ಪ್ರಕಟನೆ 4 : 1 (OCVKN)
ಪರಲೋಕದಲ್ಲಿರುವ ಸಿಂಹಾಸನ ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.
ಪ್ರಕಟನೆ 4 : 2 (OCVKN)
ಕೂಡಲೇ ನಾನು ಆತ್ಮವಶನಾದೆನು. ಆಗ ನನ್ನೆದುರಿನಲ್ಲಿ ಪರಲೋಕದಲ್ಲಿ ಒಂದು ಸಿಂಹಾಸನವಿತ್ತು. ಸಿಂಹಾಸನದ ಮೇಲೆ ಒಬ್ಬರು ಕುಳಿತಿದ್ದರು.
ಪ್ರಕಟನೆ 4 : 3 (OCVKN)
ಆಸೀನರಾದವರು ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದರು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆಬಿಲ್ಲು ಹೊಳೆಯುತ್ತಿತ್ತು.
ಪ್ರಕಟನೆ 4 : 4 (OCVKN)
ಇದಲ್ಲದೆ ಸಿಂಹಾಸನದ ಸುತ್ತ ಇತರ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಬಿಳಿವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಬಂಗಾರದ ಕಿರೀಟಗಳಿದ್ದವು.
ಪ್ರಕಟನೆ 4 : 5 (OCVKN)
ಸಿಂಹಾಸನದೊಳಗಿಂದ ಮಿಂಚುಗಳೂ ವಾಣಿಗಳೂ ಗುಡುಗುಗಳೂ ಹರಡಿದವು. ಸಿಂಹಾಸನದ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಬೆಳಗುತ್ತಿದ್ದವು.
ಪ್ರಕಟನೆ 4 : 6 (OCVKN)
ಇದಲ್ಲದೆ ಸಿಂಹಾಸನದ ಮುಂದೆ ಸ್ಪಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ, ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.
ಪ್ರಕಟನೆ 4 : 7 (OCVKN)
ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯದು ಮನುಷ್ಯನಂತಿತ್ತು, ನಾಲ್ಕನೆಯದು ಹಾರುವ ಹದ್ದಿನಂತಿತ್ತು.
ಪ್ರಕಟನೆ 4 : 8 (OCVKN)
ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಆ ಜೀವಿಗಳ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ ಹೀಗೆ ಹೇಳುತ್ತಿದ್ದವು: “ ‘ದೇವರು ಆಗಿರುವ ಕರ್ತ ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು, ಅವರು ಸರ್ವಶಕ್ತರು,’* ಯೆಶಾಯ 6:3 ಗತಕಾಲ, ವರ್ತಮಾನ ಭವಿಷ್ಯತ್ಕಾಲಗಳಲ್ಲಿ ಇರುವವರು.”
ಪ್ರಕಟನೆ 4 : 9 (OCVKN)
9 ಯುಗಯುಗಾಂತರಗಳಲ್ಲಿಯೂ ಜೀವಿಸುವವರಾಗಿ, ಸಿಂಹಾಸನದ ಮೇಲೆ ಆಸೀನರಾದವರಿಗೆ ಆ ನಾಲ್ಕು ಜೀವಿಗಳು ಮಹಿಮೆ, ಮಾನ, ಕೃತಜ್ಞತಾ ಸ್ತುತಿಗಳನ್ನು ಸಲ್ಲಿಸುವಾಗ,
ಪ್ರಕಟನೆ 4 : 10 (OCVKN)
ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ,
ಪ್ರಕಟನೆ 4 : 11 (OCVKN)
“ನಮ್ಮ ಕರ್ತ ಆಗಿರುವ ದೇವರೇ, ನೀವು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ಸಮಸ್ತವನ್ನು ಸೃಷ್ಟಿಸಿದವರು ನೀವೇ. ಎಲ್ಲವೂ ನಿಮ್ಮ ಚಿತ್ತದಿಂದಲೇ ನಿರ್ಮಿತವಾದವು, ನಿಮ್ಮ ಚಿತ್ತದಿಂದಲೇ ಇದ್ದವು,” ಎಂದು ಹೇಳುತ್ತಾ, ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಿದ್ದರು.

1 2 3 4 5 6 7 8 9 10 11