ರೋಮಾಪುರದವರಿಗೆ 12 : 1 (OCVKN)
ಸಜೀವ ಯಜ್ಞಗಳು ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.
ರೋಮಾಪುರದವರಿಗೆ 12 : 2 (OCVKN)
ಈ ಲೋಕದ ನಡುವಳಿಕೆಯನ್ನು ಹೊಂದಿಕೊಳ್ಳದೇ, ನಿಮ್ಮ ಮನಸ್ಸನ್ನು ರೂಪಾಂತರಿಸಿಕೊಂಡು ನವೀಕರಿಸಿಕೊಳ್ಳಿರಿ. ಆಗ ನೀವು ಉತ್ತಮವಾದ, ಮೆಚ್ಚುಗೆಯಾಗಿರುವಂಥ ಮತ್ತು ಪರಿಪೂರ್ಣವಾದ ದೇವರ ಚಿತ್ತ ಯಾವುದು ಎಂಬುದನ್ನು ತಿಳಿದುಕೊಳ್ಳುವಿರಿ.
ರೋಮಾಪುರದವರಿಗೆ 12 : 3 (OCVKN)
ಕ್ರಿಸ್ತನ ದೇಹದಲ್ಲಿನ ದೀನಸೇವೆ ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.
ರೋಮಾಪುರದವರಿಗೆ 12 : 4 (OCVKN)
ನಮ್ಮಲ್ಲಿ ಪ್ರತಿಯೊಬ್ಬನಿಗೂ ಅನೇಕ ಅಂಗಗಳಿಂದ ಕೂಡಿದ ಒಂದು ದೇಹವಿರುವ ಹಾಗೆಯೇ ಮತ್ತು ಹೇಗೆ ಈ ಅಂಗಾಂಗಗಳಿಗೆಲ್ಲಾ ಒಂದೇ ಕೆಲಸವಿರುವುದ್ಲಿಲವೋ,
ರೋಮಾಪುರದವರಿಗೆ 12 : 5 (OCVKN)
ಅದೇ ರೀತಿಯಲ್ಲಿ, ಅನೇಕರಾಗಿರುವ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗುತ್ತೇವೆ ಮತ್ತು ಪ್ರತಿಯೊಬ್ಬನೂ ಒಬ್ಬರಿಗೊಬ್ಬರು ಅಂಗಗಳಾಗಿರುತ್ತೇವೆ.
ರೋಮಾಪುರದವರಿಗೆ 12 : 6 (OCVKN)
ನಮಗೆ ಕೊಟ್ಟಿರುವ ದೇವರ ಕೃಪೆಗೆ ಅನುಸಾರವಾಗಿ ನಮಗೆ ಬೇರೆ ಬೇರೆ ವರಗಳಿರುತ್ತವೆ. ಒಬ್ಬನಿಗೆ ಪ್ರವಾದನಾ ವರವಾಗಿದ್ದರೆ, ಅದನ್ನು ಅವನ ವಿಶ್ವಾಸದ ಅಳತೆಗೆ ತಕ್ಕ ರೀತಿಯಲ್ಲಿ ಉಪಯೋಗಿಸಲಿ.
ರೋಮಾಪುರದವರಿಗೆ 12 : 7 (OCVKN)
ಅದು ಇತರರಿಗೆ ಸೇವೆ ಸಲ್ಲಿಸುವುದಾಗಿದ್ದರೆ, ಅದನ್ನು ಇತರರಿಗೆ ಸೇವೆ ಸಲ್ಲಿಸುವುದರಲ್ಲಿ ಉಪಯೋಗಿಸಲಿ. ಅದು ಬೋಧಿಸುವ ವರವಾಗಿದ್ದರೆ, ಅವನು ಬೋಧಿಸಲಿ.
ರೋಮಾಪುರದವರಿಗೆ 12 : 8 (OCVKN)
ಅದು ಪ್ರೋತ್ಸಾಹಗೊಳಿಸುವುದಾಗಿದ್ದರೆ, ಅವನು ಪ್ರೋತ್ಸಾಹಗೊಳಿಸಲಿ. ದಾನಕೊಡುವ ವರವಾಗಿದ್ದರೆ, ಅವನು ಧಾರಾಳವಾಗಿ ಕೊಡಲಿ. ನಾಯಕತ್ವ ವಹಿಸುವ ವರವಾಗಿದ್ದರೆ, ಅವನು ಶ್ರದ್ಧೆಯಿಂದ ಮಾಡಲಿ ದಯೆ ತೋರಿಸುವ ವರವಾಗಿದ್ದರೆ ಅದನ್ನು ಅವನು ಸಂತೋಷದಿಂದ ಮಾಡಲಿ.
ರೋಮಾಪುರದವರಿಗೆ 12 : 9 (OCVKN)
ಪ್ರೀತಿ ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
ರೋಮಾಪುರದವರಿಗೆ 12 : 10 (OCVKN)
ಒಬ್ಬರಿಗೊಬ್ಬರು ಸಹೋದರ ಪ್ರೀತಿಯಲ್ಲಿ ಸಮರ್ಪಿತರಾಗಿರಿ. ಗೌರವಿಸುವುದರಲ್ಲಿ ಒಬ್ಬರಿಗೊಬ್ಬರು ಮುಂದಾಗಿರಿ.
