ರೋಮಾಪುರದವರಿಗೆ 6 : 1 (OCVKN)
ಪಾಪಕ್ಕೆ ಸತ್ತು ಕ್ರಿಸ್ತ ಯೇಸುವಿನಲ್ಲಿ ಜೀವಂತನಾಗಿರುವುದು ಹಾಗಾದರೆ ನಾವು ಏನು ಹೇಳೋಣ? ಕೃಪೆಯು ಹೆಚ್ಚಾಗಲಿ ಎಂದು ನಾವು ಪಾಪದಲ್ಲಿ ಮುಂದುವರಿಯೋಣವೆ?
ರೋಮಾಪುರದವರಿಗೆ 6 : 2 (OCVKN)
ಎಂದಿಗೂ ಹಾಗಾಗದಿರಲಿ! ನಾವು ಪಾಪದ ಪಾಲಿಗೆ ಸತ್ತೆವು, ನಾವು ಇನ್ನೂ ಪಾಪದಲ್ಲಿ ಜೀವಿಸುವುದು ಹೇಗೆ?
ರೋಮಾಪುರದವರಿಗೆ 6 : 3 (OCVKN)
ಅಥವಾ ಕ್ರಿಸ್ತ ಯೇಸುವಿನಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುವ ನಾವು ಅವರ ಮರಣದಲ್ಲಿ ದೀಕ್ಷಾಸ್ನಾನ ಪಡೆದುಕೊಂಡಿರುತ್ತೇವೆಂಬುದು ನಿಮಗೆ ತಿಳಿಯದೋ?
ರೋಮಾಪುರದವರಿಗೆ 6 : 4 (OCVKN)
ಹೀಗಿರುವಲ್ಲಿ ಯೇಸುವಿರೊಂದಿಗೆ ದೀಕ್ಷಾಸ್ನಾನದ ಮೂಲಕ ಅವರ ಮರಣದಲ್ಲಿ ಹೂಣಲಾದೆವು. ಆದ್ದರಿಂದ ತಂದೆಯ ಮಹಿಮೆಯ ಮೂಲಕ ಕ್ರಿಸ್ತ ಯೇಸು ಸತ್ತವರೊಳಗಿಂದ ಎಬ್ಬಿಸಲಾದಂತೆಯೇ ನಾವು ಹೊಸ ಜೀವವನ್ನು ಜೀವಿಸಬೇಕು.
ರೋಮಾಪುರದವರಿಗೆ 6 : 5 (OCVKN)
ನಾವು ಕ್ರಿಸ್ತ ಯೇಸುವಿನೊಂದಿಗೆ ಸೇರಿ ಅವರ ಮರಣದಲ್ಲಿ ಪಾಲುಗಾರರಾದರೆ, ಅವರ ಪುನರುತ್ಥಾನದಲ್ಲಿಯೂ ಪಾಲುಗಾರರಾಗುವೆವು.
ರೋಮಾಪುರದವರಿಗೆ 6 : 6 (OCVKN)
ನಮ್ಮ ಪಾಪದ ಶರೀರವು ನಾಶವಾಗಿ ನಾವು ಇನ್ನು ಮುಂದೆ ಎಂದಿಗೂ ಪಾಪಕ್ಕೆ ಗುಲಾಮರಾಗದಂತೆ, ನಮ್ಮ ಹಳೆಯ ಮನುಷ್ಯ ಸ್ವಭಾವ ಯೇಸುವಿನೊಂದಿಗೆ ಶಿಲುಬೆಗೆ ಹಾಕಲಾಯಿತು ಎಂದು ನಾವು ಬಲ್ಲೆವು.
ರೋಮಾಪುರದವರಿಗೆ 6 : 7 (OCVKN)
ಮರಣ ಹೊಂದಿರುವ ಯಾರೇ ಆದರೂ ಪಾಪದಿಂದ ಮುಕ್ತರಾಗಿರುತ್ತಾರೆ.
ರೋಮಾಪುರದವರಿಗೆ 6 : 8 (OCVKN)
ನಾವು ಈಗ ಕ್ರಿಸ್ತ ಯೇಸುವಿನೊಂದಿಗೆ ಸತ್ತಿರುವುದಾದರೆ, ಅವರೊಂದಿಗೆ ಬದುಕುವೆವು ಎಂದು ನಂಬುತ್ತೇವೆ.
