ಪ್ರಕಟನೆ 9 : 1 (OCVKN)
ಐದನೆಯ ದೇವದೂತನು ತನ್ನ ತುತೂರಿಯನ್ನು ಊದಲು; ಆಕಾಶದಿಂದ ಒಂದು ನಕ್ಷತ್ರವು ಭೂಮಿಗೆ ಬಿದ್ದದ್ದನ್ನು ಕಂಡೆನು. ಅದಕ್ಕೆ ಪಾತಾಳ ಸುರಂಗದ ಬೀಗದ ಕೈ ಕೊಡಲಾಗಿತ್ತು.
ಪ್ರಕಟನೆ 9 : 2 (OCVKN)
ಆತನು ಆ ಪಾತಾಳವನ್ನು ತೆರೆಯಲು, ಅದರೊಳಗಿಂದ ಹೊಗೆಯು ಮಹಾ ಕುಲುಮೆಯಿಂದ ಬರುವ ಹೊಗೆಯಂತೆ ಏರಿತು. ಪಾತಾಳದ ಆ ಹೊಗೆಯಿಂದ ಸೂರ್ಯ ಮತ್ತು ಆಕಾಶಕ್ಕೆ ಕತ್ತಲು ಕವಿಯಿತು.
ಪ್ರಕಟನೆ 9 : 3 (OCVKN)
ಆ ಹೊಗೆಯೊಳಗಿಂದ ಮಿಡತೆಗಳು ಭೂಮಿಯ ಮೇಲೆ ಬಂದವು. ಅವುಗಳಿಗೆ ಭೂಮಿಯ ಮೇಲಿನ ಚೇಳುಗಳಿಗೆ ಇರುವಂತೆ ಶಕ್ತಿಯನ್ನು ಕೊಡಲಾಗಿತ್ತು.
ಪ್ರಕಟನೆ 9 : 4 (OCVKN)
ಅವುಗಳಿಗೆ ಹಣೆಯ ಮೇಲೆ ದೇವರ ಮುದ್ರೆಯನ್ನು ಹಾಕಿಸಿಕೊಳ್ಳದ ಮನುಷ್ಯರನ್ನು ಬಿಟ್ಟು, ಭೂಮಿಯ ಮೇಲಿನ ಹುಲ್ಲು ಅಥವಾ ಯಾವುದೇ ಪಲ್ಯ ಅಥವಾ ಮರ, ಈ ಯಾವುದಕ್ಕೂ ತೊಂದರೆ ಕೊಡಬಾರದೆಂಬುದಾಗಿ ಹೇಳಲಾಯಿತು.
ಪ್ರಕಟನೆ 9 : 5 (OCVKN)
ಅವುಗಳು ಅವರನ್ನು ಕೊಲ್ಲದೆ, ಐದು ತಿಂಗಳುಗಳವರೆಗೆ ಯಾತನೆಪಡಿಸುವುದಕ್ಕೆ ಅಧಿಕಾರ ಕೊಡಲಾಯಿತು. ಅವರ ಯಾತನೆಯು, ಚೇಳು ತನ್ನ ಕೊಂಡಿಯಿಂದ ಮನುಷ್ಯರನ್ನು ಕುಟುಕಿಹಾಕಿದಾಗ ಆಗುವ ನೋವಿನಂತಿತ್ತು.
ಪ್ರಕಟನೆ 9 : 6 (OCVKN)
ಆ ದಿನಗಳಲ್ಲಿ ಜನರು ಮರಣವನ್ನು ಹುಡುಕುವರು, ಆದರೆ ಅದನ್ನು ಯಾವ ರೀತಿಯಿಂದಲೂ ಕಾಣರು; ಅವರು ಸಾಯಲು ಹಾರೈಸುವರು, ಆದರೆ ಮರಣವು ಅವರಿಂದ ಓಡಿ ಹೋಗುವುದು.
ಪ್ರಕಟನೆ 9 : 7 (OCVKN)
ಆ ಮಿಡತೆಗಳು ಯುದ್ಧಕ್ಕೆ ಸನ್ನದ್ಧವಾದ ಕುದುರೆಗಳಂತಿದ್ದವು. ಅವುಗಳ ತಲೆಯ ಮೇಲೆ ಚಿನ್ನದಂತಿರುವ ಕಿರೀಟಗಳಿದ್ದವು. ಅವುಗಳ ಮುಖವು ಮಾನವರ ಮುಖಗಳಂತೆ ಇದ್ದವು.
ಪ್ರಕಟನೆ 9 : 8 (OCVKN)
ಅವುಗಳ ಕೂದಲು ಸ್ತ್ರೀಯರ ಕೂದಲಿನಂತಿದ್ದು, ಅವುಗಳಿಗೆ ಸಿಂಹಗಳಿಗಿದ್ದಂತೆ ಹಲ್ಲುಗಳಿದ್ದವು.
ಪ್ರಕಟನೆ 9 : 9 (OCVKN)
ಅವುಗಳಿಗೆ ಕಬ್ಬಿಣದ ಕವಚದಂಥ ಕವಚಗಳಿದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ಅನೇಕ ರಥಾಶ್ವಗಳಂತಿತ್ತು.
ಪ್ರಕಟನೆ 9 : 10 (OCVKN)
ಅವುಗಳಿಗೆ ಚೇಳಿನಂತೆ ಬಾಲವೂ ಕೊಂಡಿಯೂ ಇದ್ದವು. ಅವುಗಳಿಗೆ ಮನುಷ್ಯರನ್ನು ಐದು ತಿಂಗಳುಗಳ ಕಾಲ ತಮ್ಮ ಬಾಲಗಳಿಂದ ಬಾಧಿಸುವ ಸಾಮರ್ಥ್ಯವಿತ್ತು.
