ಕೀರ್ತನೆಗಳು 9 : 1 (OCVKN)
ಯೆಹೋವ ದೇವರೇ, ನನ್ನ ಪೂರ್ಣಹೃದಯದಿಂದ ನಾನು ನಿಮ್ಮನ್ನು ಸ್ತುತಿಸುವೆನು; ನಿಮ್ಮ ಅದ್ಭುತ ಕಾರ್ಯಗಳನ್ನೆಲ್ಲಾ ನಾನು ವರ್ಣಿಸುವೆನು.
ಕೀರ್ತನೆಗಳು 9 : 2 (OCVKN)
ನಾನು ನಿಮ್ಮಲ್ಲಿ ಆನಂದಿಸಿ ಉಲ್ಲಾಸಪಡುವೆನು; ಮಹೋನ್ನತರೇ, ನಾನು ನಿಮ್ಮ ಹೆಸರನ್ನು ಕೊಂಡಾಡಿ ಹಾಡುವೆನು.
ಕೀರ್ತನೆಗಳು 9 : 3 (OCVKN)
ನನ್ನ ಶತ್ರುಗಳು ಹಿಂದಿರುಗಿ ಓಡುವರು; ಅವರು ನಿಮ್ಮ ಮುಂದೆ ಎಡವಿಬಿದ್ದು ನಾಶವಾಗುವರು.
ಕೀರ್ತನೆಗಳು 9 : 4 (OCVKN)
ನೀವು ನನ್ನ ನ್ಯಾಯವನ್ನೂ ವ್ಯಾಜ್ಯವನ್ನೂ ತೀರಿಸಲು ನೀತಿಯುಳ್ಳ ನ್ಯಾಯಾಧಿಪತಿಯಾಗಿ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೀರಿ.
ಕೀರ್ತನೆಗಳು 9 : 5 (OCVKN)
ರಾಷ್ಟ್ರಗಳನ್ನು ಖಂಡಿಸಿ ದುಷ್ಟರನ್ನು ದಂಡಿಸಿದ್ದೀರಿ; ಅವರ ಹೆಸರನ್ನು ಯುಗಯುಗಾಂತರಗಳವರೆಗೂ ಅಳಿಸಿಬಿಟ್ಟಿದ್ದೀರಿ.
ಕೀರ್ತನೆಗಳು 9 : 6 (OCVKN)
ವೈರಿಯನ್ನು ವಿನಾಶವು ನಿರಂತರವಾಗಿ ಬೆನ್ನಟ್ಟಿದೆ, ನೀವು ಅವರ ಪಟ್ಟಣಗಳನ್ನು ಕೆಡವಿದ್ದೀರಿ; ಅವರ ಸ್ಮರಣೆಯು ಅವರೊಂದಿಗೇ ನಾಶವಾಯಿತು.
ಕೀರ್ತನೆಗಳು 9 : 7 (OCVKN)
ಯೆಹೋವ ದೇವರು ಸದಾ ಆಳುವವರು; ಅವರು ನ್ಯಾಯಕ್ಕಾಗಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ.
ಕೀರ್ತನೆಗಳು 9 : 8 (OCVKN)
ಅವರು ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವರು; ಪ್ರಜೆಗಳಿಗೆ ಯಥಾರ್ಥವಾದ ತೀರ್ಪು ನೀಡುವರು.
ಕೀರ್ತನೆಗಳು 9 : 9 (OCVKN)
ಯೆಹೋವ ದೇವರು ಕುಗ್ಗಿದವರಿಗೆ ಆಶ್ರಯವಾಗಿರುವರು, ಇಕ್ಕಟ್ಟಿನ ದಿವಸಗಳಲ್ಲಿ ಭದ್ರಕೋಟೆಯಾಗಿರುವರು.
ಕೀರ್ತನೆಗಳು 9 : 10 (OCVKN)
ನಿಮ್ಮ ಹೆಸರನ್ನು ತಿಳಿದವರು ನಿಮ್ಮಲ್ಲಿ ಭರವಸೆ ಇಡುವರು, ಏಕೆಂದರೆ ಯೆಹೋವ ದೇವರೇ, ನಿಮ್ಮನ್ನು ಹುಡುಕುವವರನ್ನು ನೀವು ಎಂದಿಗೂ ತೊರೆದುಬಿಡುವುದಿಲ್ಲ.
