ಕೀರ್ತನೆಗಳು 75 : 1 (OCVKN)
ನಿಮ್ಮನ್ನು ಕೊಂಡಾಡುತ್ತೇವೆ; ದೇವರೇ, ನಿಮ್ಮನ್ನು ಕೊಂಡಾಡುತ್ತೇವೆ; ಏಕೆಂದರೆ ಜನರು ನಿಮ್ಮ ನಾಮವನ್ನು ಜಪಿಸಿ, ನಿಮ್ಮ ಅದ್ಭುತಗಳನ್ನು ಕುರಿತು ಹೇಳುತ್ತಾರೆ.
ಕೀರ್ತನೆಗಳು 75 : 2 (OCVKN)
“ನಿಯಮಿತ ಸಮಯವನ್ನು ಆಯ್ದುಕೊಳ್ಳುವೆನು. ನ್ಯಾಯಕ್ಕೆ ಸರಿಯಾಗಿ ನ್ಯಾಯತೀರಿಸುವೆನು,
ಕೀರ್ತನೆಗಳು 75 : 3 (OCVKN)
ಭೂಮಿಯೂ ಅದರ ನಿವಾಸಿಗಳೆಲ್ಲರೂ ಬೆರಗಾಗಿದ್ದಾರೆ. ನಾನು ಅದರ ಸ್ತಂಭಗಳನ್ನು ನಿಲ್ಲಿಸಿದ್ದೇನೆ.
ಕೀರ್ತನೆಗಳು 75 : 4 (OCVKN)
‘ಅಹಂಕಾರದಿಂದ ವರ್ತಿಸಬೇಡಿರಿ,’ ಎಂದು ಅಹಂಕಾರಿಗೆ ಹೇಳುತ್ತೇನೆ. ‘ನಿಮ್ಮ ಕೊಂಬು ಎತ್ತಬೇಡಿರಿ,’ ಎಂದು ದುಷ್ಟರಿಗೆ ಹೇಳುವೆನು.
ಕೀರ್ತನೆಗಳು 75 : 5 (OCVKN)
ನಿಮ್ಮ ಕೊಂಬನ್ನು ಪರಲೋಕದ ಕಡೆಗೆ ಎತ್ತಬೇಡಿರಿ. ಹಟಮಾರಿತನದಿಂದ ಮಾತನಾಡಬೇಡಿರಿ,” ಎಂದು ನೀವು ಹೇಳಿದ್ದೀರಿ.
ಕೀರ್ತನೆಗಳು 75 : 6 (OCVKN)
ಏಕೆಂದರೆ ಉದ್ಧಾರವು ಪೂರ್ವದಿಂದಲೂ ಪಶ್ಚಿಮದಿಂದಲೂ ಅಲ್ಲ, ಇಲ್ಲವೆ ದಕ್ಷಿಣದ ಮರುಭೂಮಿಯಿಂದಲೂ ಬರುವುದಿಲ್ಲ.
ಕೀರ್ತನೆಗಳು 75 : 7 (OCVKN)
ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ. ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ.
ಕೀರ್ತನೆಗಳು 75 : 8 (OCVKN)
ಯೆಹೋವ ದೇವರ ಕೈಯಲ್ಲಿ ಒಂದು ಪಾತ್ರೆಯು ಇದೆ. ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿ ಇದೆ. ಅದನ್ನು ಅವರು ಹೊಯ್ಯುತ್ತಾರೆ. ಅದರ ಮಡ್ಡಿಯನ್ನು ಸಹ ಭೂಮಿಯ ದುಷ್ಟರೆಲ್ಲರೂ ಹೀರಿಕೊಂಡು ಕುಡಿಯುವರು.
ಕೀರ್ತನೆಗಳು 75 : 9 (OCVKN)
ನಾನಾದರೋ ಸದಾ ವರ್ಣಿಸುವವನಾಗಿ ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುವೆನು.
ಕೀರ್ತನೆಗಳು 75 : 10 (OCVKN)
ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಹೋಗುವುದು. ಆದರೆ ನೀತಿವಂತನ ಕೊಂಬುಗಳು ಎತ್ತಲಾಗುವುದು.

1 2 3 4 5 6 7 8 9 10