ಪ್ರಕಟನೆ 9 : 11 (OCVKN)
ಹೀಬ್ರೂ ಭಾಷೆಯಲ್ಲಿ, ಅಬದ್ದೋನ್ ಎಂದೂ ಗ್ರೀಕ್ ಭಾಷೆಯಲ್ಲಿ, ಅಪೊಲ್ಲುವೋನ್* ಅಥವಾ ನಾಶಕ ಎಂಬ ಹೆಸರಿನ ಪಾತಾಳ ಲೋಕದ ದೂತನು ಅವರ ಅರಸನು.
ಪ್ರಕಟನೆ 9 : 12 (OCVKN)
ಪ್ರಕಟನೆ 9 : 13 (OCVKN)
ಮೊದಲನೆಯ ವಿಪತ್ತು ಕಳೆದುಹೋಯಿತು; ಇಗೋ, ಇವುಗಳ ನಂತರ ಇನ್ನೂ ಎರಡು ವಿಪತ್ತುಗಳು ಬರಲಿವೆ. ಆರನೆಯ ದೇವದೂತನು ತನ್ನ ತುತೂರಿಯನ್ನು ಊದಲು, ದೇವರ ಮುಂದೆ ಇರುವ ಚಿನ್ನದ ಬಲಿಪೀಠದ ನಾಲ್ಕು ಕೊಂಬುಗಳಿಂದ ಹೊರಟ ಒಂದು ಧ್ವನಿಯನ್ನು ಕೇಳಿದೆನು.
ಪ್ರಕಟನೆ 9 : 14 (OCVKN)
ಅದು ತುತೂರಿಯನ್ನು ಹೊಂದಿರುವ ಆರನೆಯ ದೇವದೂತನಿಗೆ, “ಯೂಫ್ರೇಟೀಸ್ ಮಹಾನದಿಯ ಬಳಿ ಕಟ್ಟಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಹೇಳಿತು.
ಪ್ರಕಟನೆ 9 : 15 (OCVKN)
ಮಾನವಕುಲದ ಮೂರರಲ್ಲೊಂದು ಭಾಗವನ್ನು ಕೊಲ್ಲುವುದಕ್ಕಾಗಿ ಆ ಗಳಿಗೆ, ದಿನ, ತಿಂಗಳು ಮತ್ತು ವರ್ಷಕ್ಕಾಗಿಯೇ ಸಿದ್ಧವಾಗಿದ್ದ ನಾಲ್ಕು ದೇವದೂತರನ್ನು ಬಿಡುಗಡೆ ಮಾಡಲಾಯಿತು.
ಪ್ರಕಟನೆ 9 : 16 (OCVKN)
ಕುದುರೆ ಸೈನಿಕರ ಸಂಖ್ಯೆಯು ಇಪ್ಪತ್ತು ಕೋಟಿ ಎಂದು ನನಗೆ ಕೇಳಿಸಿತು.
ಪ್ರಕಟನೆ 9 : 17 (OCVKN)
ನಾನು ನನ್ನ ದರ್ಶನದಲ್ಲಿ ಕುದುರೆಗಳನ್ನೂ ಸವಾರರನ್ನೂ ಕಂಡೆನು. ಅವರ ಕವಚಗಳು ಬೆಂಕಿಯ ಕೆಂಪು, ನೀಲಮಣಿ ಹಾಗೂ ಹಳದಿ ಬಣ್ಣದಂತೆಯೂ ಇದ್ದವು. ಕುದುರೆಗಳ ತಲೆಗಳು ಸಿಂಹದ ತಲೆಗಳಂತಿದ್ದವು. ಅವುಗಳ ಬಾಯೊಳಗಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬಂದವು.
ಪ್ರಕಟನೆ 9 : 18 (OCVKN)
ಅವುಗಳ ಬಾಯೊಳಗಿಂದ ಬಂದ ಬೆಂಕಿ ಹೊಗೆ ಮತ್ತು ಗಂಧಕಗಳೆಂಬ ಮೂರು ಉಪದ್ರವಗಳಿಂದ ಮಾನವಕುಲದ ಮೂರರಲ್ಲೊಂದು ಭಾಗದ ಜನರು ಹತರಾದರು.
ಪ್ರಕಟನೆ 9 : 19 (OCVKN)
ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲಿಯೂ ಬಾಲದಲ್ಲಿಯೂ ಇತ್ತು. ಏಕೆಂದರೆ ಅವುಗಳ ಬಾಲಗಳು ತಲೆಗಳನ್ನು ಹೊಂದಿದ್ದ ಸರ್ಪಗಳಂತಿದ್ದವು. ಅವುಗಳಿಂದ ಅವು ಕೇಡನ್ನುಂಟು ಮಾಡುತ್ತವೆ.
ಪ್ರಕಟನೆ 9 : 20 (OCVKN)
ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.
ಪ್ರಕಟನೆ 9 : 21 (OCVKN)
ಇದಲ್ಲದೆ ಅವರು ಕೊಲೆ, ಮಾಟ, ಜಾರತ್ವ ಮತ್ತು ಕಳ್ಳತನಗಳಿಗಾಗಿಯೂ ಪಶ್ಚಾತ್ತಾಪ ಪಡಲಿಲ್ಲ.

1 2 3 4 5 6 7 8 9 10 11 12 13 14 15 16 17 18 19 20 21