ರೋಮಾಪುರದವರಿಗೆ 11 : 1 (OCVKN)
ಇಸ್ರಾಯೇಲಿನಲ್ಲಿ ಉಳಿದವರು ಹಾಗಾದರೆ, ದೇವರು ತಮ್ಮ ಜನರನ್ನು ತ್ಯಜಿಸಿಬಿಟ್ಟಿದ್ದಾರೋ ಎಂದು ಕೇಳುತ್ತೇನೆ? ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲನೂ ಅಬ್ರಹಾಮನ ವಂಶದವನೂ ಬೆನ್ಯಾಮೀನನ ಕುಲದವನೂ ಆಗಿದ್ದೇನೆ.
ರೋಮಾಪುರದವರಿಗೆ 11 : 2 (OCVKN)
ದೇವರು ತಾವು ಮುಂದಾಗಿ ತಿಳಿದುಕೊಂಡ ತಮ್ಮ ಜನರನ್ನು ತ್ಯಜಿಸಲಿಲ್ಲ. ದೇವರ ವಾಕ್ಯವು ಎಲೀಯನನ್ನು ಕುರಿತು ಏನು ಹೇಳುತ್ತದೆಂದು ನಿಮಗೆ ಗೊತ್ತಿಲ್ಲವೋ?
ರೋಮಾಪುರದವರಿಗೆ 11 : 3 (OCVKN)
“ಕರ್ತಾ, ಅವರು ನಿಮ್ಮ ಪ್ರವಾದಿಗಳನ್ನು ಕೊಂದಿದ್ದಾರೆ. ನಿಮ್ಮ ಬಲಿಪೀಠವನ್ನು ಒಡೆದುಹಾಕಿದ್ದಾರೆ, ನಾನು ಒಬ್ಬನೇ ಉಳಿದಿದ್ದೇನೆ. ಅವರು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ,”* 1 ಅರಸು 19:10,14 ಎಂದು ಇಸ್ರಾಯೇಲರಿಗೆ ವಿರೋಧವಾಗಿ ದೇವರಲ್ಲಿ ವಿಜ್ಞಾಪನೆ ಮಾಡಿಕೊಂಡನು.
ರೋಮಾಪುರದವರಿಗೆ 11 : 4 (OCVKN)
ಅದಕ್ಕೆ ದೇವರು ಅವನಿಗೆ ಕೊಟ್ಟ ಉತ್ತರವೇನಾಗಿತ್ತು? “ಬಾಳನಿಗೆ ಅಡ್ಡಬೀಳದ ಏಳು ಸಾವಿರ ಮಂದಿಯನ್ನು ನನಗೋಸ್ಕರ ಉಳಿಸಿದ್ದೇನೆ,” 1 ಅರಸು 19:18 ಎಂದಲ್ಲವೇ?
ರೋಮಾಪುರದವರಿಗೆ 11 : 5 (OCVKN)
ಅದೇ ರೀತಿಯಲ್ಲಿ, ಈ ಕಾಲದಲ್ಲಿಯೂ ಕೃಪೆಯಿಂದ ಆಯ್ಕೆಯಾದ ಇಸ್ರಾಯೇಲರಲ್ಲಿ ಕೆಲವರು ಉಳಿದಿದ್ದಾರೆ.
ರೋಮಾಪುರದವರಿಗೆ 11 : 6 (OCVKN)
ಆ ಆಯ್ಕೆಯು ಕ್ರಿಯೆಗಳ ಆಧಾರದಿಂದಲ್ಲ, ಕೃಪೆಯಿಂದಲೇ ಆಗಿರುತ್ತದೆ. ಕ್ರಿಯೆಗಳಿಂದ ಅದು ಆಗಿದ್ದರೆ ಇನ್ನೆಂದಿಗೂ ಕೃಪೆಯಾಗಲಾರದು.
ರೋಮಾಪುರದವರಿಗೆ 11 : 7 (OCVKN)
ಹಾಗಾದರೆ ಏನು? ಇಸ್ರಾಯೇಲ್ ಹುಡುಕಿದ್ದನ್ನು ಹೊಂದಲಿಲ್ಲ. ಆದರೆ ಅವರಲ್ಲಿ ಆಯ್ಕೆಯಾದವರು ಹೊಂದಿದರು, ಮಿಕ್ಕವರು ಕಠಿಣ ಹೃದಯಿಗಳಾದರು.
