ಕೀರ್ತನೆಗಳು 94 : 1 (OCVKN)
ಯೆಹೋವ ದೇವರೇ, ನೀವು ಪ್ರತೀಕಾರ ಸಲ್ಲಿಸುವ ದೇವರಾಗಿದ್ದೀರಿ. ಮುಯ್ಯಿ ತೀರಿಸುವವರು ನೀವೇ; ದೇವರೇ, ನ್ಯಾಯ ತೀರಿಸುವಂತೆ ನಿಮ್ಮನ್ನು ಪ್ರಕಟಿಸಿಕೊಳ್ಳಿರಿ.
ಕೀರ್ತನೆಗಳು 94 : 2 (OCVKN)
ಭೂಲೋಕದ ನ್ಯಾಯಾಧಿಪತಿಯೇ, ಗರ್ವಿಷ್ಠರಿಗೆ ತಕ್ಕ ಪ್ರತೀಕಾರವನ್ನು ಸಲ್ಲಿಸ ಬನ್ನಿರಿ.
ಕೀರ್ತನೆಗಳು 94 : 3 (OCVKN)
ಯೆಹೋವ ದೇವರೇ, ಎಲ್ಲಿಯವರೆಗೆ? ದುಷ್ಟರು ಎಷ್ಟರವರೆಗೆ ಹಿಗ್ಗುತ್ತಿರಬೇಕು?
ಕೀರ್ತನೆಗಳು 94 : 4 (OCVKN)
ಕೆಡುಕರು ಉಬ್ಬಿಕೊಂಡು ಮಾತನಾಡುತ್ತಾರೆ. ಕೇಡು ಮಾಡುವವರೆಲ್ಲರೂ ಕೊಚ್ಚಿಕೊಳ್ಳುತ್ತಾರೆ.
ಕೀರ್ತನೆಗಳು 94 : 5 (OCVKN)
ಯೆಹೋವ ದೇವರೇ, ನಿಮ್ಮ ಜನರನ್ನು ಅವರು ಕುಗ್ಗಿಸುತ್ತಾರೆ. ನಿಮ್ಮ ಬಾಧ್ಯತೆಯನ್ನು ಬಾಧಿಸುತ್ತಾರೆ.
ಕೀರ್ತನೆಗಳು 94 : 6 (OCVKN)
ವಿಧವೆಯನ್ನೂ ಪರದೇಶಸ್ಥನನ್ನೂ ಅವರು ಹತ್ಯಮಾಡುತ್ತಾರೆ. ದಿಕ್ಕಿಲ್ಲದವರನ್ನು ಹತಮಾಡುತ್ತಾರೆ.
ಕೀರ್ತನೆಗಳು 94 : 7 (OCVKN)
“ಯೆಹೋವ ದೇವರು ನೋಡುವುದಿಲ್ಲ, ಯಾಕೋಬನ ದೇವರು ಗ್ರಹಿಸುವುದಿಲ್ಲ,” ಎಂದು ಅವರು ಹೇಳುತ್ತಾರೆ.
ಕೀರ್ತನೆಗಳು 94 : 8 (OCVKN)
ಜನರಲ್ಲಿ ಬುದ್ಧಿಹೀನರೇ, ನೀವು ಗ್ರಹಿಸಿರಿ. ಮೂರ್ಖರೇ, ಯಾವಾಗ ಬುದ್ಧಿವಂತರಾಗುವಿರಿ?
ಕೀರ್ತನೆಗಳು 94 : 9 (OCVKN)
ಕಿವಿಯನ್ನು ನಿರ್ಮಿಸಿದ ದೇವರು ಕೇಳದಿರುವರೇ? ಕಣ್ಣನ್ನು ರೂಪಿಸಿದವರು ನೋಡುವುದಿಲ್ಲವೇ?
ಕೀರ್ತನೆಗಳು 94 : 10 (OCVKN)
ರಾಷ್ಟ್ರಗಳಿಗೆ ಶಿಕ್ಷಣ ಕೊಡುವ ದೇವರು ಶಿಕ್ಷಿಸುವುದಿಲ್ಲವೋ? ಮಾನವನಿಗೆ ಕಲಿಸುವ ದೇವರಲ್ಲಿ ಜ್ಞಾನದ ಕೊರತೆಯಿದೆಯೋ?
ಕೀರ್ತನೆಗಳು 94 : 11 (OCVKN)
ಮನುಷ್ಯನ ಯೋಚನೆಗಳು ವ್ಯರ್ಥವಾದವುಗಳೆಂದು ಯೆಹೋವ ದೇವರು ತಿಳಿದುಕೊಳ್ಳುತ್ತಾರೆ.