ರೋಮಾಪುರದವರಿಗೆ 12 : 11 (OCVKN)
ಉತ್ಸಾಹದಲ್ಲಿ ಆಲಸ್ಯರಾಗದೆ, ಆತ್ಮದಲ್ಲಿ ಬೆಂಕಿಯುಳ್ಳವರಾಗಿ ಕರ್ತನ ಸೇವೆಯನ್ನು ಮಾಡಿರಿ.
ರೋಮಾಪುರದವರಿಗೆ 12 : 12 (OCVKN)
ನಿರೀಕ್ಷೆಯಲ್ಲಿ ಸಂತೋಷವುಳ್ಳವರೂ ಸಂಕಟಗಳಲ್ಲಿ ಸಹನೆಯುಳ್ಳವರೂ ಪ್ರಾರ್ಥನೆಯಲ್ಲಿ ದೃಢಮನಸ್ಸುಳ್ಳವರೂ ಆಗಿ ಮುಂದುವರಿಯಿರಿ.
ರೋಮಾಪುರದವರಿಗೆ 12 : 13 (OCVKN)
ಕೊರತೆ ಇರುವ ದೇವಜನರೊಂದಿಗೆ ನಿಮಗೆ ಇರುವುದನ್ನು ಹಂಚಿಕೊಳ್ಳಿರಿ, ಅತಿಥಿ ಸತ್ಕಾರವನ್ನು ಮಾಡುತ್ತಾ ಇರಿ.
ರೋಮಾಪುರದವರಿಗೆ 12 : 14 (OCVKN)
ನಿಮ್ಮನ್ನು ಹಿಂಸಿಸುವರನ್ನು ಆಶೀರ್ವದಿಸಿರಿ, ಶಪಿಸಬೇಡಿರಿ.
ರೋಮಾಪುರದವರಿಗೆ 12 : 15 (OCVKN)
ಸಂತೋಷ ಪಡುವವರೊಂದಿಗೆ ಸಂತೋಷಪಡಿರಿ, ಅಳುವವರೊಂದಿಗೆ ಅಳಿರಿ.
ರೋಮಾಪುರದವರಿಗೆ 12 : 16 (OCVKN)
ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.
ರೋಮಾಪುರದವರಿಗೆ 12 : 17 (OCVKN)
ಯಾರಿಗೂ ಕೆಟ್ಟದ್ದಕ್ಕೆ ಪ್ರತಿಯಾಗಿ ಕೆಟ್ಟದ್ದನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿಯೂ ಒಳ್ಳೆಯದನ್ನು ಮಾಡಿರಿ.
ರೋಮಾಪುರದವರಿಗೆ 12 : 18 (OCVKN)
ಸಾಧ್ಯವಾದರೆ, ನಿಮ್ಮಿಂದ ಆದಷ್ಟು ಎಲ್ಲರೊಂದಿಗೂ ಸಮಾಧಾನದಿಂದಿರಿ.
ರೋಮಾಪುರದವರಿಗೆ 12 : 19 (OCVKN)
ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸದೆ, ಅದನ್ನು ದೇವರ ಕೋಪಕ್ಕೆ ಬಿಟ್ಟುಬಿಡಿರಿ. ಏಕೆಂದರೆ, “ಮುಯ್ಯಿ ತೀರಿಸುವುದು ನನಗೆ ಸೇರಿದ್ದು. ನಾನು ಅದನ್ನು ತೀರಿಸುವೆನು,* ಧರ್ಮೋ 32:35 ಎಂದು ಕರ್ತನು ಹೇಳುತ್ತಾರೆ,” ಎಂದು ಪವಿತ್ರ ವೇದದಲ್ಲಿ ಬರೆಯಲಾಗಿದೆ.
ರೋಮಾಪುರದವರಿಗೆ 12 : 20 (OCVKN)
“ಆದರೆ, ನಿನ್ನ ವೈರಿಯು ಹಸಿದಿದ್ದರೆ, ಅವನಿಗೆ ಆಹಾರ ಕೊಡು, ಅವನು ಬಾಯಾರಿದ್ದರೆ ಕುಡಿಯಲು ಕೊಡು. ಹೀಗೆ ಮಾಡುವುದರಿಂದ ನೀನು ಅವನ ತಲೆಯ ಮೇಲೆ ಉರಿಯುವ ಕೆಂಡವನ್ನು ಸುರಿದಂತಾಗುವುದು.” ಜ್ಞಾನೋಕ್ತಿ 25:21,22
ರೋಮಾಪುರದವರಿಗೆ 12 : 21 (OCVKN)
21 ಕೆಟ್ಟದ್ದಕ್ಕೆ ಸೋಲಬೇಡಿರಿ, ಕೆಟ್ಟದ್ದನ್ನು ಒಳ್ಳೆಯದರಿಂದ ಜಯಿಸಿರಿ.

1 2 3 4 5 6 7 8 9 10 11 12 13 14 15 16 17 18 19 20 21