ಕೀರ್ತನೆಗಳು 83 : 1 (OCVKN)
ದೇವರೇ, ಮೌನವಾಗಿರಬೇಡಿರಿ. ನಮ್ಮ ಕೂಗಿಗೆ ನಿಮ್ಮ ಪ್ರತಿಕ್ರಿಯೆ ನೀಡಿರಿ. ದೇವರೇ, ಸುಮ್ಮನಿರಬೇಡಿರಿ.
ಕೀರ್ತನೆಗಳು 83 : 2 (OCVKN)
ಏಕೆಂದರೆ ಇಗೋ, ನಿಮ್ಮ ಶತ್ರುಗಳು ಘೋಷಿಸುತ್ತಾರೆ. ನಿಮ್ಮ ವೈರಿಗಳು ತಲೆ ಎತ್ತುತ್ತಾರೆ.
ಕೀರ್ತನೆಗಳು 83 : 3 (OCVKN)
ನಿಮ್ಮ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿ ಕಲ್ಪಿಸುತ್ತಾರೆ. ನೀವು ಅಡಗಿಸಿಟ್ಟವರಿಗೆ ವಿರೋಧವಾಗಿ ಆಲೋಚಿಸಿಕೊಳ್ಳುತ್ತಾರೆ.
ಕೀರ್ತನೆಗಳು 83 : 4 (OCVKN)
ಅವರು, “ಬನ್ನಿರಿ, ರಾಷ್ಟ್ರವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲರ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ,” ಎನ್ನುತ್ತಾರೆ.
ಕೀರ್ತನೆಗಳು 83 : 5 (OCVKN)
ಅವರು ಏಕ ಮನಸ್ಕರಾಗಿ ಆಲೋಚನೆ ಮಾಡಿಕೊಂಡಿದ್ದಾರೆ. ನಿಮಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.
ಕೀರ್ತನೆಗಳು 83 : 6 (OCVKN)
ಎದೋಮ್ಯರ ಮತ್ತು ಇಷ್ಮಾಯೇಲ್ಯರ ಪಾಳೆಯದವರು ಮೋವಾಬ್ಯರು, ಹಗ್ರೀಯರು,
ಕೀರ್ತನೆಗಳು 83 : 7 (OCVKN)
ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಟೈರಿನವರು, ಫಿಲಿಷ್ಟಿಯರು,
ಕೀರ್ತನೆಗಳು 83 : 8 (OCVKN)
ಅಸ್ಸೀರಿಯರು ಎಲ್ಲರೂ ಅವರಲ್ಲಿ ಕೂಡಿಕೊಂಡಿರುವರು; ಅವರು ಲೋಟನ ಸಂತತಿಯವರಿಗೆ ಸಹಾಯಮಾಡಲು ಸಿದ್ಧರಾಗಿದ್ದಾರೆ.
ಕೀರ್ತನೆಗಳು 83 : 9 (OCVKN)
ಮಿದ್ಯಾನಿಗೂ ಸೀಸೆರನಿಗೂ ಯಾಬೀನನಿಗೂ ಕೀಷೋನ್ ಹಳ್ಳದಲ್ಲಿ ಮಾಡಿದ ಹಾಗೆ ಅವರಿಗೆ ಮಾಡಿರಿ.
ಕೀರ್ತನೆಗಳು 83 : 10 (OCVKN)
ಅವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.
ಕೀರ್ತನೆಗಳು 83 : 11 (OCVKN)
ಅವರನ್ನೂ, ಅವರ ಅಧಿಪತಿಗಳನ್ನೂ, ಓರೇಬ್ ಮತ್ತು ಜೇಬನ ಹಾಗೆಯೂ ಅವರ ಪ್ರಮುಖರೆಲ್ಲರನ್ನು ಜೆಬಹ ಮತ್ತು ಚಲ್ಮುನ್ನರ ಹಾಗೆಯೂ ಮಾಡಿರಿ.
ಕೀರ್ತನೆಗಳು 83 : 12 (OCVKN)
ಅವರು, “ನಾವು ದೇವರ ಹುಲ್ಲುಗಾವಲು ಪ್ರದೇಶಗಳನ್ನು ಸ್ವಾಧೀನ ಮಾಡಿಕೊಳ್ಳೋಣ,” ಅನ್ನುತ್ತಾರೆ.
ಕೀರ್ತನೆಗಳು 83 : 13 (OCVKN)
ನನ್ನ ದೇವರೇ, ಅವರನ್ನು ಚಕ್ರದ ಹಾಗೆಯೂ, ಗಾಳಿಯ ಮುಂದಿರುವ ಕಸದ ಹಾಗೆಯೂ ಮಾಡು.
ಕೀರ್ತನೆಗಳು 83 : 14 (OCVKN)
ಅಡವಿ ಸುಡುವ ಬೆಂಕಿಯ ಹಾಗೆಯೂ, ಬೆಟ್ಟಗಳನ್ನು ದಹಿಸುವ ಜ್ವಾಲೆಯ ಹಾಗೆಯೂ
ಕೀರ್ತನೆಗಳು 83 : 15 (OCVKN)
ನಿಮ್ಮ ಬಿರುಗಾಳಿಯಿಂದ ಅವರನ್ನು ಹಿಂಸಿಸಿ, ನಿಮ್ಮ ಸುಳಿಗಾಳಿಯಿಂದ ಅವರನ್ನು ತಲ್ಲಣ ಪಡಿಸಿರಿ.
ಕೀರ್ತನೆಗಳು 83 : 16 (OCVKN)
ಯೆಹೋವ ದೇವರೇ, ನಿಮ್ಮ ನಾಮವನ್ನು ಅವರು ಹುಡುಕುವಂತೆ ಅವರ ಮುಖಗಳನ್ನು ನಾಚಿಕೆಯಿಂದ ತುಂಬಿಸಿರಿ.
ಕೀರ್ತನೆಗಳು 83 : 17 (OCVKN)
ಅವರು ನಾಚಿಕೆಪಟ್ಟು ಕಳವಳಗೊಳ್ಳಲಿ. ಹೌದು, ಅವರು ಲಜ್ಜೆಪಟ್ಟು ನಾಶವಾಗಲಿ.
ಕೀರ್ತನೆಗಳು 83 : 18 (OCVKN)
ಯೆಹೋವ ದೇವರು ಎಂಬ ಹೆಸರುಳ್ಳ ನೀವು ಮಾತ್ರವೇ ಸಮಸ್ತ ಭೂಮಿಯ ಮೇಲೆ ಮಹೋನ್ನತರಾಗಿದ್ದೀರಿ ಎಂದು ಅವರು ತಿಳಿದುಕೊಳ್ಳಲಿ.
❮
❯
1
2
3
4
5
6
7
8
9
10
11
12
13
14
15
16
17
18