ಪ್ರಕಟನೆ 10 : 1 (OCVKN)
ದೇವದೂತನೂ ಮತ್ತು ಚಿಕ್ಕ ಸುರುಳಿಯೂ ಆಗ ನಾನು ಮತ್ತೊಬ್ಬ ಬಲಿಷ್ಠನಾದ ದೇವದೂತನು ಪರಲೋಕದಿಂದ ಇಳಿದು ಬರುವುದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು. ಅವನ ತಲೆಯ ಮೇಲೆ ಮುಗಿಲ ಬಿಲ್ಲು ಇತ್ತು. ಅವನ ಮುಖವು ಸೂರ್ಯನಂತಿದ್ದು, ಅವನ ಕಾಲುಗಳು ಅಗ್ನಿಸ್ತಂಭಗಳಂತಿದ್ದವು.
ಪ್ರಕಟನೆ 10 : 2 (OCVKN)
ಅವನು ತನ್ನ ಕೈಯಲ್ಲಿ ತೆರೆದಿದ್ದ ಒಂದು ಚಿಕ್ಕ ಸುರುಳಿಯನ್ನು ಹಿಡಿದುಕೊಂಡಿದ್ದನು. ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೂ ತನ್ನ ಎಡಗಾಲನ್ನು ಭೂಮಿಯ ಮೇಲೂ ಇಟ್ಟುಕೊಂಡು,
ಪ್ರಕಟನೆ 10 : 3 (OCVKN)
ಸಿಂಹದ ಘರ್ಜನೆಯಂತೆ ಮಹಾ ಸ್ವರದಿಂದ ಕೂಗಿದನು. ಅವನು ಕೂಗಿದಾಗ, ಏಳು ಗುಡುಗುಗಳು ಮಾತನಾಡಿದವು.
ಪ್ರಕಟನೆ 10 : 4 (OCVKN)
ಏಳು ಗುಡುಗುಗಳು ಮಾತನಾಡಿದಾಗ, ನಾನು ಬರೆಯಬೇಕೆಂದಿದ್ದೆನು. ಆದರೆ ಪರಲೋಕದಿಂದ ಬಂದ ಶಬ್ದವು, “ನೀನು ಆ ಏಳು ಗುಡುಗುಗಳು ಹೇಳಿರುವುದನ್ನು ಮುದ್ರೆಹಾಕಿ ಮುಚ್ಚಿಡು. ಅದನ್ನು ಬರೆಯಬೇಡ,” ಎಂದು ಹೇಳುವುದನ್ನು ಕೇಳಿದೆನು.
ಪ್ರಕಟನೆ 10 : 5 (OCVKN)
ಆಗ ಸಮುದ್ರದ ಮೇಲೂ ಭೂಮಿಯ ಮೇಲೂ ನಿಂತಿರುವ ದೇವದೂತನು ತನ್ನ ಬಲಗೈಯನ್ನು ಪರಲೋಕದ ಕಡೆಗೆ ಎತ್ತಿ,
ಪ್ರಕಟನೆ 10 : 6 (OCVKN)
ಯುಗಯುಗಾಂತರಕ್ಕೂ ಜೀವಿಸುವವರೂ ಪರಲೋಕವನ್ನೂ ಅದರಲ್ಲಿರುವವುಗಳನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವವುಗಳನ್ನೂ ಸೃಷ್ಟಿಸಿದವರ ಮೇಲೆ ಆಣೆ ಇಟ್ಟು ಹೇಳಿದ್ದೇನೆಂದರೆ, “ಇನ್ನು ಆಲಸ್ಯವಾಗುವುದಿಲ್ಲ!
ಪ್ರಕಟನೆ 10 : 7 (OCVKN)
ಆದರೆ ಏಳನೆಯ ದೇವದೂತನು ತನ್ನ ತುತೂರಿಯನ್ನು ಊದಬೇಕೆಂದಿರುವ ದಿನಗಳಲ್ಲಿ ದೇವರು ತನ್ನ ಸೇವಕರಾದ ಪ್ರವಾದಿಗಳಿಗೆ ಪ್ರಕಟಿಸಿದಂತೆಯೇ, ದೇವರ ರಹಸ್ಯವು ನೆರವೇರುವುದು.”
ಪ್ರಕಟನೆ 10 : 8 (OCVKN)
ಪ್ರಕಟನೆ 10 : 9 (OCVKN)
ಆಗ ಪರಲೋಕದಿಂದ ನಾನು ಕೇಳಿದ್ದ ಧ್ವನಿಯು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತಿರುವ ದೇವದೂತನ ಕೈಯಲ್ಲಿರುವ ತೆರೆದ ಸುರುಳಿಯನ್ನು ತೆಗೆದುಕೋ,” ಎಂದು ಹೇಳಿತು. ಆಗ ನಾನು ದೇವದೂತನ ಬಳಿ ಹೋಗಿ, ಅವನನ್ನು, ಆ ಚಿಕ್ಕ ಸುರುಳಿಯನ್ನು ಕೊಡುವಂತೆ ಕೇಳಿದೆನು. ಅವನು ನನಗೆ, “ಇದನ್ನು ತೆಗೆದುಕೊಂಡು ತಿನ್ನು. ಅದು ನಿನ್ನ ಹೊಟ್ಟೆಯಲ್ಲಿ ಕಹಿಯಾಗಿರುವುದು. ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವುದು,”* ಯೆಹೆ 3:3 ಎಂದು ಹೇಳಿದನು.
ಪ್ರಕಟನೆ 10 : 10 (OCVKN)
ನಾನು ದೇವದೂತನ ಕೈಯಿಂದ ಆ ಚಿಕ್ಕ ಸುರುಳಿಯನ್ನು ತೆಗೆದುಕೊಂಡು ತಿಂದೆನು. ಇದರ ರುಚಿಯು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು, ಆದರೆ ನಾನು ಅದನ್ನು ತಿಂದಾಗ, ನನ್ನ ಹೊಟ್ಟೆ ಕಹಿಯಾಯಿತು.
ಪ್ರಕಟನೆ 10 : 11 (OCVKN)
ಆಗ ನನಗೆ, “ನೀನು ಅನೇಕ ಪ್ರಜೆ, ರಾಷ್ಟ್ರ, ಜನಾಂಗ, ಭಾಷೆ ಮತ್ತು ಅರಸರ ಮುಂದೆ ಪುನಃ ಪ್ರವಾದಿಸಬೇಕು,” ಎಂದು ಹೇಳಲಾಯಿತು.

1 2 3 4 5 6 7 8 9 10 11