ರೋಮಾಪುರದವರಿಗೆ 11 : 8 (OCVKN)
ಪವಿತ್ರ ವೇದದಲ್ಲಿ ಬರೆದಿರುವಂತೆ, “ದೇವರು ಅವರಿಗೆ ಜಡಸ್ವಭಾವದ ಆತ್ಮವನ್ನು, ಕಾಣಲಾರದ ಕಣ್ಣನ್ನು ಮತ್ತು ಕೇಳಲಾರದ ಕಿವಿಯನ್ನು ಕೊಟ್ಟರು, ಅದು ಇಂದಿನವರೆಗೂ ಹಾಗೆಯೇ ಇದೆ.” ಧರ್ಮೋ 29:4; ಯೆಶಾಯ 29:10
ರೋಮಾಪುರದವರಿಗೆ 11 : 9 (OCVKN)
9 ದಾವೀದನು, “ಅವರ ಊಟವೇ ಅವರಿಗೆ ಉರುಲೂ ಬೋನೂ ಆಗಲಿ. ಅದು ಅಡೆತಡೆಯೂ ಪ್ರತಿಕಾರವೂ ಆಗಲಿ.
ರೋಮಾಪುರದವರಿಗೆ 11 : 10 (OCVKN)
ಅವರ ಕಣ್ಣುಗಳು ಕಾಣದ ಹಾಗೆ ಕತ್ತಲಾಗಲಿ. ಮತ್ತು ಅವರ ಬೆನ್ನು ಎಂದೆಂದಿಗೂ ಬಗ್ಗಿ ಹೋಗಲಿ,”§ ಕೀರ್ತನೆ 69:22,23 ಎಂದು ಹೇಳುತ್ತಾನೆ.
ರೋಮಾಪುರದವರಿಗೆ 11 : 11 (OCVKN)
ಕಸಿಕಟ್ಟಿದ ಕೊಂಬೆಗಳು ಇಸ್ರಾಯೇಲರು ಏಳಲಾರದ ಹಾಗೇ ಎಡವಿದರೋ? ಎಂದು ನಾನು ಕೇಳುತ್ತೇನೆ. ಇಲ್ಲವೇ ಇಲ್ಲ! ಆದರೆ, ಇಸ್ರಾಯೇಲರಲ್ಲಿ ಮತ್ಸರ ಉಂಟಾಗುವಂತೆ ಅವರ ಅಪರಾಧದ ನಿಮಿತ್ತ ಯೆಹೂದ್ಯರಲ್ಲದವರಿಗೆ ರಕ್ಷಣೆಯು ಉಂಟಾಯಿತು.
ರೋಮಾಪುರದವರಿಗೆ 11 : 12 (OCVKN)
ಆದರೆ ಅವರ ಅಪರಾಧವು ಜಗತ್ತಿಗೆ ಐಶ್ವರ್ಯವನ್ನು ಉಂಟುಮಾಡಿತು. ಅವರ ನಷ್ಟವೇ ಯೆಹೂದ್ಯರಲ್ಲದವರಿಗೆ ಐಶ್ವರ್ಯವನ್ನು ಉಂಟುಮಾಡುವುದಾದರೆ, ಅವರ ಪರಿಪೂರ್ಣತೆಯು ಇನ್ನೂ ಎಷ್ಟೋ ಹೆಚ್ಚಾದ ಐಶ್ವರ್ಯವನ್ನು ಉಂಟುಮಾಡಬಹುದಲ್ಲವೇ!
ರೋಮಾಪುರದವರಿಗೆ 11 : 13 (OCVKN)
ಯೆಹೂದ್ಯರಲ್ಲದವರಾಗಿರುವ ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಾನು ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿರುವಷ್ಟರ ಮಟ್ಟಿಗೆ ನನ್ನ ಸೇವೆಯನ್ನು ಪ್ರಭಾವಗೊಳಿಸುತ್ತೇನೆ.
