ರೋಮಾಪುರದವರಿಗೆ 8 : 1 (OCVKN)
ಪವಿತ್ರಾತ್ಮರ ಮೂಲಕ ಜೀವನ ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.
ರೋಮಾಪುರದವರಿಗೆ 8 : 2 (OCVKN)
ಏಕೆಂದರೆ ಕ್ರಿಸ್ತ ಯೇಸುವಿನ ಮೂಲಕ ಪವಿತ್ರಾತ್ಮರ ಜೀವದ ನಿಯಮವು ನಿನ್ನನ್ನು* ಕೆಲವು ಪ್ರತಿಗಳಲ್ಲಿ ನನ್ನನ್ನು ಪಾಪದ ನಿಯಮದಿಂದಲೂ ಮರಣದ ನಿಯಮದಿಂದಲೂ ಬಿಡುಗಡೆ ಮಾಡಿದೆ.
ರೋಮಾಪುರದವರಿಗೆ 8 : 3 (OCVKN)
ನಿಯಮವು ನಮ್ಮ ಮಾಂಸಭಾವದ ಬಲಹೀನತೆಯಿಂದ ಯಾವುದನ್ನು ಮಾಡಲಿಕ್ಕೆ ಸಾಧ್ಯವಾಗದೆ ಹೋಯಿತೋ ಅದನ್ನು ದೇವರೇ ಮಾಡಿದರು. ಪಾಪ ಪರಿಹಾರಕ್ಕಾಗಿ ದೇವರು ತಮ್ಮ ಸ್ವಂತ ಪುತ್ರನನ್ನು ಪಾಪಮಯವಾದ ನರಮಾಂಸದ ರೂಪದಲ್ಲಿ ಕಳುಹಿಸಿಕೊಟ್ಟರು. ಆ ನರಮಾಂಸದಲ್ಲಿಯೇ ಪಾಪಕ್ಕೆ ದಂಡನಾತೀರ್ಪು ಮಾಡಿ ಸಾಧ್ಯಗೊಳಿಸಿದರು.
ರೋಮಾಪುರದವರಿಗೆ 8 : 4 (OCVKN)
ಹೀಗೆ ನಾವು ಮಾಂಸಭಾವದವರಾಗಿ ಬಾಳದೆ ಪವಿತ್ರಾತ್ಮರಿಗನುಸಾರವಾಗಿ ಬಾಳುವ ನಮ್ಮಲ್ಲಿ ನಿಯಮದ ಅಗತ್ಯವು ನೆರವೇರುವುದಕ್ಕೆ ಆಸ್ಪದವಾಯಿತು.
ರೋಮಾಪುರದವರಿಗೆ 8 : 5 (OCVKN)
ಮಾಂಸಭಾವದವರಾಗಿ ಬಾಳುವವರ ಮನಸ್ಸು ಅದಕ್ಕೆ ಸಂಬಂಧಪಟ್ಟವುಗಳ ಮೇಲಿರುತ್ತದೆ. ಆದರೆ ಪವಿತ್ರಾತ್ಮ ದೇವರಿಗೆ ಅನುಸಾರವಾಗಿ ಬಾಳುವವರ ಮನಸ್ಸು ಪವಿತ್ರಾತ್ಮ ದೇವರಿಗೆ ಸಂಬಂಧಪಟ್ಟವುಗಳ ಮೇಲಿರುತ್ತದೆ.
ರೋಮಾಪುರದವರಿಗೆ 8 : 6 (OCVKN)
ಮಾಂಸಭಾವದ ಮನಸ್ಸು ಮರಣಕರವಾದದ್ದು, ಪವಿತ್ರಾತ್ಮ ದೇವರ ಮೇಲೆ ಮನಸ್ಸಿಡುವುದು ಜೀವವೂ ಸಮಾಧಾನವೂ ಆಗಿರುತ್ತದೆ.
ರೋಮಾಪುರದವರಿಗೆ 8 : 7 (OCVKN)
ಮಾಂಸಭಾವದ ಮನಸ್ಸು ದೇವರಿಗೆ ಶತ್ರುವಾಗಿರುತ್ತದೆ. ಏಕೆಂದರೆ, ಅದು ದೇವರ ನಿಯಮಕ್ಕೆ ಒಳಪಡುವುದೂ ಇಲ್ಲ, ಒಳಪಡುವುದಕ್ಕಾಗುವುದೂ ಇಲ್ಲ.
