ಕೀರ್ತನೆಗಳು 71 : 1 (OCVKN)
ಯೆಹೋವ ದೇವರೇ, ನಿಮ್ಮಲ್ಲಿಯೇ ನಾನು ನನ್ನ ಭರವಸೆಯನ್ನಿಟ್ಟಿದ್ದೇನೆ. ನನಗೆ ಎಂದೂ ಆಶಾಭಂಗವಾಗದಿರಲಿ.
ಕೀರ್ತನೆಗಳು 71 : 2 (OCVKN)
ನಿಮ್ಮ ನೀತಿಯಿಂದ ನನ್ನನ್ನು ಬಿಡಿಸಿ, ನನ್ನನ್ನು ಪಾರುಮಾಡಿರಿ. ನಿಮ್ಮ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ, ನನ್ನನ್ನು ರಕ್ಷಿಸಿರಿ.
ಕೀರ್ತನೆಗಳು 71 : 3 (OCVKN)
ನಾನು ಯಾವಾಗಲೂ ಆಶ್ರಯಿಸಿಕೊಳ್ಳುವ ಬಂಡೆಯಾಗಿರಿ. ನನ್ನನ್ನು ರಕ್ಷಿಸುವುದಕ್ಕೆ ಆಜ್ಞಾಪಿಸಿರಿ. ನನ್ನ ಬಂಡೆಯೂ ನನ್ನ ಕೋಟೆಯೂ ನೀವೇ ಆಗಿದ್ದೀರಿ.
ಕೀರ್ತನೆಗಳು 71 : 4 (OCVKN)
ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವವನ ಮತ್ತು ಕ್ರೂರನ ಕೈಗೂ ನನ್ನನ್ನು ಸಿಕ್ಕಿಸದಿರಿ.
ಕೀರ್ತನೆಗಳು 71 : 5 (OCVKN)
ಸಾರ್ವಭೌಮ ಯೆಹೋವ ದೇವರೇ, ನೀವು ನನ್ನ ನಿರೀಕ್ಷೆ ಆಗಿದ್ದೀರಿ. ನನ್ನ ಯೌವನದಿಂದ ನನ್ನ ಭರವಸೆಯೂ ಆಗಿದ್ದೀರಿ.
ಕೀರ್ತನೆಗಳು 71 : 6 (OCVKN)
ಹುಟ್ಟಿನಿಂದ ನೀವೇ ನನ್ನ ಭರವಸೆ. ತಾಯಿಯ ಗರ್ಭದಿಂದ ನೀವೇ ನನ್ನನ್ನು ಹೊರಗೆ ತಂದಿದ್ದೀರಿ. ನಾನು ಯಾವಾಗಲೂ ನಿಮ್ಮನ್ನು ಸ್ತುತಿಸುತ್ತಿರುವೆನು.
ಕೀರ್ತನೆಗಳು 71 : 7 (OCVKN)
ಅನೇಕರು ನನ್ನ ಸ್ಥಿತಿಯನ್ನು ಕಂಡು ಆಶ್ಚರ್ಯ ಪಡುತ್ತಾರೆ. ಆದರೆ ನೀವು ನನ್ನ ಬಲವಾದ ಆಶ್ರಯವಾಗಿದ್ದೀರಿ.
ಕೀರ್ತನೆಗಳು 71 : 8 (OCVKN)
ನನ್ನ ಬಾಯಿ ನಿಮ್ಮ ಸ್ತೋತ್ರದಿಂದ ತುಂಬಿರಲಿ. ನಾನು ದಿನವೆಲ್ಲಾ ನಿಮ್ಮ ವೈಭವವನ್ನೇ ಸಾರುತ್ತಿರುವೆ.
ಕೀರ್ತನೆಗಳು 71 : 9 (OCVKN)
ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡಿರಿ. ನನ್ನ ಶಕ್ತಿಯು ಕುಂದುತ್ತಿರುವಾಗ ನನ್ನನ್ನು ಕೈಬಿಡಬೇಡಿರಿ.
ಕೀರ್ತನೆಗಳು 71 : 10 (OCVKN)
ನನ್ನ ಶತ್ರುಗಳು ನನಗೆ ವಿರೋಧವಾಗಿ ಮಾತನಾಡುತ್ತಾರೆ; ನನ್ನ ಪ್ರಾಣಕ್ಕೆ ಒಳಸಂಚು ಮಾಡುವವರು ಕೂಡಿಕೊಂಡು ದುರಾಲೋಚನೆ ಮಾಡುತ್ತಾರೆ.
ಕೀರ್ತನೆಗಳು 71 : 11 (OCVKN)
ಅದೇನೆಂದರೆ, “ದೇವರು ಅವನನ್ನು ಕೈಬಿಟ್ಟಿದ್ದಾನೆ. ಅವನನ್ನು ಬೆನ್ನಟ್ಟಿ ಹಿಡಿಯಿರಿ, ಅವನನ್ನು ಬಿಡಿಸುವವರು ಯಾರೂ ಇಲ್ಲ,” ಎನ್ನುತ್ತಾರೆ.
ಕೀರ್ತನೆಗಳು 71 : 12 (OCVKN)
ದೇವರೇ, ನನ್ನಿಂದ ದೂರವಾಗಿರಬೇಡಿರಿ. ದೇವರೇ, ಬೇಗ ಬಂದು ನನಗೆ ಸಹಾಯಮಾಡಿರಿ.
ಕೀರ್ತನೆಗಳು 71 : 13 (OCVKN)
ನನ್ನನ್ನು ಆರೋಪಿಸುವವರು, ನಾಚಿಕೆಪಟ್ಟು ನಾಶವಾಗಲಿ. ನನ್ನ ಕೇಡಿಗಾಗಿ ಹುಡುಕುವವರನ್ನು ನಿಂದಾಪಮಾನಗಳು ಕವಿಯಲಿ.
