ಕೀರ್ತನೆಗಳು 80 : 1 (OCVKN)
ಮಂದೆಯಂತೆ ಯೋಸೇಫ್ಯರನ್ನು ನಡೆಸುವ ಇಸ್ರಾಯೇಲರ ಕುರುಬ ಆಗಿರುವ ದೇವರೇ, ಕಿವಿಗೊಡಿರಿ. ಕೆರೂಬಿಗಳ ಮಧ್ಯದಲ್ಲಿ ಆಸೀನವಾಗಿರುವ ದೇವರೇ ಪ್ರಕಾಶಿಸಿರಿ.
ಕೀರ್ತನೆಗಳು 80 : 2 (OCVKN)
ಎಫ್ರಾಯೀಮ್, ಬೆನ್ಯಾಮೀನ್, ಮನಸ್ಸೆಯರ ಮುಂದೆ ನಿಮ್ಮ ಪರಾಕ್ರಮವನ್ನು ತೋರಿಸಲು ಬಂದು ನಮ್ಮನ್ನು ರಕ್ಷಿಸಿರಿ.
ಕೀರ್ತನೆಗಳು 80 : 3 (OCVKN)
ದೇವರೇ, ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.
ಕೀರ್ತನೆಗಳು 80 : 4 (OCVKN)
ಸರ್ವಶಕ್ತ ದೇವರಾಗಿರುವ ಯೆಹೋವ ದೇವರೇ, ಎಷ್ಟರವರೆಗೆ ನಿಮ್ಮ ಜನರ ಪ್ರಾರ್ಥನೆಗೆ ವಿರೋಧವಾಗಿ ಬೇಸರಗೊಳ್ಳುವಿರಿ?
ಕೀರ್ತನೆಗಳು 80 : 5 (OCVKN)
ರೋದನವೇ ನಮ್ಮ ಅನ್ನವಾಗುವಂತೆಯೂ ಅಶ್ರುಧಾರೆಯೇ ಪಾನವಾಗುವಂತೆಯೂ ಅನುಮತಿಸಿದ್ದೀರಿ.
ಕೀರ್ತನೆಗಳು 80 : 6 (OCVKN)
ನಮ್ಮ ನೆರೆಯವರ ವಿವಾದಕ್ಕೆ ನಮ್ಮನ್ನು ಗುರಿಮಾಡಿದ್ದೀರಿ. ನಮ್ಮ ಶತ್ರುಗಳು ನಮ್ಮನ್ನು ಅಪಹಾಸ್ಯ ಮಾಡುತ್ತಾರೆ.
ಕೀರ್ತನೆಗಳು 80 : 7 (OCVKN)
ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.
ಕೀರ್ತನೆಗಳು 80 : 8 (OCVKN)
ನೀವು ದ್ರಾಕ್ಷಾಲತೆಯನ್ನು ಈಜಿಪ್ಟಿನಿಂದ ತಂದು, ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿದ್ದೀರಿ.
ಕೀರ್ತನೆಗಳು 80 : 9 (OCVKN)
ಅದಕ್ಕಾಗಿ ಸ್ಥಳ ಸಿದ್ಧಮಾಡಿದಿರಿ. ಆಗ ಅದು ಬೇರೂರಿ ದೇಶವನ್ನು ತುಂಬಿತು.
ಕೀರ್ತನೆಗಳು 80 : 10 (OCVKN)
ಅದರ ನೆರಳಿನಿಂದ ಬೆಟ್ಟಗಳೂ ಅದರ ಕೊಂಬೆಗಳಿಂದ ದೇವದಾರುಗಳೂ ಮುಚ್ಚಲಾದವು.
ಕೀರ್ತನೆಗಳು 80 : 11 (OCVKN)
ಅದು ತನ್ನ ರೆಂಬೆಗಳನ್ನು ಸಮುದ್ರದವರೆಗೂ, ತನ್ನ ಬಳ್ಳಿಗಳನ್ನು ನದಿಯವರೆಗೂ ಹರಡಿಸಿತು.
