ರೋಮಾಪುರದವರಿಗೆ 9 : 1 (OCVKN)
ಇಸ್ರಾಯೇಲರ ಮೇಲೆ ಪೌಲನ ವೇದನೆ ನಾನು ಕ್ರಿಸ್ತ ಯೇಸುವಿನಲ್ಲಿ ಸತ್ಯವನ್ನು ಮಾತನಾಡುತ್ತೇನೆ. ನಾನು ಸುಳ್ಳು ಹೇಳುತ್ತಾ ಇಲ್ಲ. ನನ್ನ ಮನಸ್ಸಾಕ್ಷಿಯು ಇದನ್ನು ಪವಿತ್ರಾತ್ಮ ದೇವರ ಮೂಲಕ ಖಚಿತ ಪಡಿಸುತ್ತದೆ.
ರೋಮಾಪುರದವರಿಗೆ 9 : 2 (OCVKN)
ನನ್ನ ಹೃದಯದಲ್ಲಿ ಮಹಾದುಖಃವೂ ಎಡೆಬಿಡದ ವೇದನೆಯೂ ತೀರದವೇದನೆಯೂ ಇದೆ.
ರೋಮಾಪುರದವರಿಗೆ 9 : 3 (OCVKN)
ನನ್ನ ಸ್ವಂತ ಜನರಾದ ನನ್ನ ಯೆಹೂದ್ಯ ಸಹೋದರರಿಗಾಗಿ, ಸಾಧ್ಯವಾದರೆ ನಾನೇ ಕ್ರಿಸ್ತ ಯೇಸುವಿನಿಂದ ದೂರಹೋಗಿ ಶಾಪಗ್ರಸ್ತನಾಗಲು ಸಿದ್ಧನಾಗಿದ್ದೇನೆ.
ರೋಮಾಪುರದವರಿಗೆ 9 : 4 (OCVKN)
ಇಸ್ರಾಯೇಲರಾದ ಅವರಿಗೆ ಸ್ವೀಕಾರವೂ ದೇವರ ಮಹಿಮೆಯೂ ಒಡಂಬಡಿಕೆಗಳೂ ನಿಯಮ ಕೊಡೋಣವೂ ದೇವಾಲಯದ ಸೇವೆಯೂ ಹಾಗೂ ವಾಗ್ದಾನಗಳೂ ಒಪ್ಪಿಸಲಾಗಿವೆ.
ರೋಮಾಪುರದವರಿಗೆ 9 : 5 (OCVKN)
ನಮ್ಮ ಪಿತೃಗಳು ಅವರಿಗೆ ಸೇರಿದವರು. ಕ್ರಿಸ್ತ ಯೇಸುವು ಮನುಷ್ಯರಾಗಿ ಹುಟ್ಟಿದ್ದು ಅವರ ವಂಶದಲ್ಲಿಯೇ; ಈ ಕ್ರಿಸ್ತ ಯೇಸುವೇ ಎಲ್ಲರ ಮೇಲಿರುವ ದೇವರೂ ಎಂದೆಂದಿಗೂ ಸ್ತುತಿಹೊಂದತಕ್ಕವರೂ ಆಗಿದ್ದಾರೆ! ಆಮೆನ್.
ರೋಮಾಪುರದವರಿಗೆ 9 : 6 (OCVKN)
ದೇವರ ಸಾರ್ವಭೌಮ ಆಯ್ಕೆ ಇದು ದೇವರ ವಾಕ್ಯವು ನೆರವೇರಲಿಲ್ಲ ಎಂಬಂತೆ ಅಲ್ಲ. ಏಕೆಂದರೆ ಇಸ್ರಾಯೇಲ್ ವಂಶದಲ್ಲಿ ಬಂದವರೆಲ್ಲರೂ ಇಸ್ರಾಯೇಲರಲ್ಲ.
