ಕೀರ್ತನೆಗಳು 84 : 1 (OCVKN)
ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ!
ಕೀರ್ತನೆಗಳು 84 : 2 (OCVKN)
ಯೆಹೋವ ದೇವರ ಅಂಗಳಗಳಲ್ಲಿ ಸೇರಲು ನನ್ನ ಪ್ರಾಣವು ಬಯಸಿ ಕುಂದುತ್ತದೆ. ನನ್ನ ಹೃದಯವೂ, ನನ್ನ ಶರೀರವೂ ಜೀವವುಳ್ಳ ದೇವರಿಗಾಗಿ ಕೂಗಿಕೊಳ್ಳುತ್ತದೆ.
ಕೀರ್ತನೆಗಳು 84 : 3 (OCVKN)
ಓ ಸೇನಾಧೀಶ್ವರ ಯೆಹೋವ ದೇವರೇ, ನನ್ನ ಅರಸರಾಗಿರುವವರೇ, ನನ್ನ ದೇವರೇ, ಗುಬ್ಬಿಯು ಮನೆಯನ್ನೂ, ಬಾನಕ್ಕಿಯು ತನ್ನ ಮರಿಗಳನ್ನಿಡುವ ಗೂಡನ್ನೂ ನಿಮ್ಮ ಬಲಿಪೀಠಗಳ ಬಳಿಯಲ್ಲಿ ದೊರಕಿತಲ್ಲಾ.
ಕೀರ್ತನೆಗಳು 84 : 4 (OCVKN)
ನಿಮ್ಮ ಆಲಯದಲ್ಲಿ ವಾಸವಾಗಿರುವವರು ಧನ್ಯರು; ನಿಮ್ಮನ್ನು ಅವರು ಯಾವಾಗಲೂ ಸ್ತುತಿಸುವರು.
ಕೀರ್ತನೆಗಳು 84 : 5 (OCVKN)
ನಿಮ್ಮಲ್ಲಿ ಯಾರು ಬಲಹೊಂದಿರುವರೋ, ಯಾರು ಯಾತ್ರಿಗಳಾಗಿದ್ದಾರೋ ಅವರು ಧನ್ಯರು.
ಕೀರ್ತನೆಗಳು 84 : 6 (OCVKN)
ಬಾಕಾ* ಬಾಕಾ ಇದು ಒಂದು ಬಗ್ಗೆ ಮರುಭೂಮಿಯಲ್ಲಿ ಬೆಳೆಯುವ ಗಿಡ ಮತ್ತು ಕೆಲವು ಪ್ರತಿಗಳಲ್ಲಿ ಕಣ್ಣೀರು ಎಂದು ಅರ್ಥ ತಗ್ಗನ್ನು ದಾಟುವಾಗ ಅವರು ಅದನ್ನು ಬುಗ್ಗೆಯಾಗಿ ಮಾಡುತ್ತಾರೆ. ಮುಂಗಾರು ಮಳೆಯು ಕೊಳಗಳನ್ನು ತುಂಬುತ್ತದೆ.
ಕೀರ್ತನೆಗಳು 84 : 7 (OCVKN)
ಅವರು ಬಲದಿಂದ ಬಲಕ್ಕೆ ಸಾಗಿ, ಚೀಯೋನಿನಲ್ಲಿ ದೇವರ ಮುಂದೆ ಕಾಣಿಸಿಕೊಳ್ಳುತ್ತಾರೆ.
ಕೀರ್ತನೆಗಳು 84 : 8 (OCVKN)
ಸರ್ವಶಕ್ತರಾದ ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ. ಯಾಕೋಬನ ದೇವರೇ, ಕಿವಿಗೊಡಿರಿ.
ಕೀರ್ತನೆಗಳು 84 : 9 (OCVKN)
ನಮ್ಮ ಗುರಾಣಿಯಾಗಿರುವ ದೇವರೇ, ನೋಡಿರಿ. ನಿಮ್ಮ ಅಭಿಷಿಕ್ತನ ಮುಖವನ್ನು ದೃಷ್ಟಿಸಿ ನೋಡಿರಿ.
ಕೀರ್ತನೆಗಳು 84 : 10 (OCVKN)
ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.
ಕೀರ್ತನೆಗಳು 84 : 11 (OCVKN)
ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.
ಕೀರ್ತನೆಗಳು 84 : 12 (OCVKN)
ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮಲ್ಲಿ ಭರವಸವಿಡುವವನೇ ಭಾಗ್ಯವಂತನು.

1 2 3 4 5 6 7 8 9 10 11 12