ಪ್ರಕಟನೆ 2 : 1 (OCVKN)
ಎಫೆಸದ ಸಭೆಯವರಿಗೆ “ನೀನು ಎಫೆಸದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು, ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವವರು ಹೇಳುವುದೇನೆಂದರೆ:
ಪ್ರಕಟನೆ 2 : 2 (OCVKN)
2 ನಾನು ನಿನ್ನ ಕ್ರಿಯೆಗಳನ್ನು ಬಲ್ಲೆನು. ಪ್ರಯಾಸ, ಸಹನೆಯನ್ನು ಬಲ್ಲೆನು. ನೀನು ದುಷ್ಟರನ್ನು ಸಹಿಸಲಾರೆ. ಅಪೊಸ್ತಲರಲ್ಲದಿದ್ದರೂ ತಮ್ಮನ್ನು ಅಪೊಸ್ತಲರೆಂದು ಹೇಳಿಕೊಳ್ಳುವವರನ್ನು ನೀನು ಪರೀಕ್ಷಿಸಿ, ಅವರನ್ನು ಸುಳ್ಳುಗಾರರೆಂದು ಕಂಡುಕೊಂಡಿರುವೆ.
ಪ್ರಕಟನೆ 2 : 3 (OCVKN)
ನೀನು ತಾಳ್ಮೆಯಿಂದ ನನ್ನ ಹೆಸರಿನ ನಿಮಿತ್ತ ಬಾಧೆಯನ್ನು ಸಹಿಸಿಕೊಂಡು ಬೇಸರಗೊಳ್ಳಲಿಲ್ಲ.
ಪ್ರಕಟನೆ 2 : 4 (OCVKN)
ಆದರೂ ನೀನು ನಿನ್ನ ಮೊದಲಿನ ಪ್ರೀತಿಯನ್ನು ಬಿಟ್ಟುಬಿಟ್ಟಿದ್ದೀ ಎಂದು ನಿನ್ನ ವಿರುದ್ಧವಾಗಿ ಹೇಳುತ್ತೇನೆ.
ಪ್ರಕಟನೆ 2 : 5 (OCVKN)
ಆದ್ದರಿಂದ ನೀನು ಎಲ್ಲಿಂದ ಬಿದ್ದಿದ್ದೀಯೋ, ಅದನ್ನು ಜ್ಞಾಪಿಸಿಕೊಂಡು ಪಶ್ಚಾತ್ತಾಪಪಡು. ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನಿನ್ನ ಮನಸ್ಸು ಪರಿವರ್ತನೆ ಹೊಂದದಿದ್ದರೆ, ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದುಹಾಕುವೆನು.
ಪ್ರಕಟನೆ 2 : 6 (OCVKN)
ಆದರೆ ನಿನ್ನಲ್ಲಿ ಒಳ್ಳೆಯದು ಒಂದುಂಟು. ಅದೇನೆಂದರೆ ನಾನು ಹಗೆ ಮಾಡುವ ನಿಕೊಲಾಯಿತರ ಕೃತ್ಯಗಳನ್ನು ನೀನೂ ಸಹ ಹಗೆ ಮಾಡುತ್ತೀ.
ಪ್ರಕಟನೆ 2 : 7 (OCVKN)
ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ* ಅಥವಾ ಸಂತೋಷಕರವಾದ ಸ್ಥಳ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.
ಪ್ರಕಟನೆ 2 : 8 (OCVKN)
ಸ್ಮುರ್ನದಲ್ಲಿರುವ ಸಭೆಗೆ “ಸ್ಮುರ್ನದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಮೊದಲನೆಯವರೂ ಕೊನೆಯವರೂ ಮರಣಹೊಂದಿ, ಜೀವಂತವಾಗಿ ಎದ್ದು ಬಂದವರು ಹೇಳುವುದೇನೆಂದರೆ:
ಪ್ರಕಟನೆ 2 : 9 (OCVKN)
9 ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ.
ಪ್ರಕಟನೆ 2 : 10 (OCVKN)
ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.
ಪ್ರಕಟನೆ 2 : 11 (OCVKN)
ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.
ಪ್ರಕಟನೆ 2 : 12 (OCVKN)
ಪೆರ್ಗಮದಲ್ಲಿರುವ ಸಭೆಗೆ “ಪೆರ್ಗಮದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಹರಿತವಾದ ಇಬ್ಬಾಯಿಕತ್ತಿಯನ್ನು ಹಿಡಿದವರು ಹೇಳುವುದೇನೆಂದರೆ:
ಪ್ರಕಟನೆ 2 : 13 (OCVKN)
13 ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.
ಪ್ರಕಟನೆ 2 : 14 (OCVKN)
ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.
ಪ್ರಕಟನೆ 2 : 15 (OCVKN)
ಹಾಗೆಯೇ, ನಿಕೊಲಾಯಿತರ ಬೋಧನೆಯನ್ನು ಹಿಡಿದುಕೊಂಡಿರುವವರೂ ನಿನ್ನಲ್ಲಿದ್ದಾರೆ.
ಪ್ರಕಟನೆ 2 : 16 (OCVKN)
ಆದ್ದರಿಂದ ನೀನು ದೇವರ ಕಡೆಗೆ ತಿರುಗಿಕೋ! ಇಲ್ಲದಿದ್ದರೆ ನಾನು ಶೀಘ್ರವೇ ನಿನ್ನ ಬಳಿಗೆ ಬಂದು ನನ್ನ ಇಬ್ಬಾಯಿ ಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.
ಪ್ರಕಟನೆ 2 : 17 (OCVKN)
ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.