ರೋಮಾಪುರದವರಿಗೆ 11 : 14 (OCVKN)
ಹೇಗೂ ನಾನು ನನ್ನ ಸ್ವಂತ ಜನರಾದ ಯೆಹೂದ್ಯರಲ್ಲಿ ಮತ್ಸರವನ್ನು ಉದ್ರೇಕಿಸಿ ಅವರಲ್ಲಿ ಕೆಲವರನ್ನಾದರೂ ರಕ್ಷಿಸಬೇಕು.
ರೋಮಾಪುರದವರಿಗೆ 11 : 15 (OCVKN)
ಏಕೆಂದರೆ ಇಸ್ರಾಯೇಲರನ್ನು ತ್ಯಜಿಸುವುದರಿಂದ ಜಗತ್ತು ದೇವರೊಡನೆ ಸಂಧಾನವಾಗುವುದಾದರೆ, ಅವರನ್ನು ಸ್ವೀಕರಿಸುವುದು, ಸತ್ತವರು ಜೀವಿತರಾಗಿ ಎದ್ದು ಬಂದಂತಾಗಿರುವುದಲ್ಲವೇ?
ರೋಮಾಪುರದವರಿಗೆ 11 : 16 (OCVKN)
ಪ್ರಥಮಫಲವಾಗಿ ಹಿಟ್ಟಿನಲ್ಲಿ ದೇವರಿಗೆ ಭಾಗವನ್ನು ಸಮರ್ಪಿಸಿದ್ದು ಪವಿತ್ರವಾಗಿದ್ದರೆ, ಹಿಟ್ಟೆಲ್ಲಾ ಪವಿತ್ರವಾಗಿರುತ್ತದೆ. ಬೇರು ಪವಿತ್ರವಾಗಿದ್ದರೆ, ಕೊಂಬೆಗಳೂ ಪವಿತ್ರವಾಗಿರುತ್ತವೆ?
ರೋಮಾಪುರದವರಿಗೆ 11 : 17 (OCVKN)
ಕೆಲವು ಕೊಂಬೆಗಳು ಮುರಿದುಹೋಗಿರುವುದಾದರೆ, ಕಾಡು ಓಲಿವ್ ಮರದಂತಿರುವ ನೀನು ಅವುಗಳ ನಡುವೆ ಕಸಿಮಾಡಿ ಉತ್ತಮ ಓಲಿವ್ ಮರದ ರಸವತ್ತಾದ ಬೇರಿನಲ್ಲಿ ಪಾಲುಹೊಂದಿರಲಾಗಿ,
ರೋಮಾಪುರದವರಿಗೆ 11 : 18 (OCVKN)
ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ. ಹೆಚ್ಚಿಸಿಕೊಂಡರೆ, ನೀನು ಆ ಬೇರಿನ ಆಧಾರವಲ್ಲ. ಆ ಬೇರೇ ನಿನಗೆ ಆಧಾರವಾಗಿದೆ.
ರೋಮಾಪುರದವರಿಗೆ 11 : 19 (OCVKN)
ಹಾಗಾದರೆ ನೀನು, “ನಾನು ಕಸಿಕಟ್ಟಿಸಿಕೊಳ್ಳಬೇಕೆಂದು ಆ ಕೊಂಬೆಗಳನ್ನು ಮುರಿದು ಹಾಕಲಾಯಿತು,” ಎಂದು ನೀನು ಹೇಳಬಹುದು.
ರೋಮಾಪುರದವರಿಗೆ 11 : 20 (OCVKN)
ಅದು ನಿಜವೆ, ಆದರೆ ಅವರ ಅವಿಶ್ವಾಸದಿಂದಲೇ ಅವರನ್ನು ಮುರಿದು ಹಾಕಲಾಯಿತು. ನೀನಾದರೋ ವಿಶ್ವಾಸದಿಂದಲೇ ಇನ್ನೂ ನಿಂತಿರುವೆ. ಗರ್ವಪಡದೆ ಭಯದಿಂದಿರು.
ರೋಮಾಪುರದವರಿಗೆ 11 : 21 (OCVKN)
ಏಕೆಂದರೆ ದೇವರು ಹುಟ್ಟು ಕೊಂಬೆಗಳನ್ನು ಉಳಿಸದಿದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.
