ಪ್ರಕಟನೆ 15 : 1 (OCVKN)
ಏಳುಮಂದಿ ದೂತರು, ಏಳು ಉಪದ್ರವಗಳು ನಾನು ಪರಲೋಕದಲ್ಲಿ ಆಶ್ಚರ್ಯಕರವಾದ ಮತ್ತೊಂದು ಮಹಾ ಚಿಹ್ನೆಯನ್ನು ಕಂಡೆನು. ಏಳುಮಂದಿ ದೂತರಲ್ಲಿ ಕಡೆಯ ಏಳು ಉಪದ್ರವಗಳಿದ್ದವು. ಏಕೆಂದರೆ, ಅವುಗಳಲ್ಲಿ ದೇವರ ಕೋಪವು ಸಂಪೂರ್ಣವಾಗುವುದು.
ಪ್ರಕಟನೆ 15 : 2 (OCVKN)
ನನಗೆ ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಒಂದು ಕಾಣಿಸಿತು. ಆಗ ಮೃಗದ ಮೇಲೆಯೂ ಅದರ ವಿಗ್ರಹದ ಮೇಲೆಯೂ ಅದರ ಹೆಸರಿನ ಸಂಖ್ಯೆಯ ಮೇಲೆಯೂ ಜಯಹೊಂದಿದವರು ದೇವರ ಕಿನ್ನರಿಗಳನ್ನು ಕೈಯಲ್ಲಿ ಹಿಡಿದುಕೊಂಡು, ಗಾಜಿನ ಸಮುದ್ರದ ಮೇಲೆ ನಿಂತುಕೊಂಡು,
ಪ್ರಕಟನೆ 15 : 3 (OCVKN)
ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.
ಪ್ರಕಟನೆ 15 : 4 (OCVKN)
ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,”* ಕೀರ್ತನೆ 111:2,3; ಧರ್ಮೋ 32:4; ಯೆರೆ 10:7; ಕೀರ್ತನೆ 86:9; 98:2 ಎಂದು ಹೇಳಿದರು.
ಪ್ರಕಟನೆ 15 : 5 (OCVKN)
ಇದಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿರುವ ಸಾಕ್ಷಿಯ ಗುಡಾರದ ದೇವಾಲಯವು ತೆರೆದಿರುವುದನ್ನು ಕಂಡೆನು.
ಪ್ರಕಟನೆ 15 : 6 (OCVKN)
ಆ ದೇವಾಲಯದೊಳಗಿಂದ ಏಳು ಉಪದ್ರವಗಳನ್ನು ಹಿಡಿದು, ಆ ಏಳು ದೇವದೂತರು ಬಂದರು. ಅವರು ಪ್ರಕಾಶಮಯವಾದ ಶುಭ್ರವಾದ ನಾರುಮಡಿಯನ್ನು ಧರಿಸಿಕೊಂಡಿದ್ದರು. ತಮ್ಮ ಎದೆಗಳಿಗೆ ಚಿನ್ನದ ಪಟ್ಟಿಯನ್ನು ಕಟ್ಟಿಕೊಂಡಿದ್ದರು.
ಪ್ರಕಟನೆ 15 : 7 (OCVKN)
ನಾಲ್ಕು ಜೀವಿಗಳಲ್ಲಿ ಒಂದು, ಆ ಏಳು ದೂತರಿಗೆ, ಯುಗಯುಗಾಂತರಗಳಲ್ಲಿಯೂ ಜೀವಿಸುವವರಾದ ದೇವರ ಕೋಪದಿಂದ ತುಂಬಿದ್ದ ಏಳು ಚಿನ್ನದ ಬೋಗುಣಿಗಳನ್ನು ಕೊಟ್ಟಿತು.
ಪ್ರಕಟನೆ 15 : 8 (OCVKN)
ದೇವರ ಮಹಿಮೆಯಿಂದಲೂ ಅವರ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ದೇವಾಲಯವು ಆವರಿಸಿದ ಕಾರಣ, ಆ ಏಳುಮಂದಿ ದೇವದೂತರ ಏಳು ಉಪದ್ರವಗಳು ತೀರುವ ತನಕ, ಆ ದೇವಾಲಯದೊಳಗೆ ಪ್ರವೇಶಿಸುವುದಕ್ಕೆ ಯಾರಿಗೂ ಆಗಲಿಲ್ಲ.

1 2 3 4 5 6 7 8