ಪ್ರಕಟನೆ 2 : 18 (OCVKN)
ಥುವತೈರದ ಸಭೆಗೆ “ಥುವತೈರದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಬೆಂಕಿಯ ಜ್ವಾಲೆಯಂತಿರುವ ಕಣ್ಣುಗಳೂ ಹೊಳೆಯುವ ತಾಮ್ರದಂತಿರುವ ಪಾದಗಳುಳ್ಳ ದೇವಪುತ್ರ ಆಗಿರುವವರು ಹೇಳುವುದೇನೆಂದರೆ:
ಪ್ರಕಟನೆ 2 : 19 (OCVKN)
19 ನಾನು ನಿನ್ನ ಕ್ರಿಯೆಗಳನ್ನೂ ನಿನ್ನ ಪ್ರೀತಿಯನ್ನೂ ನಂಬಿಕೆಯನ್ನೂ ಸೇವೆಯನ್ನೂ ಮತ್ತು ತಾಳ್ಮೆಯನ್ನೂ ಬಲ್ಲೆನು. ನೀನು ಮೊದಲು ಮಾಡಿದ್ದಕ್ಕಿಂತಲೂ ಈಗ ಹೆಚ್ಚಾಗಿ ಮಾಡುತ್ತಿರುವೆ.
ಪ್ರಕಟನೆ 2 : 20 (OCVKN)
ಆದರೆ ನಿನ್ನ ಮೇಲೆ ಒಂದು ತಪ್ಪು ಹೊರಿಸಬೇಕಾಗುತ್ತದೆ. ಅದೇನೆಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ವ್ಯಭಿಚಾರ ಮಾಡಬಹುದೆಂದೂ ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಬಿಟ್ಟಿರುವುದು.
ಪ್ರಕಟನೆ 2 : 21 (OCVKN)
ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು. ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ವ್ಯಭಿಚಾರವನ್ನು ಬಿಟ್ಟುಬಿಡಲು ಅವಳಿಗೆ ಮನಸ್ಸಿಲ್ಲ.
ಪ್ರಕಟನೆ 2 : 22 (OCVKN)
ಇಗೋ, ಅವಳು ಹಾಸಿಗೆಯಲ್ಲಿ ಬಾಧೆಯಿಂದ ಬಿದ್ದುಕೊಂಡಿರುವಂತೆ ಮಾಡುವೆನು ಮತ್ತು ಅವಳೊಂದಿಗೆ ವ್ಯಭಿಚಾರ ಮಾಡುವವರು ತಮ್ಮ ಹೃದಯದಲ್ಲೂ ಮನಸ್ಸಿನಲ್ಲೂ ಪಶ್ಚಾತ್ತಾಪಪಟ್ಟು ತಮ್ಮ ಕೃತ್ಯಗಳನ್ನು ಬಿಟ್ಟುಬಿಡದೆ ಹೋದರೆ, ಮಹಾ ಸಂಕಟದಲ್ಲಿ ಬೀಳುವಂತೆ ಮಾಡುವೆನು.
ಪ್ರಕಟನೆ 2 : 23 (OCVKN)
ಅವಳ ಮಕ್ಕಳನ್ನು ಮರಣಕ್ಕೆ ಒಪ್ಪಿಸುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ತಿಳಿದುಬರುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.
ಪ್ರಕಟನೆ 2 : 24 (OCVKN)
ಥುವತೈರದಲ್ಲಿರುವ ಉಳಿದವರಿಗೆ ನಾನು ಹೇಳುವುದೇನಂದರೆ: ಅವಳ ಬೋಧನೆಯನ್ನು ನೀವು ಅವಲಂಬಿಸಲಿಲ್ಲ. ಸೈತಾನನ ಆಳವಾದ ರಹಸ್ಯ ಬೋಧನೆಗಳು ಎಂದು ಹೇಳುವ ಬೋಧನೆಯನ್ನು ನೀವು ಅವಲಂಬಿಸಲಿಲ್ಲ.
ಪ್ರಕಟನೆ 2 : 25 (OCVKN)
ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಬೇಕೆಂಬ ಅಪ್ಪಣೆಯನ್ನೇ ಹೊರತು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲವೆಂಬುದೇ.
ಪ್ರಕಟನೆ 2 : 26 (OCVKN)
ಯಾರು ಜಯಶಾಲಿಯಾಗಿದ್ದು, ನನ್ನ ಚಿತ್ತವನ್ನು ಅಂತ್ಯದವರೆಗೂ ಯಾರು ನಡೆಸುತ್ತಾರೋ, ಅವರಿಗೆ ನಾನು ರಾಷ್ಟ್ರಗಳ ಮೇಲೆ ಅಧಿಕಾರವನ್ನು ನೀಡುವೆನು.
ಪ್ರಕಟನೆ 2 : 27 (OCVKN)
ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ, ‘ಅವರು ಕಬ್ಬಿಣದ ಕೋಲಿನಿಂದ ರಾಷ್ಟ್ರಗಳನ್ನು ಆಳುವರು. ಮಣ್ಣಿನ ಮಡಿಕೆಗಳು ಒಡೆಯುವಂತೆ ಬಲ ಮುರಿದು ಹೋಗುವುದು.’ ಕೀರ್ತನೆ 2:9
ಪ್ರಕಟನೆ 2 : 28 (OCVKN)
ನಾನು ಅಂಥವರಿಗೆ ಉದಯಸೂಚಕ ತಾರೆಯನ್ನು ಅವರಿಗೆ ಕೊಡುವೆನು.
ಪ್ರಕಟನೆ 2 : 29 (OCVKN)
ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕೇಳಲು ಇಷ್ಟ ಉಳ್ಳವರು ಕೇಳಲಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29