ರೋಮಾಪುರದವರಿಗೆ 6 : 9 (OCVKN)
ಕ್ರಿಸ್ತ ಯೇಸು ಮರಣದಿಂದ ಜೀವಿತರಾಗಿ ಎದ್ದು ಬಂದದ್ದರಿಂದ ಅವರು ಪುನಃ ಸಾಯಲಾರರೆಂದು ಬಲ್ಲೆವು. ಇನ್ನು ಮುಂದೆ ಅವರ ಮೇಲೆ ಮರಣಕ್ಕೆ ಅಧಿಕಾರವಿಲ್ಲ.
ರೋಮಾಪುರದವರಿಗೆ 6 : 10 (OCVKN)
ಕ್ರಿಸ್ತ ಯೇಸು ಪಾಪದ ಪಾಲಿಗೆ ಸತ್ತದ್ದೂ ಒಂದೇ ಸಾರಿಯಾಗಿರುತ್ತದೆ. ಆದರೆ, ಅವರು ಜೀವಿಸುವ ಜೀವಿತವು ದೇವರಿಗಾಗಿಯೇ.
ರೋಮಾಪುರದವರಿಗೆ 6 : 11 (OCVKN)
ಅದೇ ರೀತಿಯಲ್ಲಿ, ನೀವೂ ಸಹ ಪಾಪದ ಪಾಲಿಗೆ ಸತ್ತವರೆಂದೂ ಕ್ರಿಸ್ತ ಯೇಸುವಿನಲ್ಲಿ ದೇವರಿಗಾಗಿ ಜೀವಿಸುವವರೆಂದೂ ಎಣಿಸಿಕೊಳ್ಳಿರಿ.
ರೋಮಾಪುರದವರಿಗೆ 6 : 12 (OCVKN)
ಆದ್ದರಿಂದ ನೀವು ದೇಹದ ಆಶೆಗಳಿಗೆ ಒಳಗಾಗದಂತೆ ನಿಮ್ಮ ನಶ್ವರ ದೇಹಗಳಲ್ಲಿ ಪಾಪವು ಅಧಿಕಾರ ನಡೆಸಲು ಬಿಡಬೇಡಿರಿ.
ರೋಮಾಪುರದವರಿಗೆ 6 : 13 (OCVKN)
ನಿಮ್ಮ ದೇಹದ ಅವಯವಗಳನ್ನು ಅನೀತಿಯನ್ನು ನಡೆಸುವ ಸಾಧನಗಳಾಗುವಂತೆ ಪಾಪಕ್ಕೆ ಒಪ್ಪಿಸಬೇಡಿರಿ. ಆದರೆ ಅದರ ಬದಲಾಗಿ ಮರಣದಿಂದ ಜೀವಕ್ಕೆ ಬಂದವರಂತೆ ನಿಮ್ಮನ್ನು ದೇವರಿಗೆ ಸಮರ್ಪಿಸಿಕೊಳ್ಳಿರಿ. ನಿಮ್ಮ ದೇಹದ ಅವಯವಗಳನ್ನು ನೀತಿಯ ಸಾಧನಗಳಾಗಿರುವುದಕ್ಕಾಗಿ ದೇವರಿಗೆ ಸಮರ್ಪಿಸಿರಿ.
ರೋಮಾಪುರದವರಿಗೆ 6 : 14 (OCVKN)
ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ಏಕೆಂದರೆ ನೀವು ನಿಯಮಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
ರೋಮಾಪುರದವರಿಗೆ 6 : 15 (OCVKN)
ನೀತಿಗೆ ಗುಲಾಮರು ಹಾಗಾದರೆ ಏನು? ನಾವು ನಿಯಮಕ್ಕೆ ಅಧೀನರಾಗಿರದೆ ಕೃಪೆಗೆ ಅಧೀನರಾಗಿರುತ್ತೇವೆಂದು ಪಾಪ ಮಾಡಬಹುದೋ? ಎಂದಿಗೂ ಇಲ್ಲ!