ರೋಮಾಪುರದವರಿಗೆ 9 : 7 (OCVKN)
ಅಥವಾ ಅಬ್ರಹಾಮನ ಸಂತತಿಯವರೆಲ್ಲ ಅವನ ಮಕ್ಕಳಲ್ಲ. ಆದರೆ, “ಇಸಾಕನಿಂದ ಹುಟ್ಟುವವರೇ ನಿನ್ನ ಸಂತತಿ ಎನಿಸಿಕೊಳ್ಳುವರು,”* ಆದಿ 21:12 ಎಂದು ಹೇಳಲಾಗಿದೆ.
ರೋಮಾಪುರದವರಿಗೆ 9 : 8 (OCVKN)
ಇದರ ಅರ್ಥ, ಶರೀರಸಂಬಂಧದ ಮಕ್ಕಳು ದೇವರ ಮಕ್ಕಳಾಗಿರದೆ ವಾಗ್ದಾನದ ಮಕ್ಕಳೇ ಅಬ್ರಹಾಮನ ಮಕ್ಕಳೆಂದು ಎನಿಸಿಕೊಳ್ಳುವರು ಎಂಬುದು.
ರೋಮಾಪುರದವರಿಗೆ 9 : 9 (OCVKN)
ಏಕೆಂದರೆ, “ನೇಮಕವಾದ ಕಾಲದಲ್ಲಿ ನಾನು ತಿರುಗಿ ಬಂದಾಗ ಸಾರಳಿಗೆ ಒಬ್ಬ ಮಗನಿರುವನು,”† ಆದಿ 18:10,14 ಅದು ವಾಗ್ದಾನದ ಮಾತಾಗಿತ್ತು.
ರೋಮಾಪುರದವರಿಗೆ 9 : 10 (OCVKN)
ಇದು ಮಾತ್ರವಲ್ಲದೆ, ರೆಬೆಕ್ಕಳು ಸಹ ನಮ್ಮ ಪಿತೃವಾದ ಇಸಾಕನ ಮೂಲಕ ಅವಳಿಜವಳಿ ಮಕ್ಕಳನ್ನು ಪಡೆದಳು.
ರೋಮಾಪುರದವರಿಗೆ 9 : 11 (OCVKN)
ಹೀಗೆ, ಆ ಮಕ್ಕಳು ಹುಟ್ಟುವುದಕ್ಕೆ ಮುಂಚೆ, ಒಳ್ಳೆಯದು ಅಥವಾ ಕೆಟ್ಟದ್ದನ್ನು ಮಾಡುವುದಕ್ಕೆ ಮುಂಚೆಯೇ, ದೇವರ ಆಯ್ಕೆಯ ಉದ್ದೇಶವು ಕೃತ್ಯಗಳಿಗೆ ಅನುಸಾರವಲ್ಲವೆಂಬುದು ಸ್ಥಿರವಾಯಿತು.
ರೋಮಾಪುರದವರಿಗೆ 9 : 12 (OCVKN)
ಆದರೆ ಅದು ಕರೆಯುವಾತನಿಂದಲೇ, “ಹಿರಿಯನು ಕಿರಿಯವನಿಗೆ ಸೇವೆಮಾಡುವನು,”‡ ಆದಿ 25:23 ಎಂದು ರೆಬೆಕ್ಕಳಿಗೆ ಹೇಳಲಾಗಿತ್ತು.
ರೋಮಾಪುರದವರಿಗೆ 9 : 13 (OCVKN)
ಇದಕ್ಕನುಸಾರವಾಗಿ, “ಯಾಕೋಬನನ್ನು ನಾನು ಪ್ರೀತಿಸಿದೆನು, ಆದರೆ ಏಸಾವನನ್ನು ಹಗೆ ಮಾಡಿದೆನು,”§ ಮಲಾಕಿ 1:2,3 ಎಂದು ಬರೆದಿರುತ್ತದೆ.
ರೋಮಾಪುರದವರಿಗೆ 9 : 14 (OCVKN)
ಹಾಗಾದರೆ ನಾವು ಏನು ಹೇಳೋಣ? ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ.
