ರೋಮಾಪುರದವರಿಗೆ 4 : 1 (OCVKN)
ಅಬ್ರಹಾಮನು ನಂಬಿಕೆಯಿಂದ ನೀತಿವಂತನೆಂದು ನಿರ್ಣಯಿಸಲಾದದ್ದು ಹಾಗಾದರೆ ವಂಶಾನುಕ್ರಮವಾಗಿ ನಮ್ಮ ಮೂಲ ಪಿತೃವಾಗಿರುವ ಅಬ್ರಹಾಮನು, ಈ ವಿಷಯದಲ್ಲಿ ಏನು ಕಂಡುಕೊಂಡನೆಂದು ಹೇಳಬೇಕು?
ರೋಮಾಪುರದವರಿಗೆ 4 : 2 (OCVKN)
ಅಬ್ರಹಾಮನು ಕ್ರಿಯೆಗಳ ಮೂಲಕ ನೀತಿವಂತನೆಂದು ನಿರ್ಣಯ ಹೊಂದಿದವನಾಗಿದ್ದರೆ, ದೇವರ ಮುಂದೆ ಹೊಗಳಿಸಿಕೊಳ್ಳಲು ಅವನಿಗೆ ಆಸ್ಪದ ಇರುವುದಿಲ್ಲ.
ರೋಮಾಪುರದವರಿಗೆ 4 : 3 (OCVKN)
ಏಕೆಂದರೆ ಪವಿತ್ರ ವೇದವು: “ಅಬ್ರಹಾಮನು ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,”* ಆದಿ 15:6 ಎಂದು ಹೇಳುತ್ತದೆ.
ರೋಮಾಪುರದವರಿಗೆ 4 : 4 (OCVKN)
ಕೆಲಸ ಮಾಡಿದವನಿಗೆ ದೊರೆಯುವ ಕೂಲಿಯು, ಉಚಿತ ದಾನವಲ್ಲ ಅದು ಅವನ ದುಡಿದ ಸಂಪಾದನೆ.
ರೋಮಾಪುರದವರಿಗೆ 4 : 5 (OCVKN)
ಆದರೆ ಯಾರು ಕೃತ್ಯಗಳನ್ನು ಮಾಡದೆ, ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವ ದೇವರಲ್ಲಿ ನಂಬಿಕೆ ಇಡುತ್ತಾರೋ ಅವರ ನಂಬಿಕೆಯೇ ನೀತಿ ಎಂದು ಎಣಿಸಲಾಗುವುದು.
ರೋಮಾಪುರದವರಿಗೆ 4 : 6 (OCVKN)
ದೇವರು ಯಾರನ್ನು ಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾರೋ ಅವನೇ ಧನ್ಯನು. ಇದರ ಬಗ್ಗೆ ದಾವೀದನು ಹೀಗೆ ಹೇಳುತ್ತಾನೆ:
ರೋಮಾಪುರದವರಿಗೆ 4 : 7 (OCVKN)
“ಯಾರ ಅಪರಾಧಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು.
ರೋಮಾಪುರದವರಿಗೆ 4 : 8 (OCVKN)
ಯಾರ ಪಾಪಗಳನ್ನು ಕರ್ತನು ಅವರ ಲೆಕ್ಕಕ್ಕೆ ಎಣಿಸುವುದಿಲ್ಲವೋ, ಆ ಮನುಷ್ಯನು ಧನ್ಯನು.” ಕೀರ್ತನೆ 32:1,2
ರೋಮಾಪುರದವರಿಗೆ 4 : 9 (OCVKN)
ಈ ಧನ್ಯತೆಯು ಕೇವಲ ಸುನ್ನತಿಯಾದವರಿಗೆ ಮಾತ್ರವೋ? ಅಥವಾ ಸುನ್ನತಿಯಿಲ್ಲದವರಿಗೂ ಇರುತ್ತದೆಯೋ? ಅಬ್ರಹಾಮನ ಲೆಕ್ಕಕ್ಕೆ ಅವನ ನಂಬಿಕೆಯೇ ನೀತಿ ಎಂದು ಎಣಿಸಲಾಗಿತೆಂದು ಹೇಳುತ್ತೇವಲ್ಲಾ.