ರೋಮಾಪುರದವರಿಗೆ 11 : 22 (OCVKN)
ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ.
ರೋಮಾಪುರದವರಿಗೆ 11 : 23 (OCVKN)
ಇಸ್ರಾಯೇಲರು ಕೂಡ ಇನ್ನೂ ಅವಿಶ್ವಾಸದಲ್ಲಿ ಮುಂದುವರಿಯದಿದ್ದರೆ, ಕಸಿಕಟ್ಟಲಾಗುವರು, ಏಕೆಂದರೆ ಅವರನ್ನು ಪುನಃ ಕಸಿಕಟ್ಟಲು ದೇವರು ಶಕ್ತರಾಗಿರುತ್ತಾರೆ.
ರೋಮಾಪುರದವರಿಗೆ 11 : 24 (OCVKN)
ಎಷ್ಟಾದರೂ ಕಾಡು ಓಲಿವ್ ಮರದಿಂದ ನೀನು ಕಡಿದುಹಾಕಲಾದ ಕೊಂಬೆ. ನೀನು ನೆಟ್ಟು ಬೆಳೆಸಿರುವ ಉತ್ತಮ ಓಲಿವ್ ಮರಕ್ಕೆ ಅಸ್ವಾಭಾವಿಕವಾಗಿ ಕಸಿಮಾಡುವುದಾದರೆ ಸ್ವಾಭಾವಿಕವಾಗಿರುವ ಈ ಕೊಂಬೆಗಳನ್ನು ಎಷ್ಟೋ ಹೆಚ್ಚಾಗಿ ಓಲಿವ್ ಮರಕ್ಕೆ ಅದೇ ಕಸಿಕಟ್ಟುವುದು ಸುಲಭವಲ್ಲವೇ?
ರೋಮಾಪುರದವರಿಗೆ 11 : 25 (OCVKN)
ಎಲ್ಲಾ ಇಸ್ರಾಯೇಲರಿಗೆ ರಕ್ಷಣೆ ಪ್ರಿಯರೇ, ನೀವು ಈ ಮರ್ಮದ ಬಗ್ಗೆ ಅಜ್ಞಾನಿಗಳಾಗಿರಬೇಕೆಂದು ನಾನು ಬಯಸುವುದಿಲ್ಲ. ಅದೇನೆಂದರೆ, ಯೆಹೂದ್ಯರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವವರೆಗೆ ಮಾತ್ರ ಇಸ್ರಾಯೇಲರು ತಮ್ಮ ಹೃದಯದ ಕಾಠಿಣ್ಯಕ್ಕೆ ತಾತ್ಕಾಲಿಕವಾಗಿ ಒಳಗಾಗಿರುವರು.
ರೋಮಾಪುರದವರಿಗೆ 11 : 26 (OCVKN)
ಹೀಗೆ ಪವಿತ್ರ ವೇದದಲ್ಲಿ ಬರೆದಿರುವಂತೆ, ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು: “ವಿಮೋಚಿಸುವವರು ಒಬ್ಬರು ಚೀಯೋನಿನಿಂದ* ಯೆರೂಸಲೇಮಿನ ಇನ್ನೊಂದು ಹೆಸರು ಬರುತ್ತಾರೆ, ಅವರು ಯಾಕೋಬನ ಇಸ್ರಾಯೇಲ್ ದೇಶದಿಂದ ಸಂತತಿಯಲ್ಲಿ ದೇವರನ್ನು ಅಲ್ಲಗಳೆಯುವ ಸ್ವಭಾವನ್ನು ತಾವೇ ತೆಗೆದುಹಾಕುವರು.
ರೋಮಾಪುರದವರಿಗೆ 11 : 27 (OCVKN)
ನಾನು ಅವರ ಪಾಪಗಳನ್ನು ತೆಗೆದುಹಾಕುವಾಗ, ಅವರೊಂದಿಗೆ ನಾನು ಮಾಡಿಕೊಳ್ಳುವ ಒಡಂಬಡಿಕೆ ಇದೇ ಎಂದು ತಿಳಿದುಕೊಳ್ಳುವೆನು,” ಯೆಶಾಯ 59:20,21; 27:9; ಯೆರೆ 31:33,34 ಎಂಬುದೇ.
