ರೋಮಾಪುರದವರಿಗೆ 14 : 1 (OCVKN)
ಬಲಹೀನರು ಮತ್ತು ಬಲಿಷ್ಠರು ಅಂಥವನ ಅಭಿಪ್ರಾಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. ವಿಶ್ವಾಸದಲ್ಲಿ ಬಲಹೀನನಾಗಿರುವವನನ್ನು ಸ್ವೀಕರಿಸಿಕೊಳ್ಳಿರಿ.
ರೋಮಾಪುರದವರಿಗೆ 14 : 2 (OCVKN)
ಒಬ್ಬನ ವಿಶ್ವಾಸವು ಎಲ್ಲವನ್ನೂ ತಿನ್ನುವಂತೆ ಮಾಡುತ್ತದೆ. ಆದರೆ ವಿಶ್ವಾಸದಲ್ಲಿ ಬಲಹೀನನಾಗಿರುವವನು ಸಸ್ಯಾಹಾರಿಯಾಗಿಯೇ ಇರುತ್ತಾನೆ.
ರೋಮಾಪುರದವರಿಗೆ 14 : 3 (OCVKN)
ಮಾಂಸಾಹಾರಿಯು ಸಸ್ಯಾಹಾರಿಯನ್ನು ಹೀನೈಸದಿರಲಿ. ಸಸ್ಯಾಹಾರಿಯು ಮಾಂಸಾಹಾರಿಯನ್ನು ತೀರ್ಪು ಮಾಡದಿರಲಿ. ಏಕೆಂದರೆ ದೇವರು ಇಬ್ಬರನ್ನು ಸ್ವೀಕಾರ ಮಾಡಿರುತ್ತಾರೆ.
ರೋಮಾಪುರದವರಿಗೆ 14 : 4 (OCVKN)
ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು.
ರೋಮಾಪುರದವರಿಗೆ 14 : 5 (OCVKN)
ಕೆಲವರು ಒಂದು ದಿನವನ್ನು ಮತ್ತೊಂದು ದಿನಕ್ಕಿಂತ ವಿಶೇಷವೆಂದು ಎಣಿಸುತ್ತಾರೆ. ಪ್ರತಿಯೊಬ್ಬರೂ ತಮ್ಮ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಂತೆ ನಡೆಯಲಿ.
ರೋಮಾಪುರದವರಿಗೆ 14 : 6 (OCVKN)
ಒಬ್ಬ ಒಂದು ದಿನವನ್ನು ವಿಶೇಷವೆಂದು ಎಣಿಸುವುದಾದರೆ ಅವನು ಅದನ್ನು ಕರ್ತನಿಗಾಗಿಯೇ ಮಾಡಲಿ. ಮಾಂಸಾಹಾರಿಯು ದೇವರಿಗೆ ಕೃತಜ್ಞತೆಯನ್ನು ಮಾಡಿ ಊಟಮಾಡುವುದಾದರೆ ಅವನು ಅದನ್ನು ಮಾಡುವುದು ಕರ್ತನಿಗಾಗಿಯೇ. ಸಸ್ಯಾಹಾರಿಯು ಕರ್ತನಿಗಾಗಿಯೇ ತಿನ್ನದೆ ಕೃತಜ್ಞತೆ ಸಲ್ಲಿಸುತ್ತಾನೆ.
ರೋಮಾಪುರದವರಿಗೆ 14 : 7 (OCVKN)
ನಮ್ಮಲ್ಲಿ ಯಾರೂ ತಮಗಾಗಿ ಜೀವಿಸದಿರಲಿ, ತಮಗಾಗಿ ಮರಣಿಸುವುದು ಬೇಡ.
ರೋಮಾಪುರದವರಿಗೆ 14 : 8 (OCVKN)
ಬದುಕಿದರೆ ನಾವು ಕರ್ತನಿಗಾಗಿ ಬದುಕುತ್ತೇವೆ, ಸತ್ತರೆ ಕರ್ತನಿಗಾಗಿ ಸಾಯುತ್ತೇವೆ. ಹೀಗೆ ನಾವು ಬದುಕಿದರೂ ಸತ್ತರೂ ಕರ್ತನಿಗೆ ಸೇರಿದವರಾಗಿರುತ್ತೇವೆ.
ರೋಮಾಪುರದವರಿಗೆ 14 : 9 (OCVKN)
ಈ ಕಾರಣಕ್ಕಾಗಿಯೇ, ಜೀವಿಸುವವರಿಗೂ ಸತ್ತವರಿಗೂ ಕರ್ತನಾಗಿರಬೇಕೆಂದು ಕ್ರಿಸ್ತನು ಮರಣಹೊಂದಿ ಪುನರುತ್ಥಾನಗೊಂಡರು.
ರೋಮಾಪುರದವರಿಗೆ 14 : 10 (OCVKN)
ಹೀಗಿರುವಾಗ, ನೀನು ಏಕೆ ನಿನ್ನ ಸಹೋದರರಿಗೆ ತೀರ್ಪುಮಾಡುತ್ತೀ? ಅಥವಾ ನಿನ್ನ ಸಹೋದರರನ್ನು ಏಕೆ ಹೀನಾಯವಾಗಿ ಕಾಣುತ್ತೀ? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲುವೆವು.