ರೋಮಾಪುರದವರಿಗೆ 4 : 10 (OCVKN)
ಅದು ಯಾವಾಗ ಎಣಿಸಲಾಯಿತು? ಅವನಿಗೆ ಸುನ್ನತಿ ಆದ ಬಳಿಕವೋ? ಅಥವಾ ಸುನ್ನತಿಯಾಗುವುದಕ್ಕೆ ಮೊದಲೋ? ಅದು ನಂತರವಲ್ಲ, ಮೊದಲೇ!
ರೋಮಾಪುರದವರಿಗೆ 4 : 11 (OCVKN)
ಹೌದು, ಸುನ್ನತಿಯಾಗುವ ಮೊದಲೇ ಅಬ್ರಹಾಮನಿಗಿದ್ದ ನಂಬಿಕೆಯಿಂದ ಅವನು ನೀತಿಯ ಮುದ್ರೆಯನ್ನು ಹೊಂದಿದನು. ಹೀಗಿರುವಲ್ಲಿ, ಸುನ್ನತಿಯಿಲ್ಲದೆ ನಂಬುವವರೆಲ್ಲರಿಗೂ ಅಬ್ರಹಾಮನು ತಂದೆಯಾಗಿರುತ್ತಾನೆ. ಹೀಗೆ ಅವರಿಗೆ ನೀತಿಯು ಎಣಿಕೆಯಾಗುವುದು.
ರೋಮಾಪುರದವರಿಗೆ 4 : 12 (OCVKN)
ನಮ್ಮ ಪಿತೃವಾದ ಅಬ್ರಹಾಮನು ಸುನ್ನತಿ ಹೊಂದಿದವರಿಗೆ ಮಾತ್ರವೇ ತಂದೆಯಾಗಿರದೆ ಅವನಿಗೆ ಸುನ್ನತಿ ಆಗುವ ಮೊದಲು ಇದ್ದ ನಂಬಿಕೆಯ ಹೆಜ್ಜೆಯಲ್ಲಿ ನಡೆಯುವವರಿಗೂ ತಂದೆಯಾಗಿರುತ್ತಾನೆ.
ರೋಮಾಪುರದವರಿಗೆ 4 : 13 (OCVKN)
ಅಬ್ರಹಾಮನು ಮತ್ತು ಅವನ ಸಂತತಿಯವರು ಜಗತ್ತಿಗೇ ಹಕ್ಕುದಾರರಾಗುವರೆಂಬ ವಾಗ್ದಾನವು ನಿಯಮದಿಂದ ಆದದ್ದಲ್ಲ. ನಂಬಿಕೆಯಿಂದುಂಟಾದ ನೀತಿಯ ಮೂಲಕವೇ ಬರುವಂಥದ್ದಾಗಿದೆ.
ರೋಮಾಪುರದವರಿಗೆ 4 : 14 (OCVKN)
ನಿಯಮಕ್ಕೆ ಒಳಗಾಗುವವರೇ ಬಾಧ್ಯರಾದರೆ, ನಂಬಿಕೆಗೆ ಬೆಲೆಯಿಲ್ಲದಂತಾಯಿತು. ವಾಗ್ದಾನವೂ ನಿರರ್ಥಕ.
ರೋಮಾಪುರದವರಿಗೆ 4 : 15 (OCVKN)
ನಿಯಮವು ದೇವರ ಕೋಪವನ್ನು ತರುತ್ತದೆ. ಎಲ್ಲಿ ನಿಯಮವು ಇರುವುದಿಲ್ಲವೋ ಅಲ್ಲಿ ಅದರ ಉಲ್ಲಂಘನೆಯೂ ಇರುವುದಿಲ್ಲ.
ರೋಮಾಪುರದವರಿಗೆ 4 : 16 (OCVKN)
ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.
ರೋಮಾಪುರದವರಿಗೆ 4 : 17 (OCVKN)
“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಒಬ್ಬ ತಂದೆಯನ್ನಾಗಿ ನೇಮಿಸಿದ್ದೇನೆ,” ಆದಿ 17:5 ಎಂದು ಪವಿತ್ರ ವೇದದಲ್ಲಿ ಲಿಖಿತವಾಗಿದೆ. ದೇವರು ಸತ್ತವರಿಗೆ ಜೀವಕೊಡುವವರೂ ಇಲ್ಲದವುಗಳನ್ನು ಇರುವವುಗಳೋ ಎಂಬಂತೆ ಕರೆಯುವವರೂ ಆಗಿರುತ್ತಾರೆಂದು ಅಬ್ರಹಾಮನು ದೇವರ ಸನ್ನಿಧಿಯಲ್ಲಿ ನಂಬಿದನು.