ರೋಮಾಪುರದವರಿಗೆ 8 : 8 (OCVKN)
ಮಾಂಸಭಾವಕ್ಕೆ ಒಳಗಾದವರು ದೇವರನ್ನು ಮೆಚ್ಚಿಸಲಾರರು.
ರೋಮಾಪುರದವರಿಗೆ 8 : 9 (OCVKN)
ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ.
ರೋಮಾಪುರದವರಿಗೆ 8 : 10 (OCVKN)
ಆದರೆ ಕ್ರಿಸ್ತ ಯೇಸು ನಿಮ್ಮಲ್ಲಿ ಇರುವುದಾದರೆ, ನಿಮ್ಮ ಶರೀರವು ಪಾಪದ ನಿಮಿತ್ತ ಸತ್ತಿದ್ದರೂ ನಿಮ್ಮ ಆತ್ಮವು ನೀತಿಯ ನಿಮಿತ್ತ ಜೀವಿಸುತ್ತದೆ.
ರೋಮಾಪುರದವರಿಗೆ 8 : 11 (OCVKN)
ಯೇಸುವನ್ನು ಮರಣದಿಂದ ಜೀವಂತವಾಗಿ ಎಬ್ಬಿಸಿದ ದೇವರ ಆತ್ಮವು ನಿಮ್ಮಲ್ಲಿ ವಾಸಮಾಡುತ್ತಿರುವುದಾದರೆ, ಕ್ರಿಸ್ತ ಯೇಸುವನ್ನು ಮರಣದಿಂದ ಎಬ್ಬಿಸಿದ ದೇವರು ನಿಮ್ಮಲ್ಲಿ ವಾಸಿಸುವ ಪವಿತ್ರಾತ್ಮ ದೇವರ ಮೂಲಕವೇ ನಿಮ್ಮ ಸಾಯುತ್ತಿರುವ ದೇಹಗಳಿಗೂ ಜೀವವನ್ನು ಕೊಡುವರು.
ರೋಮಾಪುರದವರಿಗೆ 8 : 12 (OCVKN)
ಆದ್ದರಿಂದ, ಪ್ರಿಯರೇ, ನಾವು ಮಾಂಸಭಾವದ ಹಂಗಿನಲ್ಲಿಲ್ಲ. ಅದರ ಆಶಾಪಾಶಗಳಿಗೆ ಅನುಗುಣವಾಗಿ ಬದುಕಲು ಋಣಸ್ಥರಲ್ಲ.
ರೋಮಾಪುರದವರಿಗೆ 8 : 13 (OCVKN)
ಏಕೆಂದರೆ, ನೀವು ಮಾಂಸಭಾವಕ್ಕೆ ಅನುಸಾರವಾಗಿ ಜೀವಿಸಿದರೆ, ಸಾಯುವಿರಿ. ಆದರೆ ಪವಿತ್ರಾತ್ಮ ದೇವರಿಂದ ದೈಹಿಕ ದುರಭ್ಯಾಸಗಳನ್ನು ಸಾಯಿಸಿದರೆ, ನೀವು ಬದುಕುವಿರಿ.
ರೋಮಾಪುರದವರಿಗೆ 8 : 14 (OCVKN)
ಯಾರು ದೇವರ ಆತ್ಮರಿಂದ ನಡಿಸಿಕೊಳ್ಳುತ್ತಾರೋ ಅವರು ದೇವರ ಪುತ್ರರಾಗಿರುತ್ತಾರೆ.
ರೋಮಾಪುರದವರಿಗೆ 8 : 15 (OCVKN)
ನಿಮ್ಮನ್ನು ಪುನಃ ಭಯಕ್ಕೆ ದಾಸರನ್ನಾಗಿ ಮಾಡುವ ಆತ್ಮನನ್ನು ನಾವು ಹೊಂದದೆ, ಪುತ್ರತ್ವದ ಪವಿತ್ರಾತ್ಮನನ್ನೇ ಹೊಂದಿದವರಾಗಿ ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುತ್ತೇವೆ.
