ಪ್ರಕಟನೆ 13 : 1 (OCVKN)
ಸಮುದ್ರದಿಂದ ಹೊರಬಂದ ಮೃಗ ಘಟಸರ್ಪವು ಸಮುದ್ರತೀರದ ಮರಳಿನ ಮೇಲೆ ನಿಂತನು. ಸಮುದ್ರದೊಳಗೆ ಒಂದು ಮೃಗವು ಏರಿಬರುವುದನ್ನು ಕಂಡೆನು. ಅದಕ್ಕೆ ಹತ್ತು ಕೊಂಬುಗಳೂ ಏಳು ತಲೆಗಳೂ ಕೊಂಬುಗಳ ಮೇಲೆ ಹತ್ತು ಮುಕುಟಗಳೂ ತಲೆಗಳ ಮೇಲೆ ದೇವದೂಷಣೆಯ ನಾಮಗಳೂ ಇದ್ದವು.
ಪ್ರಕಟನೆ 13 : 2 (OCVKN)
ನಾನು ಕಂಡ ಮೃಗವು ಚಿರತೆಯಂತಿತ್ತು. ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು. ಅದಕ್ಕೆ ಘಟಸರ್ಪನು ತನ್ನ ಶಕ್ತಿಯನ್ನೂ ಸಿಂಹಾಸನವನ್ನೂ ಮಹಾ ಅಧಿಕಾರವನ್ನೂ ಕೊಟ್ಟನು.
ಪ್ರಕಟನೆ 13 : 3 (OCVKN)
ಮೃಗದ ತಲೆಗಳಲ್ಲಿ ಒಂದು ಮರಣಾಂತಿಕ ಗಾಯ ಹೊಂದಿದಂತಿರುವುದನ್ನು ನೋಡಿದೆನು. ಆದರೆ ಆ ಮರಣಕರವಾದ ಗಾಯವು ವಾಸಿಯಾಯಿತು. ಭೂಲೋಕವೆಲ್ಲಾ ಆ ಮೃಗವನ್ನು ಕಾಣುತ್ತಾ ಆಶ್ಚರ್ಯಪಟ್ಟಿತು.
ಪ್ರಕಟನೆ 13 : 4 (OCVKN)
ಜನರು ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟಿದ್ದರಿಂದ, ಆ ಘಟಸರ್ಪನನ್ನು ಆರಾಧಿಸಿದರು. ಇದಲ್ಲದೆ ಆ ಮೃಗವನ್ನೂ ಆರಾಧಿಸಿ, “ಈ ಮೃಗಕ್ಕೆ ಸಮಾನರು ಯಾರು? ಇದರೊಡನೆ ಯುದ್ಧಮಾಡಬಲ್ಲವರು ಯಾರು?” ಎಂದರು.
ಪ್ರಕಟನೆ 13 : 5 (OCVKN)
ಆ ಮೃಗಕ್ಕೆ ಬಡಾಯಿ ಮಾತುಗಳನ್ನೂ ದೂಷಣೆಯ ಮಾತುಗಳನ್ನೂ ಆಡುವ ಬಾಯಿ ಕೊಡಲಾಯಿತು. ನಲವತ್ತೆರಡು ತಿಂಗಳುಗಳವರೆಗೆ ಕಾರ್ಯಸಾಧಿಸುವ ಅಧಿಕಾರವನ್ನೂ ಅದಕ್ಕೆ ಕೊಡಲಾಯಿತು.
ಪ್ರಕಟನೆ 13 : 6 (OCVKN)
ಆ ಮೃಗವು ತನ್ನ ಬಾಯಿತೆರೆದು, ದೇವರಿಗೆ ವಿರುದ್ಧವಾಗಿ ದೂಷಿಸಿ, ಅವರ ನಾಮವನ್ನೂ ಅವರ ನಿವಾಸವನ್ನೂ ಮತ್ತು ಪರಲೋಕ ನಿವಾಸಿಗಳನ್ನೂ ದೂಷಿಸಿತು.
ಪ್ರಕಟನೆ 13 : 7 (OCVKN)
ಇದಲ್ಲದೆ ಅದಕ್ಕೆ ಪರಿಶುದ್ಧರ ಮೇಲೆ ಯುದ್ಧಮಾಡಿ, ಅವರನ್ನು ಜಯಿಸುವುದಕ್ಕೆ ಬಲವು ಕೊಡಲಾಯಿತು ಮತ್ತು ಸಕಲ ಕುಲ, ಪ್ರಜೆ, ಭಾಷೆ, ರಾಷ್ಟ್ರಗಳ ಮೇಲೆ ಅದಕ್ಕೆ ಅಧಿಕಾರವು ಸಹ ಕೊಡಲಾಯಿತು.
ಪ್ರಕಟನೆ 13 : 8 (OCVKN)
ಜಗದುತ್ಪತ್ತಿಗೆ ಮೊದಲೇ ಕೊಯ್ಯಲಾದ ಕುರಿಮರಿಯವರ ಜೀವಗ್ರಂಥದಲ್ಲಿ ಯಾರ‍್ಯಾರ ಹೆಸರುಗಳು ಬರೆದಿರುವುದಿಲ್ಲವೋ, ಆ ಭೂನಿವಾಸಿಗಳೆಲ್ಲರೂ ಆ ಮೃಗವನ್ನು ಆರಾಧಿಸುವರು.