ರೋಮಾಪುರದವರಿಗೆ 4 : 18 (OCVKN)
ಅವನು ತನಗೆ ದೇವರಿಂದ ಹೇಳಲಾದ ನಿರೀಕ್ಷೆಗೆ ಯಾವ ಆಸ್ಪದವು ಇಲ್ಲದಿರುವಾಗಲೂ ನಿರೀಕ್ಷೆಯಿಂದ ನಂಬಿ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಇರುವುದು,”§ ಆದಿ 15:5 ಎಂಬ ಹೇಳಿಕೆಯಂತೆ ಅವನು ಅನೇಕ ಜನಾಂಗಗಳಿಗೆ ತಂದೆಯಾದನು.
ರೋಮಾಪುರದವರಿಗೆ 4 : 19 (OCVKN)
ಅವನು ಆಗಲೇ ಸುಮಾರು ನೂರು ವರ್ಷದವನಾಗಿದ್ದು, ತನ್ನ ದೇಹವು ದುರ್ಬಲವಾಗಿದ್ದರೂ ಹೆಂಡತಿಯಾದ ಸಾರಳಿಗೆ ಗರ್ಭಧರಿಸುವ ಕಾಲ ಮುಗಿದು ಹೋಗಿದ್ದರೂ ನಂಬಿಕೆಯಲ್ಲಿ ಬಲಹೀನನಾಗಲಿಲ್ಲ.
ರೋಮಾಪುರದವರಿಗೆ 4 : 20 (OCVKN)
ಅವನು ದೇವರು ಮಾಡಿದ ವಾಗ್ದಾನಕ್ಕೆ ವಿರುದ್ಧ ಅಪನಂಬಿಕೆಯಿಂದ ಚಂಚಲಚಿತ್ತನಾಗದೆ, ನಂಬಿಕೆಯಿಂದ ಶಕ್ತಿವಂತನಾಗಿ ದೇವರಿಗೆ ಮಹಿಮೆಯನ್ನು ಸಲ್ಲಿಸಿದನು.
ರೋಮಾಪುರದವರಿಗೆ 4 : 21 (OCVKN)
ಅವನು ವಾಗ್ದಾನವನ್ನು ನೆರವೇರಿಸಲು ದೇವರು ಶಕ್ತರಾಗಿದ್ದಾರೆಂದು ಪೂರ್ಣ ದೃಢತೆಯುಳ್ಳವನಾದನು.
ರೋಮಾಪುರದವರಿಗೆ 4 : 22 (OCVKN)
ಆದ್ದರಿಂದ, “ಅದು ಅವನ ಪಾಲಿಗೆ ನೀತಿ ಎಂಬುದಾಗಿ ಎಣಿಸಲಾಯಿತು.”
ರೋಮಾಪುರದವರಿಗೆ 4 : 23 (OCVKN)
ಹೀಗೆ, “ಅವನ ಪಾಲಿಗೆ ನೀತಿ ಎಂದು ಎಣಿಸಲಾಯಿತು,” ಎಂದು ಬರೆದ ಮಾತು ಅವನಿಗೋಸ್ಕರ ಮಾತ್ರವೇ ಆಗಿರದೆ,
ರೋಮಾಪುರದವರಿಗೆ 4 : 24 (OCVKN)
ನಮಗೋಸ್ಕರವೂ ಅಂದರೆ, ನಮ್ಮ ಕರ್ತ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿರುವ ದೇವರನ್ನು ನಂಬುವ ನಮ್ಮ ಪಾಲಿಗೂ ನೀತಿಯೆಂದು ಎಣಿಸಲಾಗುವುದು.
ರೋಮಾಪುರದವರಿಗೆ 4 : 25 (OCVKN)
ನಮ್ಮ ಪಾಪಗಳ ನಿಮಿತ್ತವಾಗಿ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು ಮತ್ತು ನಮ್ಮನ್ನು ನೀತಿವಂತರನ್ನಾಗಿ ನಿರ್ಣಯಿಸಲು, ಜೀವದಿಂದ ಎಬ್ಬಿಸಲಾಯಿತು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25