ರೋಮಾಪುರದವರಿಗೆ 8 : 16 (OCVKN)
ನಾವು ದೇವರ ಮಕ್ಕಳಾಗಿದ್ದೇವೆ ಎಂಬುದಕ್ಕೆ ದೇವರ ಆತ್ಮರು ನಮ್ಮ ಆತ್ಮದೊಂದಿಗೆ ಸಾಕ್ಷಿಕೊಡುತ್ತಾರೆ.
ರೋಮಾಪುರದವರಿಗೆ 8 : 17 (OCVKN)
ನಾವು ಈಗ ಮಕ್ಕಳಾಗಿರುವುದಾದರೆ, ಬಾಧ್ಯರಾಗಿರುತ್ತೇವೆ; ದೇವರಿಗೆ ಬಾಧ್ಯರು ಮತ್ತು ಕ್ರಿಸ್ತ ಯೇಸುವಿನೊಂದಿಗೆ ಸಹಬಾಧ್ಯರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನ ಶ್ರಮೆಗಳಲ್ಲಿ ನಿಜವಾಗಿಯೂ ಪಾಲುಗಾರರಾಗಿದ್ದರೆ, ಅವರ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.
ರೋಮಾಪುರದವರಿಗೆ 8 : 18 (OCVKN)
ಮುಂದಣ ಮಹಿಮೆ ನಮಗೆ ಮುಂದೆ ಪ್ರಕಟವಾಗಲಿರುವ ಮಹಿಮೆಯೊಂದಿಗೆ ಹೋಲಿಸುವಾಗ ಈಗಿನ ಸಂಕಟಗಳು ಅಲ್ಪವೆಂದು ನಾನು ಎಣಿಸುತ್ತೇನೆ.
ರೋಮಾಪುರದವರಿಗೆ 8 : 19 (OCVKN)
ದೇವರ ಮಕ್ಕಳ ಪ್ರತ್ಯಕ್ಷತೆಯನ್ನು ಸೃಷ್ಟಿಯು ಆತುರದಿಂದ ಎದುರು ನೋಡುತ್ತಿದೆ.
ರೋಮಾಪುರದವರಿಗೆ 8 : 20 (OCVKN)
ಸೃಷ್ಟಿಯು ನಾಶಕ್ಕೆ ಒಳಗಾಯಿತು. ಆದರೆ ಸ್ವಂತ ಇಚ್ಛೆಯಿಂದಲ್ಲ. ಅದನ್ನು ನಿರೀಕ್ಷೆಯಿಂದ ಒಳಪಡಿಸಿದ ದೇವರಿಂದಲೇ ಆಯಿತು. ಆದರೂ ಸೃಷ್ಟಿಗೂ ನಿರೀಕ್ಷೆಯಿದೆ.
ರೋಮಾಪುರದವರಿಗೆ 8 : 21 (OCVKN)
ಈ ಸೃಷ್ಟಿಯು ಕೂಡ ನಾಶದ ಬಂಧನದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ.
ರೋಮಾಪುರದವರಿಗೆ 8 : 22 (OCVKN)
ಈವರೆಗೂ ಸೃಷ್ಟಿಯೆಲ್ಲ ಪ್ರಸವ ವೇದನೆಯಂಥ ನೋವಿನಿಂದ ನರಳುತ್ತಿದೆ ಎಂದು ನಾವು ಬಲ್ಲೆವು.
ರೋಮಾಪುರದವರಿಗೆ 8 : 23 (OCVKN)
ಅಷ್ಟೇ ಅಲ್ಲದೆ, ಪವಿತ್ರಾತ್ಮ ದೇವರ ಪ್ರಥಮ ಫಲವನ್ನು ಹೊಂದಿದವರಾಗಿರುವ ನಾವು ಕೂಡ, ಮಕ್ಕಳ ಪದವಿಯನ್ನು ಪಡೆಯುವುದಕ್ಕಾಗಿ ನಮ್ಮ ದೇಹಗಳ ಬಿಡುಗಡೆಗಾಗಿ ಎದುರುನೋಡುತ್ತಾ ಆತುರದಿಂದ ನರಳುತ್ತಾ ಇದ್ದೇವೆ.