ರೋಮಾಪುರದವರಿಗೆ 14 : 11 (OCVKN)
ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಜೀವಿಸುವುದರಿಂದ, ಪ್ರತಿಯೊಬ್ಬರೂ ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಅರಿಕೆ ಮಾಡುವುದು,’ ಎಂದು ಕರ್ತನು ಹೇಳುತ್ತಾರೆ.”* ಯೆಶಾಯ 45:23
ರೋಮಾಪುರದವರಿಗೆ 14 : 12 (OCVKN)
12 ಹೀಗಿರುವಾಗ ನಮ್ಮಲ್ಲಿ ಪ್ರತಿಯೊಬ್ಬರೂ ತಮ್ಮ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.
ರೋಮಾಪುರದವರಿಗೆ 14 : 13 (OCVKN)
ಆದ್ದರಿಂದ ನಾವು ಒಬ್ಬರ ಮೇಲೊಬ್ಬರು ತೀರ್ಪುಮಾಡದಿರೋಣ. ಇದಲ್ಲದೆ ಸಹೋದರರಿಗೆ ಅಡೆತಡೆಯನ್ನಾಗಲಿ, ಅಡ್ಡಿಯನ್ನಾಗಲಿ, ಹಾಕದಿರೋಣ.
ರೋಮಾಪುರದವರಿಗೆ 14 : 14 (OCVKN)
ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು.
ರೋಮಾಪುರದವರಿಗೆ 14 : 15 (OCVKN)
ನೀವು ಆಹಾರದಿಂದ ನಿಮ್ಮ ಸಹೋದರರನ್ನು ದುಃಖ ಪಡಿಸುವುದಾದರೆ ನೀವು ಪ್ರೀತಿಯಿಂದ ನಡೆದುಕೊಳ್ಳುವುದಿಲ್ಲ. ನೀವು ತಿನ್ನುವುದರ ಮೂಲಕ ಕ್ರಿಸ್ತನು ಯಾವನಿಗೋಸ್ಕರವಾಗಿ ಸತ್ತರೋ ಅಂಥವರನ್ನು ನಾಶಮಾಡಬೇಡಿರಿ.
ರೋಮಾಪುರದವರಿಗೆ 14 : 16 (OCVKN)
ನಿಮಗಿರುವ ಒಳ್ಳೆಯದು ಪರರ ದೂಷಣೆಗೆ ಗುರಿಯಾಗದಿರಲಿ.
ರೋಮಾಪುರದವರಿಗೆ 14 : 17 (OCVKN)
ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ.
ರೋಮಾಪುರದವರಿಗೆ 14 : 18 (OCVKN)
ಈ ರೀತಿಯಲ್ಲಿ ಕ್ರಿಸ್ತನಿಗೆ ಸೇವೆಮಾಡುವವರು ದೇವರಿಗೆ ಮೆಚ್ಚುಗೆಯಾದವರೂ ಜನರಿಂದ ಅನುಮೋದನೆ ಹೊಂದಿದವರೂ ಆಗಿರುತ್ತಾರೆ.
ರೋಮಾಪುರದವರಿಗೆ 14 : 19 (OCVKN)
ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ.
ರೋಮಾಪುರದವರಿಗೆ 14 : 20 (OCVKN)
ಆಹಾರದ ನಿಮಿತ್ತವಾಗಿ ದೇವರ ಕೆಲಸವನ್ನು ಕೆಡಿಸಬೇಡ, ಎಲ್ಲಾ ಆಹಾರವೂ ಶುದ್ಧವಾದದ್ದೇ. ಆದರೆ ಒಬ್ಬರು ತಿಂದು ವಿಘ್ನವನ್ನು ಒಡ್ಡುವುದು ಕೆಟ್ಟದ್ದು.
ರೋಮಾಪುರದವರಿಗೆ 14 : 21 (OCVKN)
ಮಾಂಸ ತಿನ್ನುವುದಾಗಲಿ, ದ್ರಾಕ್ಷಾರಸವನ್ನು ಕುಡಿಯುವುದಾಗಲಿ ಅಥವಾ ಬೇರೆ ಏನನ್ನೇ ಆಗಲಿ, ಅದು ನಿಮ್ಮ ಸಹೋದರರನ್ನು ಎಡವುವಂತೆ ಮಾಡುವುದಾದರೆ ಅದನ್ನು ಮಾಡದೆ ಇರುವುದೇ ಒಳ್ಳೆಯದು.
ರೋಮಾಪುರದವರಿಗೆ 14 : 22 (OCVKN)
ಈ ವಿಷಯದಲ್ಲಿ ನಿಮಗಿರುವ ವೈಯಕ್ತಿಕ ದೃಢವಿಶ್ವಾಸವನ್ನು ನೀವು ದೇವರ ಮುಂದೆ ಇಟ್ಟುಕೊಂಡಿರು. ತಾವು ಅನುಮೋದಿಸಿ ಮಾಡಿದ ಕಾರ್ಯಗಳ ಬಗ್ಗೆ ತಮಗೆ ದಂಡನಾತೀರ್ಪು ಮಾಡಿಕೊಳ್ಳದವರು ಧನ್ಯರು.
ರೋಮಾಪುರದವರಿಗೆ 14 : 23 (OCVKN)
ಆದರೆ ಅನುಮಾನವುಳ್ಳವರು ಊಟಮಾಡುವುದು ವಿಶ್ವಾಸದಿಂದ ಅಲ್ಲವಾದ್ದರಿಂದ ಅವರು ದೋಷಿಯಾಗುತ್ತಾರೆ. ವಿಶ್ವಾಸವಿಲ್ಲದೆ ಮಾಡುವ ಎಲ್ಲವೂ ಪಾಪವಾಗಿವೆ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23