿಗಳ ಕ್ರೋಧಕ್ಕೆ ವಿರೋಧವಾಗಿ ಎಚ್ಚರಗೊಳ್ಳಿರಿ. ನನ್ನ ದೇವರೇ, ನ್ಯಾಯಕ್ಕೆ ನಿಮ್ಮ ತೀರ್ಪನ್ನು ನೀಡಲು ಎದ್ದೇಳಿರಿ.
ಕೀರ್ತನೆಗಳು 7 : 7 (OCVKN)
ರಾಷ್ಟ್ರಗಳು ನಿಮ್ಮ ಸುತ್ತಲು ಬಂದು ಸೇರಲಿ, ಉನ್ನತದಿಂದ ನೀವು ಅವರ ಮೇಲೆ ಸಿಂಹಾಸನದಲ್ಲಿದ್ದು ಆಳಿರಿ.
ಕೀರ್ತನೆಗಳು 7 : 8 (OCVKN)
ಯೆಹೋವ ದೇವರು ಜನಗಳಿಗೆ ನ್ಯಾಯತೀರಿಸಲಿ. ಮಹೋನ್ನತರಾದ ಯೆಹೋವ ದೇವರೇ, ನನ್ನ ನೀತಿಯ ಪ್ರಕಾರವೂ, ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸಿರಿ.
ಕೀರ್ತನೆಗಳು 7 : 9 (OCVKN)
ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ. ನೀತಿಯುಳ್ಳ ದೇವರೇ, ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ.
ಕೀರ್ತನೆಗಳು 7 : 10 (OCVKN)
ಮಹೋನ್ನತರಾದ ದೇವರು ನನ್ನ ಗುರಾಣಿಯಾಗಿದ್ದಾರೆ,* ಗುರಾಣಿಯಾಗಿದ್ದಾರೆ ಅಥವಾ ಪ್ರಭುವಾಗಿದ್ದಾರೆ ಅವರು ಯಥಾರ್ಥ ಹೃದಯವುಳ್ಳವರನ್ನು ರಕ್ಷಿಸುತ್ತಾರೆ.
ಕೀರ್ತನೆಗಳು 7 : 11 (OCVKN)
ದೇವರು ನೀತಿಯುಳ್ಳ ನ್ಯಾಯಾಧಿಪತಿಯಾಗಿದ್ದಾರೆ. ದೇವರು ದುಷ್ಟನ ಮೇಲೆ ಸದಾ ರೋಷವುಳ್ಳವರಾಗಿದ್ದಾರೆ.
ಕೀರ್ತನೆಗಳು 7 : 12 (OCVKN)
ಅಂಥವರು ತಿರುಗಿಕೊಳ್ಳದಿದ್ದರೆ ದೇವರು ತಮ್ಮ ಖಡ್ಗ ಮಸೆಯುವರು; ತಮ್ಮ ಬಿಲ್ಲು ಬಗ್ಗಿಸಿ ಅದನ್ನು ಸಿದ್ಧಮಾಡುವರು.
ಕೀರ್ತನೆಗಳು 7 : 13 (OCVKN)
ಅಂಥವರಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿದ್ದಾರೆ; ತಮ್ಮ ಅಗ್ನಿಬಾಣಗಳನ್ನು ಸಿದ್ಧಮಾಡುತ್ತಾರೆ.
ಕೀರ್ತನೆಗಳು 7 : 14 (OCVKN)
ಅಂಥವರು ದುಷ್ಟತನವನ್ನು ಗರ್ಭಧರಿಸಿ, ಸೇಡನ್ನು ಗರ್ಭದಲ್ಲಿಟ್ಟುಕೊಂಡು ಸುಳ್ಳನ್ನು ಹೆರುವರು.
ಕೀರ್ತನೆಗಳು 7 : 15 (OCVKN)
ಅಂಥವರು ಕುಣಿಯನ್ನು ಅಗೆದಿದ್ದಾರೆ. ಆದರೆ ತಾವು ಅಗೆದ ಕುಣಿಯೊಳಗೆ ತಾವೇ ಬೀಳುವರು.
ಕೀರ್ತನೆಗಳು 7 : 16 (OCVKN)
ಅಂಥವರ ಕೇಡು ಅವರ ಮೇಲೆಯೇ ತಿರುಗುವುದು; ಅವರ ತಲೆಯ ಮೇಲೆ ಅವರ ಬಲಾತ್ಕಾರವೇ ಇಳಿಯುವುದು.
ಕೀರ್ತನೆಗಳು 7 : 17 (OCVKN)
ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು. ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು.
❮
❯
1
2
3
4
5
6
7
8
9
10
11
12
13
14
15
16
17