ರೋಮಾಪುರದವರಿಗೆ 8 : 24 (OCVKN)
ಈ ನಿರೀಕ್ಷೆಯಿಂದಲೇ ನಾವು ರಕ್ಷಣೆಯನ್ನು ಹೊಂದಿದವರಾಗಿದ್ದೇವೆ. ಆದರೆ ಕಣ್ಣಿಗೆ ಕಾಣುವ ನಿರೀಕ್ಷೆಯು ನಿರೀಕ್ಷೆಯೇ ಅಲ್ಲ. ಕಾಣುತ್ತಿರುವುದನ್ನು ಯಾರಾದರೂ ನಿರೀಕ್ಷಿಸುವರೋ?
ರೋಮಾಪುರದವರಿಗೆ 8 : 25 (OCVKN)
ಆದರೆ ನಾವು ಇನ್ನು ಕಾಣದಿರುವಂಥದ್ದಕ್ಕಾಗಿ ನಿರೀಕ್ಷಿಸುವುದಾದರೆ ಅದಕ್ಕಾಗಿ ತಾಳ್ಮೆಯಿಂದ ಕಾದುಕೊಂಡಿರುತ್ತೇವೆ.
ರೋಮಾಪುರದವರಿಗೆ 8 : 26 (OCVKN)
ಅದೇ ರೀತಿಯಲ್ಲಿ ಪವಿತ್ರಾತ್ಮರು ನಮ್ಮ ಬಲಹೀನತೆಯಲ್ಲಿ ನಮಗೆ ಸಹಾಯ ಮಾಡುತ್ತಾರೆ. ಯಾವುದಕ್ಕಾಗಿ ಹೇಗೆ ಪ್ರಾರ್ಥಿಸಬೇಕೆಂದು ನಾವು ತಿಳಿಯದವರಾಗಿದ್ದೇವೆ. ಆದರೆ ಪವಿತ್ರಾತ್ಮರು ತಾವೇ ಮಾತುಗಳಿಂದ ವ್ಯಕ್ತಪಡಿಸಲು ಸಾಧ್ಯವಾಗದ ನರಳಾಟದೊಂದಿಗೆ ನಮಗೋಸ್ಕರ ಪ್ರಾರ್ಥಿಸುವವರಾಗಿದ್ದಾರೆ.
ರೋಮಾಪುರದವರಿಗೆ 8 : 27 (OCVKN)
ನಮ್ಮ ಹೃದಯಗಳನ್ನು ಪರಿಶೋಧಿಸುವ ದೇವರು ಪವಿತ್ರಾತ್ಮರ ಮನಸ್ಸನ್ನು ಬಲ್ಲವರಾಗಿದ್ದಾರೆ. ಏಕೆಂದರೆ ಪವಿತ್ರಾತ್ಮರು ದೇವಜನರಿಗಾಗಿ ದೇವರ ಚಿತ್ತದ ಪ್ರಕಾರ ವಿಜ್ಞಾಪಿಸುತ್ತಾರೆ.
ರೋಮಾಪುರದವರಿಗೆ 8 : 28 (OCVKN)
ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.
ರೋಮಾಪುರದವರಿಗೆ 8 : 29 (OCVKN)
ಅನೇಕ ಸಹೋದರರ ಮಧ್ಯೆ ಜ್ಯೇಷ್ಠಪುತ್ರನೆನಿಸುವಂತೆ ದೇವರು ಯಾರನ್ನು ಮೊದಲು ತಿಳಿದುಕೊಂಡರೋ ಅವರನ್ನು ತಮ್ಮ ಪುತ್ರನ ಹೋಲಿಕೆಗೆ ಸಮಾನರಾಗುವಂತೆ ಮುಂದಾಗಿ ನೇಮಿಸಿದರು.
ರೋಮಾಪುರದವರಿಗೆ 8 : 30 (OCVKN)
ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು.