ಕೀರ್ತನೆಗಳು 80 : 12 (OCVKN)
ಮಾರ್ಗದಲ್ಲಿ ಹಾದುಹೋಗುವವರೆಲ್ಲರು ಅದನ್ನು ಕೀಳುವ ಹಾಗೆ ಏಕೆ ಅದರ ಬೇಲಿಗಳನ್ನು ನೀವು ಮುರಿದುಬಿಟ್ಟಿದ್ದೀರಿ?
ಕೀರ್ತನೆಗಳು 80 : 13 (OCVKN)
ಅಡವಿಯಿಂದ ಬಂದ ಹಂದಿಗಳು ಅದನ್ನು ಹಾಳು ಮಾಡುತ್ತವೆ; ಕಾಡಿನ ಮೃಗಗಳು ಅದನ್ನು ತಿಂದು ಹಾಕುತ್ತವೆ.
ಕೀರ್ತನೆಗಳು 80 : 14 (OCVKN)
ಸೇನಾಧೀಶ್ವರ ದೇವರೇ, ನಿಮ್ಮ ದರ್ಶನವಾಗಲಿ. ನೀವು ಪರಲೋಕದಿಂದ ಕಟಾಕ್ಷಿಸಿರಿ. ಈ ದ್ರಾಕ್ಷಾಲತೆಯನ್ನು ಪರಾಮರಿಸಿರಿ.
ಕೀರ್ತನೆಗಳು 80 : 15 (OCVKN)
ನಿಮ್ಮ ಬಲಗೈ ನೆಟ್ಟ ಸಸಿಯನ್ನೂ ನೀವು ನಿಮಗೆ ಬೆಳಸಿಕೊಂಡ ಬಳ್ಳಿಯನ್ನೂ* ಬಳ್ಳಿಯನ್ನೂ ಇನ್ನೊಂದು ಅರ್ಥದಲ್ಲಿ ಮಗನು ಪರಾಮರಿಸಿರಿ.
ಕೀರ್ತನೆಗಳು 80 : 16 (OCVKN)
ನಿಮ್ಮ ದ್ರಾಕ್ಷಿಬಳ್ಳಿ ಕಡಿದು ಬೆಂಕಿಯಿಂದ ಸುಡಲಾಗಿದೆ. ನೀವು ಖಂಡಿಸಲು ನಿಮ್ಮ ಜನರು ಬಾಧಿತರಾಗಿ ಹೋಗುವರು.
ಕೀರ್ತನೆಗಳು 80 : 17 (OCVKN)
ನಿಮ್ಮ ಬಲಗಡೆಯಲ್ಲಿರುವಾತನ ಮೇಲೆ ನಿಮ್ಮ ಹಸ್ತವಿರಲಿ. ನಿಮಗಾಗಿ ಆ ನರಪುತ್ರನನ್ನು ಎಬ್ಬಿಸಿದ್ದೀರಿ.
ಕೀರ್ತನೆಗಳು 80 : 18 (OCVKN)
ಆಗ ನಾವು ನಿಮ್ಮಿಂದ ತೊಲಗುವುದಿಲ್ಲ. ನಮ್ಮನ್ನು ಉಜ್ಜೀವಿಸಿರಿ, ಆಗ ನಿಮ್ಮ ಹೆಸರನ್ನು ಕರೆಯುವೆವು.
ಕೀರ್ತನೆಗಳು 80 : 19 (OCVKN)
ಸರ್ವಶಕ್ತರಾದ ದೇವರೇ, ನೀವು ನಮ್ಮನ್ನು ಪುನಃ ಸ್ಥಾಪಿಸಿರಿ. ನಿಮ್ಮ ಮುಖ ನಮ್ಮ ಮೇಲೆ ಪ್ರಕಾಶಿಸುವಂತೆ ಮಾಡಿರಿ. ಆಗ ನಾವು ರಕ್ಷಣೆ ಹೊಂದುವೆವು.

1 2 3 4 5 6 7 8 9 10 11 12 13 14 15 16 17 18 19