ಕೀರ್ತನೆಗಳು 9 : 11 (OCVKN)
ಚೀಯೋನಿನಲ್ಲಿ ವಾಸಿಸುವ ಯೆಹೋವ ದೇವರಿಗೆ ಸ್ತುತಿಹಾಡಿರಿ; ಅವರ ಕ್ರಿಯೆಗಳನ್ನು ರಾಷ್ಟ್ರಗಳಲ್ಲಿ ಸಾರಿ ಹೇಳಿರಿ.
ಕೀರ್ತನೆಗಳು 9 : 12 (OCVKN)
ಅವರು ಪ್ರಾಣಹತ್ಯೆ ಮಾಡುವವರನ್ನು ಮುಯ್ಯಿತೀರಿಸಲು ಜ್ಞಾಪಕಮಾಡಿಕೊಳ್ಳುವರು; ಬಾಧೆಗೆ ಒಳಗಾಗಿರುವ ದೀನರ ಕೂಗನ್ನು ಅವರು ಅಲಕ್ಷ್ಯಮಾಡುವುದಿಲ್ಲ.
ಕೀರ್ತನೆಗಳು 9 : 13 (OCVKN)
ಯೆಹೋವ ದೇವರೇ, ನನ್ನ ವೈರಿಗಳು ನನ್ನನ್ನು ಹಿಂಸಿಸುವುದನ್ನು ನೋಡಿರಿ. ನನ್ನನ್ನು ಕರುಣಿಸಿ, ಮರಣ ದ್ವಾರದಿಂದ ನನ್ನನ್ನು ಮೇಲಕ್ಕೆತ್ತಿರಿ.
ಕೀರ್ತನೆಗಳು 9 : 14 (OCVKN)
ಆಗ ಚೀಯೋನೆಂಬ ನಗರ ದ್ವಾರಗಳಲ್ಲಿ ನಿಮ್ಮ ಸ್ತುತಿಯನ್ನು ಸಾರುವೆನು. ನಿಮ್ಮ ರಕ್ಷಣೆಯಲ್ಲಿ ಆನಂದಿಸುವೆನು.
ಕೀರ್ತನೆಗಳು 9 : 15 (OCVKN)
ರಾಷ್ಟ್ರಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲೇ ಅವರ ಕಾಲುಗಳು ಸಿಕ್ಕಿಕೊಂಡಿವೆ.
ಕೀರ್ತನೆಗಳು 9 : 16 (OCVKN)
ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.
ಕೀರ್ತನೆಗಳು 9 : 17 (OCVKN)
ದುಷ್ಟರು ಪಾತಾಳಕ್ಕೆ ತಿರುಗುವರು, ದೇವರನ್ನು ಮರೆಯುವ ರಾಷ್ಟ್ರಗಳ ಅಂತ್ಯವೂ ಹಾಗೇ ಇರುವುದು.
ಕೀರ್ತನೆಗಳು 9 : 18 (OCVKN)
ಆದರೆ ದೇವರು ಬಡವರನ್ನು ಎಂದೆಂದಿಗೂ ಮರೆಯುವುದಿಲ್ಲ; ಕುಗ್ಗಿದವರ ನಿರೀಕ್ಷೆ ಎಂದೆಂದಿಗೂ ನಾಶವಾಗುವುದಿಲ್ಲ.
ಕೀರ್ತನೆಗಳು 9 : 19 (OCVKN)
ಯೆಹೋವ ದೇವರೇ ಎದ್ದೇಳಿರಿ, ಮನುಷ್ಯರು ನನ್ನ ಮೇಲೆ ವಿಜಯ ಸಾಧಿಸದಿರಲಿ; ರಾಷ್ಟ್ರಗಳಿಗೆ ನಿಮ್ಮ ಮುಂದೆಯೇ ನ್ಯಾಯತೀರ್ಪಾಗಲಿ.
ಕೀರ್ತನೆಗಳು 9 : 20 (OCVKN)
ಯೆಹೋವ ದೇವರೇ, ಅವರನ್ನು ಭಯದಲ್ಲಿರಿಸಿರಿ; ರಾಷ್ಟ್ರಗಳು ತಾವು ಮನುಷ್ಯರೇ ಎಂದು ತಿಳಿದುಕೊಳ್ಳಲಿ.
❮
❯
1
2
3
4
5
6
7
8
9
10
11
12
13
14
15
16
17
18
19
20