ರೋಮಾಪುರದವರಿಗೆ 8 : 31 (OCVKN)
ಜಯಶಾಲಿಗಳಿಗಿಂತಲೂ ಹೆಚ್ಚಿನವರು ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?
ರೋಮಾಪುರದವರಿಗೆ 8 : 32 (OCVKN)
ದೇವರು ತಮ್ಮ ಸ್ವಂತ ಮಗನನ್ನೇ ಉಳಿಸಿಕೊಳ್ಳದೆ ನಮ್ಮೆಲ್ಲರಿಗೋಸ್ಕರ ಕ್ರಿಸ್ತ ಯೇಸುವನ್ನು ಕೊಟ್ಟ ಮೇಲೆ ನಮಗೆ ಉದಾರವಾಗಿ ಅವರೊಂದಿಗೆ ಎಲ್ಲವನ್ನು ಸಹ ಕೊಡದೆ ಇರುವರೇ?
ರೋಮಾಪುರದವರಿಗೆ 8 : 33 (OCVKN)
ದೇವರು ತಾವೇ ಆರಿಸಿಕೊಂಡವರ ಮೇಲೆ ದೋಷಾರೋಪಣೆ ಮಾಡುವವರಾರು? ದೇವರೇ ನೀತಿವಂತರೆಂದು ನಿರ್ಣಯ ಮಾಡುವವರಾಗಿರುತ್ತಾರೆ.
ರೋಮಾಪುರದವರಿಗೆ 8 : 34 (OCVKN)
ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತ ಯೇಸು ಮರಣವನ್ನು ಹೊಂದಿದ್ದಲ್ಲದೆ, ಜೀವಿತರಾಗಿ ಎದ್ದು ದೇವರ ಬಲಗಡೆಯಲ್ಲಿ ಇದ್ದಾರೆ ಮತ್ತು ಅವರೇ ನಮಗೋಸ್ಕರ ವಿಜ್ಞಾಪಿಸುವವರಾಗಿರುತ್ತಾರೆ.
ರೋಮಾಪುರದವರಿಗೆ 8 : 35 (OCVKN)
ಕ್ರಿಸ್ತ ಯೇಸುವಿನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಇಕ್ಕಟ್ಟೋ ಹಿಂಸೆಯೋ ಆಹಾರವಿಲ್ಲದಿರುವುದೋ ಬಟ್ಟೆ ಇಲ್ಲದಿರುವುದೋ ಅಪಾಯವೋ ಖಡ್ಗವೋ? ಇವೆಲ್ಲವೂ ನಮ್ಮನ್ನು ಅಗಲಿಸಲಾರವು.
ರೋಮಾಪುರದವರಿಗೆ 8 : 36 (OCVKN)
ಇವು ಪವಿತ್ರ ವೇದದಲ್ಲಿ ಬರೆದಿರುವಂತೆ ಇವೆ: “ನಿನಗೋಸ್ಕರ ನಾವು ದಿನವೆಲ್ಲಾ ಮರಣಕ್ಕೆ ಗುರಿಯಾಗಿದ್ದೇವೆ; ವಧಿಸಲಿಕ್ಕಾಗಿರುವ ಕುರಿಗಳಂತೆ ನಾವು ಭಾವಿಸಿರುತ್ತೇವೆ.”† ಕೀರ್ತನೆ 44:22
ರೋಮಾಪುರದವರಿಗೆ 8 : 37 (OCVKN)
37 ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.
ರೋಮಾಪುರದವರಿಗೆ 8 : 38 (OCVKN)
ಏಕೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ವರ್ತಮಾನಕಾಲದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ, ಯಾವುದೇ ಶಕ್ತಿಯಾಗಲಿ,
ರೋಮಾಪುರದವರಿಗೆ 8 : 39 (OCVKN)
ಎತ್ತರವಾಗಲಿ, ಆಳವಾಗಲಿ ಅಥವಾ ಸೃಷ್ಟಿಯಲ್ಲಿರುವ ಬೇರೆ ಯಾವುದೇ ಆಗಲಿ ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ನಮ್ಮನ್ನು ಅಗಲಿಸಲಾಗದೆಂದು ನಮಗೆ ದೃಢ ನಿಶ್ಚಯವಿದೆ.
❮
❯