ಕೀರ್ತನೆಗಳು 71 : 14 (OCVKN)
ಆದರೆ ನಾನು ಎಂದೆಂದೂ ನಿಮ್ಮನ್ನು ನಿರೀಕ್ಷಿಸುತ್ತಾ, ನಿಮ್ಮನ್ನು ಇನ್ನೂ ಹೆಚ್ಚೆಚ್ಚಾಗಿ ಸ್ತುತಿಸುವೆನು.
ಕೀರ್ತನೆಗಳು 71 : 15 (OCVKN)
ನನ್ನ ಬಾಯಿ ದಿನವೆಲ್ಲಾ ನಿಮ್ಮ ನೀತಿಯನ್ನೂ ನಿಮ್ಮ ರಕ್ಷಣೆಯನ್ನೂ ಪ್ರಕಟಿಸುವುದು. ಅವುಗಳನ್ನು ವಿವರಿಸಲು ನನಗೆ ತಿಳಿಯದು.
ಕೀರ್ತನೆಗಳು 71 : 16 (OCVKN)
ಸಾರ್ವಭೌಮ ಯೆಹೋವ ದೇವರೇ ನಾನು ನಿಮ್ಮ ಮಹಾಕೃತ್ಯಗಳನ್ನು ಸಾರುವೆನು. ನಿಮ್ಮ ನೀತಿ ಕೃತ್ಯಗಳನ್ನು ಪ್ರಕಟಪಡಿಸುವೆನು.
ಕೀರ್ತನೆಗಳು 71 : 17 (OCVKN)
ದೇವರೇ, ನನ್ನ ಯೌವನದಿಂದ ನನಗೆ ನೀವು ಕಲಿಸಿದ್ದೀರಿ. ಈವರೆಗೂ ನಿಮ್ಮ ಅದ್ಭುತಕಾರ್ಯಗಳನ್ನು ಘೋಷಿಸುತ್ತಿದ್ದೇನೆ.
ಕೀರ್ತನೆಗಳು 71 : 18 (OCVKN)
ದೇವರೇ, ನಾನು ಮುಪ್ಪಿನವನೂ, ನೆರೆಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿಮ್ಮ ಶಕ್ತಿಯನ್ನೂ, ಮುಂದಿನ ಪೀಳಿಗೆಗೆ ನಿಮ್ಮ ಪರಾಕ್ರಮವನ್ನೂ ತಿಳಿಸುವವರೆಗೂ ನನ್ನನ್ನು ಕೈಬಿಡಬೇಡಿರಿ.
ಕೀರ್ತನೆಗಳು 71 : 19 (OCVKN)
ದೇವರೇ, ನಿಮ್ಮ ನೀತಿಯು ಆಕಾಶವನ್ನು ಮುಟ್ಟುತ್ತದೆ. ಮಹತ್ಕಾರ್ಯಗಳನ್ನು ಮಾಡಿದ ದೇವರೇ, ನಿಮ್ಮ ಹಾಗೆ ಯಾರಿದ್ದಾರೆ?
ಕೀರ್ತನೆಗಳು 71 : 20 (OCVKN)
ಅನೇಕ ಕಠಿಣವಾದ ಇಕ್ಕಟ್ಟುಗಳನ್ನು ನೋಡ ಮಾಡಿದ ನನ್ನನ್ನು ನೀವು ತಿರುಗಿ ಬದುಕಿಸಿದ್ದೀರಿ. ಭೂಮಿಯ ಅಧೋಭಾಗದಿಂದ ಪುನಃ ನನ್ನನ್ನು ಮೇಲಕ್ಕೆ ಎತ್ತುವಿರಿ.
ಕೀರ್ತನೆಗಳು 71 : 21 (OCVKN)
ನೀವು ನನ್ನ ಗೌರವವನ್ನು ಹೆಚ್ಚಿಸಿ ನನ್ನನ್ನು ಮತ್ತೊಮ್ಮೆ ಆದರಿಸಿರಿ.
ಕೀರ್ತನೆಗಳು 71 : 22 (OCVKN)
ನನ್ನ ದೇವರೇ, ನಾನು ನಿಮ್ಮನ್ನು ಸ್ತುತಿಸುವೆನು. ನಿಮ್ಮ ನಂಬಿಗಸ್ತಿಕೆಗಾಗಿ ವೀಣೆಯಿಂದ ಕೊಂಡಾಡುವೆನು. ಇಸ್ರಾಯೇಲರ ಪರಿಶುದ್ಧರೇ, ಕಿನ್ನರಿಯಿಂದ ನಿಮ್ಮನ್ನು ಸ್ತುತಿಸುವೆನು.
ಕೀರ್ತನೆಗಳು 71 : 23 (OCVKN)
ನೀವು ನನ್ನನ್ನು ಬಿಡಿಸಿದ್ದಕ್ಕಾಗಿ ನನ್ನ ತುಟಿಗಳು ಆನಂದದಿಂದ ಹಾಡಿ ಸ್ತುತಿಸುತ್ತವೆ.
ಕೀರ್ತನೆಗಳು 71 : 24 (OCVKN)
ನನ್ನ ನಾಲಿಗೆಯು ಸಹ ದಿನವೆಲ್ಲಾ ನಿಮ್ಮ ನೀತಿಯನ್ನು ಮಾತನಾಡುವುದು, ಏಕೆಂದರೆ ನನಗೆ ಕೇಡು ಬಗೆಯುವವರು ನಾಚಿಕೊಂಡು ತಲೆ ತಗ್ಗಿಸಿದ್ದಾರೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24