ರೋಮಾಪುರದವರಿಗೆ 11 : 28 (OCVKN)
ಸುವಾರ್ತೆಯ ಪ್ರಕಾರ ಇಸ್ರಾಯೇಲರು ಈಗ ನಿಮ್ಮ ನಿಮಿತ್ತ ಶತ್ರುಗಳು. ಆದರೆ ದೇವರ ಆಯ್ಕೆಯ ದೃಷ್ಟಿಯಲ್ಲಿ ನೋಡುವಾಗ ಮೂಲಪಿತೃಗಳ ನಿಮಿತ್ತದಿಂದ ಅವರು ಪ್ರೀತಿಹೊಂದಿದವರು.
ರೋಮಾಪುರದವರಿಗೆ 11 : 29 (OCVKN)
ದೇವರು ಕೊಡುವ ವರಗಳನ್ನು, ಕರೆಗಳನ್ನು ಅವರು ಎಂದಿಗೂ ಹಿಂತೆಗೆದುಕೊಳ್ಳುವವರಲ್ಲ.
ರೋಮಾಪುರದವರಿಗೆ 11 : 30 (OCVKN)
ಒಂದು ಕಾಲದಲ್ಲಿ ದೇವರಿಗೆ ಅವಿಧೇಯರಾಗಿದ್ದ ನೀವು ಇಸ್ರಾಯೇಲರ ಅವಿಧೇಯತೆಯಿಂದ ಈಗ ಕರುಣೆಯನ್ನು ಹೊಂದಿರುವಿರಿ.
ರೋಮಾಪುರದವರಿಗೆ 11 : 31 (OCVKN)
ಅದೇ ಪ್ರಕಾರವಾಗಿ ಇಸ್ರಾಯೇಲರು ಈಗ ಅವಿಧೇಯರಾಗಿದ್ದರೂ ನಿಮಗೆ ಕರುಣೆ ದೊರಕಿದಂತೆ, ಅವರಿಗೂ ಈಗ ಕರುಣೆ ದೊರಕುವುದು.
ರೋಮಾಪುರದವರಿಗೆ 11 : 32 (OCVKN)
ದೇವರು ತಾವು ಎಲ್ಲರಿಗೂ ಕರುಣೆ ತೋರಿಸುವುದಕ್ಕಾಗಿ ಎಲ್ಲರನ್ನೂ ಅವಿಧೇಯತೆಯಲ್ಲಿ ಕಟ್ಟಿಹಾಕಿರುತ್ತಾರೆ.
ರೋಮಾಪುರದವರಿಗೆ 11 : 33 (OCVKN)
ದೇವಸ್ತುತಿ ಆಹಾ! ದೇವರ ಐಶ್ವರ್ಯ, ಜ್ಞಾನ ಮತ್ತು ವಿವೇಕಗಳು ಎಷ್ಟು ಆಳವಾದವುಗಳು! ದೇವರ ತೀರ್ಮಾನಗಳು ಪರೀಶೀಲಿಸಲು ಅಸಾಧ್ಯವಾದದ್ದು! ದೇವರ ಮಾರ್ಗಗಳನ್ನು ಕಂಡುಹಿಡಿಯುವುದು ಅಪರಿಮಿತವಾದದ್ದು!
ರೋಮಾಪುರದವರಿಗೆ 11 : 34 (OCVKN)
“ಕರ್ತದೇವರ ಮನಸ್ಸನ್ನು ಅರಿತವರು ಯಾರು? ಅವರಿಗೆ ಆಲೋಚನೆಯನ್ನು ನೀಡುವವರು ಯಾರು?”§ ಯೆಶಾಯ 40:13
ರೋಮಾಪುರದವರಿಗೆ 11 : 35 (OCVKN)
“ದೇವರಿಗೆ ಮೊದಲು ಕೊಟ್ಟು, ಅವರಿಂದ ಪ್ರತಿಫಲವನ್ನು ಪಡೆಯುವವರು ಯಾರು?”* ಯೋಬ 41:11
ರೋಮಾಪುರದವರಿಗೆ 11 : 36 (OCVKN)
ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ. ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36