ಪ್ರಕಟನೆ 13 : 10 (OCVKN)
ಕಿವಿಯುಳ್ಳವನು ಕೇಳಲಿ. “ಸೆರೆಹಿಡಿಯುವವನು ತಾನೇ ಸೆರೆಯಾಗಿ ಹೋಗುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲೆಯಾಗುವನು.”* ಯೆರೆ 15:2 ಇದರಲ್ಲಿ ದೇವಜನರ ಸೈರಣೆಯೂ ನಂಬಿಕೆಯೂ ಇವೆ.
ಪ್ರಕಟನೆ 13 : 11 (OCVKN)
ಭೂಮಿಯೊಳಗಿಂದ ಬಂದ ಮೃಗ ಮತ್ತೊಂದು ಮೃಗವು ಭೂಮಿಯೊಳಗಿಂದ ಬರುವುದನ್ನು ಕಂಡೆನು. ಅದಕ್ಕೆ ಕುರಿಮರಿಗಿರುವಂತೆ ಎರಡು ಕೊಂಬುಗಳಿದ್ದವು ಆದರೆ ಘಟಸರ್ಪದಂತೆ ಮಾತನಾಡಿತು.
ಪ್ರಕಟನೆ 13 : 12 (OCVKN)
ಇದು ಮೊದಲನೆಯ ಮೃಗದ ಅಧಿಕಾರವನ್ನೆಲ್ಲಾ ಅದರ ಎದುರಿನಲ್ಲಿ ಚಲಾಯಿಸಿತು. ಇದು ಮರಣಕರವಾದ ಗಾಯದಿಂದ ವಾಸಿಯಾದ ಮೊದಲನೆಯ ಮೃಗವನ್ನು ಭೂಲೋಕವೂ ಭೂನಿವಾಸಿಗಳೂ ಆರಾಧಿಸುವಂತೆ ಮಾಡಿತು.
ಪ್ರಕಟನೆ 13 : 13 (OCVKN)
ಎರಡನೆಯ ಮೃಗವೂ ಮಹಾಸೂಚಕಕಾರ್ಯಗಳನ್ನು ನಡೆಸಿತು ಮತ್ತು ಜನರ ಮುಂದೆ ಬೆಂಕಿ ಆಕಾಶದಿಂದ ಭೂಮಿಗೆ ಬೀಳುವಂತೆ ಮಾಡಿತು.
ಪ್ರಕಟನೆ 13 : 14 (OCVKN)
ಆ ಮೊದಲನೆಯ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವನ್ನು ಕೊಡಲಾಗಿದ್ದರಿಂದ ಭೂನಿವಾಸಿಗಳನ್ನು ಮೋಸಗೊಳಿಸುತ್ತದೆ. ಭೂಮಿಯ ಮೇಲೆ ವಾಸಿಸುವವರು, ಕತ್ತಿಯಿಂದ ಗಾಯಹೊಂದಿ, ಸಾಯದೆ ಬದುಕಿದ ಮೃಗದ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಹೇಳುತ್ತದೆ.
ಪ್ರಕಟನೆ 13 : 15 (OCVKN)
ಆ ಮೃಗದ ವಿಗ್ರಹಕ್ಕೆ ಜೀವಕೊಡುವ ಸಾಮರ್ಥ್ಯವು ಕೊಡಲಾಗಿದ್ದರಿಂದ, ಆ ವಿಗ್ರಹವು ಮಾತನಾಡುವಂತೆಯೂ ತನ್ನನ್ನು ಆರಾಧನೆ ಮಾಡದವರನ್ನು ಕೊಲ್ಲುವಂತೆಯೂ ಮಾಡುತ್ತದೆ.
ಪ್ರಕಟನೆ 13 : 16 (OCVKN)
ಅದು ಚಿಕ್ಕವರು, ದೊಡ್ಡವರು, ಐಶ್ವರ್ಯವಂತರು, ಬಡವರು, ಸ್ವತಂತ್ರರು, ಗುಲಾಮರು, ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ, ಹಣೆಯ ಮೇಲಾಗಲಿ ಗುರುತು ಹೊಂದಬೇಕೆಂದೂ
ಪ್ರಕಟನೆ 13 : 17 (OCVKN)
ಆ ಗುರುತಾಗಲಿ, ಮೃಗದ ಹೆಸರಾಗಲಿ, ಅದರ ಹೆಸರಿನ ಸಂಖ್ಯೆಯಾಗಲಿ ಇಲ್ಲದವನು ಕ್ರಯ ವಿಕ್ರಯಗಳನ್ನು ಮಾಡದಂತೆಯೂ ಅದು ಮಾಡುವುದು.
ಪ್ರಕಟನೆ 13 : 18 (OCVKN)
ಇದರಲ್ಲಿ ಜ್ಞಾನವಿದೆ. ಬುದ್ಧಿಯುಳ್ಳವನು ಆ ಮೃಗದ ಸಂಖ್ಯೆಯನ್ನು ಎಣಿಸಲಿ, ಅದು ಒಬ್ಬ ಮನುಷ್ಯನ ಸಂಖ್ಯೆಯಾಗಿದೆ. ಅವನ ಸಂಖ್ಯೆಯು 666
❮
❯
1
2
3
4
5
6
7
8
9
10
11
12
13
14
15
16
17
18