ಕೀರ್ತನೆಗಳು 95 : 1 (OCVKN)
ಬನ್ನಿರಿ, ಯೆಹೋವ ದೇವರಿಗೆ ಉತ್ಸಾಹ ಗೀತೆಯನ್ನು ಹಾಡೋಣ; ನಮ್ಮ ರಕ್ಷಣೆಯ ಬಂಡೆಯಾಗಿರುವ ದೇವರಿಗೆ ಜಯಧ್ವನಿ ಮಾಡೋಣ.
ಕೀರ್ತನೆಗಳು 95 : 2 (OCVKN)
ಧನ್ಯವಾದದೊಡನೆ ಅವರ ಸನ್ನಿಧಿಯಲ್ಲಿ ಮುಂದೆ ಬಂದು ಕೀರ್ತನೆಗಳಿಂದ ಅವರಿಗೆ ಜಯಧ್ವನಿ ಮಾಡೋಣ.
ಕೀರ್ತನೆಗಳು 95 : 3 (OCVKN)
ಯೆಹೋವ ದೇವರು ಮಹಾ ದೇವರು, ಎಲ್ಲಾ ದೇವರುಗಳ ಮೇಲೆ ಮಹಾರಾಜರೂ ಆಗಿದ್ದಾರೆ.
ಕೀರ್ತನೆಗಳು 95 : 4 (OCVKN)
ಅವರ ಕೈಯಲ್ಲಿ ಭೂಮಿಯ ಆಳವಾದ ಸ್ಥಳಗಳು ಇವೆ; ಬೆಟ್ಟಗಳ ಬಲವು ಅವರದೇ.
ಕೀರ್ತನೆಗಳು 95 : 5 (OCVKN)
ಸಮುದ್ರವು ಅವರಿಗೆ ಸೇರಿದ್ದು; ಅವರು ಅದನ್ನು ಸೃಷ್ಟಿಸಿದರು; ಅವರ ಕೈಗಳು ಒಣ ಭೂಮಿಯನ್ನು ರೂಪಿಸಿದವು.
ಕೀರ್ತನೆಗಳು 95 : 6 (OCVKN)
ಬನ್ನಿರಿ, ಆರಾಧಿಸೋಣ; ನಮ್ಮನ್ನು ಸೃಷ್ಟಿಸಿದ ಯೆಹೋವ ದೇವರ ಮುಂದೆ ಮೊಣಕಾಲು ಊರೋಣ.
ಕೀರ್ತನೆಗಳು 95 : 7 (OCVKN)
ಅವರು ನಮ್ಮ ದೇವರು; ನಾವು ಅವರ ಹುಲ್ಲುಗಾವಲಿನ ಪ್ರಜೆಗಳಾಗಿದ್ದೇವೆ, ನಾವು ಅವರು ಪರಿಪಾಲಿಸುವ ಮಂದೆಯೂ ಆಗಿದ್ದೇವೆ. ನೀವು ಈ ಹೊತ್ತು ಅವರ ಸ್ವರಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೆಯದು.
ಕೀರ್ತನೆಗಳು 95 : 8 (OCVKN)
“ನೀವು ಮೆರೀಬದಲ್ಲಿ* ಮೆರೀಬ ಅಂದರೆ ಜಗಳ ಎಂದು ಅರ್ಥ. ನೋಡಿರಿ ವಿಮೋ 17:7; ಅರಣ್ಯ 17:7 ಮಾಡಿದಂತೆ, ಹೌದು, ಅಂದು ನೀವು ಮರುಭೂಮಿಯ ಮಸ್ಸಾ † ಮಸ್ಸಾ ಅಂದರೆ ಪರೀಕ್ಷೆ. ನೋಡಿರಿ ವಿಮೋ 17:7; ಅರಣ್ಯ 17:7 ಎಂಬ ಸ್ಥಳದಲ್ಲಿ ಮಾಡಿದಂತೆ, ನಿಮ್ಮ ಹೃದಯವನ್ನು ಕಠಿಣಪಡಿಸಬೇಡಿರಿ.
ಕೀರ್ತನೆಗಳು 95 : 9 (OCVKN)
ನಾನು ಮಾಡಿದ್ದನ್ನು ಕಂಡಿದ್ದರೂ, ಅಲ್ಲಿ ನಿಮ್ಮ ಪಿತೃಗಳು ನನ್ನನ್ನು ಶೋಧಿಸಿ, ನನ್ನನ್ನು ಪರೀಕ್ಷಿಸಿದರು.
ಕೀರ್ತನೆಗಳು 95 : 10 (OCVKN)
ನಾಲ್ವತ್ತು ವರ್ಷ ಆ ಸಂತತಿಗೆ ಬೇಸರಗೊಂಡು, ‘ಇವರು ತಮ್ಮ ಹೃದಯದಲ್ಲಿ ತಪ್ಪಿಹೋಗುವ ಜನರಾಗಿದ್ದಾರೆ, ನನ್ನ ಮಾರ್ಗಗಳನ್ನು ಇವರು ಅರಿಯರು,’ ಎಂದೆನು.
ಕೀರ್ತನೆಗಳು 95 : 11 (OCVKN)
ಆದ್ದರಿಂದ, ‘ಅವರು ನನ್ನ ವಿಶ್ರಾಂತಿಯಲ್ಲಿ ಸೇರುವುದೇ ಇಲ್ಲ,’ ” ಎಂದು ನಾನು ಅಸಂತೋಷದಿಂದ ಆಣೆ ಇಟ್ಟುಕೊಂಡೆನು.
❮
❯