ಕೀರ್ತನೆಗಳು 94 : 12 (OCVKN)
ಯೆಹೋವ ದೇವರೇ, ನೀವು ಯಾರನ್ನು ಶಿಕ್ಷಿಸುವಿರೋ ಅಂಥವರು ಧನ್ಯರು. ನಿಮ್ಮ ನಿಯಮದಿಂದ ಯಾರಿಗೆ ಕಲಿಸಿಕೊಡುವಿರೋ ಅವರು ಧನ್ಯರು.
ಕೀರ್ತನೆಗಳು 94 : 13 (OCVKN)
ದುಷ್ಟನಿಗಾಗಿ ಕುಣಿಯು ಅಗಿಯುವವರೆಗೆ ಅಂಥವನಿಗೆ ವಿಶ್ರಾಂತಿಯನ್ನು ಕೊಡುವಿರಿ.
ಕೀರ್ತನೆಗಳು 94 : 14 (OCVKN)
ಯೆಹೋವ ದೇವರು ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ತಮ್ಮ ಬಾಧ್ಯತೆಯಾಗಿರುವವರನ್ನು ಎಂದೂ ಮರೆಯುವುದಿಲ್ಲ.
ಕೀರ್ತನೆಗಳು 94 : 15 (OCVKN)
ನ್ಯಾಯ ನಿಯಮವು ನೀತಿಯ ಮೇಲೆ ಅವಲಂಬಿಸಿರುವುದು; ಯಥಾರ್ಥ ಹೃದಯದವರೆಲ್ಲರೂ ಅದನ್ನು ಹಿಂಬಾಲಿಸುವರು.
ಕೀರ್ತನೆಗಳು 94 : 16 (OCVKN)
ನನಗೋಸ್ಕರ ದುರ್ಮಾರ್ಗಿಗಳಿಗೆ ವಿರೋಧವಾಗಿ ಏಳುವವನ್ಯಾರು? ಅಪರಾಧ ಮಾಡುವವರಿಗೆ ವಿರೋಧವಾಗಿ ನನಗೋಸ್ಕರ ನಿಂತು ಕೊಳ್ಳುವವನ್ಯಾರು?
ಕೀರ್ತನೆಗಳು 94 : 17 (OCVKN)
ಯೆಹೋವ ದೇವರು ನನಗೆ ಸಹಾಯ ಕೊಡದಿದ್ದರೆ, ನಾನು ಬೇಗನೇ ಮರಣದ ಮೌನದಲ್ಲಿ ವಾಸಿಸುತ್ತಿದ್ದೆನು.
ಕೀರ್ತನೆಗಳು 94 : 18 (OCVKN)
“ನನ್ನ ಕಾಲು ಜಾರುತ್ತಿದೆ,” ಎಂದು ನಾನು ಹೇಳುತ್ತಿರುವಾಗಲೇ, ಯೆಹೋವ ದೇವರೇ, ನಿಮ್ಮ ಪ್ರೀತಿಯು ನನ್ನನ್ನು ಎತ್ತಿ ಹಿಡಿಯಿತು.
ಕೀರ್ತನೆಗಳು 94 : 19 (OCVKN)
ನನ್ನ ಚಿಂತೆಗಳು ನನ್ನೊಳಗೆ ಹೆಚ್ಚುತ್ತಿರುವಾಗ, ನಿಮ್ಮ ಸಂತೈಸುವಿಕೆಯು ನನ್ನ ಮನಸ್ಸನ್ನು ಆನಂದಪಡಿಸುತ್ತದೆ.
ಕೀರ್ತನೆಗಳು 94 : 20 (OCVKN)
ತೀರ್ಪುಗಳಿಂದ ಕೇಡನ್ನು ಕಲ್ಪಿಸುವ ಅಪರಾಧದ ನ್ಯಾಯಾಸನವು ನಿಮ್ಮ ಸಂಗಡ ಅನ್ಯೋನ್ಯವಾಗಿರುವುದೋ?
ಕೀರ್ತನೆಗಳು 94 : 21 (OCVKN)
ನೀತಿವಂತನ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ಅವರ ನಿರಪರಾಧಿಗಳನ್ನು ಮರಣಕ್ಕೆ ಒಪ್ಪಿಸುತ್ತಾರೆ.
ಕೀರ್ತನೆಗಳು 94 : 22 (OCVKN)
ಆದರೆ ಯೆಹೋವ ದೇವರು ನನಗೆ ದುರ್ಗವೂ, ನನ್ನ ದೇವರೂ, ನನ್ನ ಆಶ್ರಯದ ಬಂಡೆಯೂ ಆಗಿದ್ದಾರೆ.
ಕೀರ್ತನೆಗಳು 94 : 23 (OCVKN)
ವೈರಿಯ ಅಪರಾಧವು ಅವರ ಮೇಲೆಯೇ ತಿರುಗಿ ಬೀಳಲಿ; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಯೆಹೋವ ದೇವರು ಅವರನ್ನು ಸಂಹರಿಸಿ ಬಿಡುವನು.

1 2 3 4 5 6 7 8 9 10 11 12 13 14 15 16 17 18 19 20 21 22 23