ರೋಮಾಪುರದವರಿಗೆ 6 : 16 (OCVKN)
ನೀವು ಯಾರಾದರೊಬ್ಬರಿಗೆ ವಿಧೇಯರಾಗಿರುವುದಕ್ಕಾಗಿ ಗುಲಾಮರಾಗಿ ನಿಮ್ಮನ್ನು ಒಪ್ಪಿಸಿಕೊಟ್ಟಾಗ, ನೀವು ಅವನಿಗೆ ವಿಧೇಯರಾದ ಗುಲಾಮರಾಗುತ್ತೀರಿ ಎಂಬುದು ನಿಮಗೆ ತಿಳಿಯದೋ? ಮರಣಕ್ಕೆ ನಡೆಸುವ ಪಾಪಕ್ಕೆ ನೀವು ಗುಲಾಮರಾಗಿರಬಹುದು ಇಲ್ಲವೆ ನೀತಿಗೆ ನಡೆಸುವ ವಿಧೇಯತೆಗೆ ಒಳಪಟ್ಟಿರಬಹುದು.
ರೋಮಾಪುರದವರಿಗೆ 6 : 17 (OCVKN)
ಆದರೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಒಪ್ಪಿಸಿದ ಬೋಧನೆಗೆ ಹೃದಯದಿಂದ ವಿಧೇಯರಾದುದ್ದಕ್ಕಾಗಿ, ದೇವರಿಗೆ ಸ್ತೋತ್ರವಾಗಲಿ.
ರೋಮಾಪುರದವರಿಗೆ 6 : 18 (OCVKN)
ಪಾಪದಿಂದ ಬಿಡುಗಡೆಹೊಂದಿ ನೀತಿಗೆ ಗುಲಾಮರಾಗಿದ್ದೀರಿ.
ರೋಮಾಪುರದವರಿಗೆ 6 : 19 (OCVKN)
ನೀವು ಶರೀರಭಾವದಲ್ಲಿ ಬಲಹೀನರಾಗಿರುವುದರಿಂದ ನಾನು ಮಾನವ ಮಾತುಗಳಲ್ಲಿ ಇದನ್ನು ಹೇಳುತ್ತಿದ್ದೇನೆ. ನಿಮ್ಮ ದೇಹದ ಅವಯವಗಳನ್ನು ಅಶುದ್ಧತೆಗೂ ಅಧರ್ಮಕ್ಕೂ ದಾಸತ್ವದಲ್ಲಿ ಒಪ್ಪಿಸಿ ಕೊಡುತ್ತಿದ್ದಂತೆಯೇ ನೀವು ಈಗ ಅವುಗಳನ್ನು ಪರಿಶುದ್ಧತೆಗೆ ನಡೆಸುವ ನೀತಿಗೆ ಗುಲಾಮರಾಗಿ ಒಪ್ಪಿಸಿರಿ.
ರೋಮಾಪುರದವರಿಗೆ 6 : 20 (OCVKN)
ನೀವು ಪಾಪಕ್ಕೆ ಗುಲಾಮರಾಗಿದ್ದಾಗ ನೀತಿಗೆ ಅಧೀನರಾಗಿರಲಿಲ್ಲ.
ರೋಮಾಪುರದವರಿಗೆ 6 : 21 (OCVKN)
ಆದ್ದರಿಂದ ಈಗ ನೀವು ನಾಚಿಕೆ ಪಟ್ಟುಕೊಳ್ಳುತ್ತಿರುವ ಸಂಗತಿಗಳಿಂದ ನಿಮಗಾದ ಲಾಭವೇನು? ಅವು ಮರಣದಲ್ಲಿ ಸಮಾಪ್ತವಾಗುತ್ತವೆ!
ರೋಮಾಪುರದವರಿಗೆ 6 : 22 (OCVKN)
ಆದರೆ ಈಗ ನೀವು ಪಾಪದಿಂದ ಬಿಡುಗಡೆ ಹೊಂದಿದವರಾಗಿ ದೇವರಿಗೆ ಗುಲಾಮರಾಗಿರುವುದರಿಂದ, ಪವಿತ್ರವಾಗಿರುವುದೇ ನಿಮಗೆ ದೊರಕುವ ಫಲವು. ಕಡೆಗೆ ದೊರೆಯುವಂಥದು ನಿತ್ಯಜೀವವಾಗಿರುತ್ತದೆ.
ರೋಮಾಪುರದವರಿಗೆ 6 : 23 (OCVKN)
ಏಕೆಂದರೆ ಪಾಪವು ಕೊಡುವ ಸಂಬಳ ಮರಣ, ದೇವರ ಉಚಿತ ವರವಾದರೋ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿ ಇರುವ ನಿತ್ಯಜೀವ.

1 2 3 4 5 6 7 8 9 10 11 12 13 14 15 16 17 18 19 20 21 22 23