ರೋಮಾಪುರದವರಿಗೆ 9 : 15 (OCVKN)
ದೇವರು ಮೋಶೆಗೆ ಹೇಳಿದ್ದೇನೆಂದರೆ, “ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು.”* ವಿಮೋ 33:19
ರೋಮಾಪುರದವರಿಗೆ 9 : 16 (OCVKN)
16 ಆದ್ದರಿಂದ ದೇವರ ಆಯ್ಕೆಯು ಮನುಷ್ಯನ ಬಯಕೆ ಅಥವಾ ಪ್ರಯತ್ನದಿಂದಾಗಿರದೆ, ದೇವರ ಕರುಣೆಯಿಂದಲೇ ಆಗಿದೆ.
ರೋಮಾಪುರದವರಿಗೆ 9 : 17 (OCVKN)
ಏಕೆಂದರೆ, “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು,”† ವಿಮೋ 9:16 ಎಂದು ಪವಿತ್ರ ವೇದದಲ್ಲಿ ದೇವರು ಫರೋಹನಿಗೆ ಹೇಳುತ್ತಾರೆ.
ರೋಮಾಪುರದವರಿಗೆ 9 : 18 (OCVKN)
ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ.
ರೋಮಾಪುರದವರಿಗೆ 9 : 19 (OCVKN)
ಹಾಗಾದರೆ ನೀನು, “ದೇವರು ಇನ್ನೂ ತಪ್ಪು ಕಂಡುಹಿಡಿಯುವುದು ಏಕೆ? ದೇವರ ಸಂಕಲ್ಪವನ್ನು ಎದುರಿಸುವವರು ಯಾರು?” ಎಂದು ನೀನು ನನ್ನನ್ನು ಕೇಳುವೆ.
ರೋಮಾಪುರದವರಿಗೆ 9 : 20 (OCVKN)
ಎಲೈ, ಮನುಷ್ಯನೇ, ದೇವರಿಗೆ ಎದುರಾಗಿ ಮಾತನಾಡಲು ನೀನು ಯಾರು? “ರೂಪಿಸಿರುವುದು ರೂಪಿಸಿದವನಿಗೆ, ‘ಏಕೆ ನನ್ನನ್ನು ಹೀಗೆ ರೂಪಿಸಿದೆ?’ ”‡ ಯೆಶಾಯ 29:16; 45:9 ಎಂದು ಪ್ರಶ್ನಿಸಬಹುದೋ?
ರೋಮಾಪುರದವರಿಗೆ 9 : 21 (OCVKN)
ಕುಂಬಾರನಿಗೆ ಒಂದೇ ಮಣ್ಣಿನ ರಾಶಿಯಿಂದ ಒಂದನ್ನು ಉತ್ತಮವಾದ ಪಾತ್ರೆಯನ್ನಾಗಿಯೂ ಮತ್ತೊಂದನ್ನು ಸಾಮಾನ್ಯವಾದ ಪಾತ್ರೆಯನ್ನಾಗಿಯೂ ಮಾಡುವ ಅಧಿಕಾರ ಇಲ್ಲವೋ?
ರೋಮಾಪುರದವರಿಗೆ 9 : 22 (OCVKN)
ನಾಶಕ್ಕೂ, ಕೋಪಾಗ್ನಿಗೂ ಪಾತ್ರೆಯಾಗಿರುವುದರ ಮೇಲೆ ದೇವರು ತಮ್ಮ ಕೋಪವನ್ನು ತೋರಿಸಿ ತಮ್ಮ ಸಾಮರ್ಥ್ಯವನ್ನು ತಿಳಿಯಪಡಿಸಬೇಕೆಂದಿದ್ದರೂ ಬಹು ಸಹನೆಯಿಂದ ತಾಳಿಕೊಂಡಿರಲು ಬಯಸಿದರೆ, ಯಾರು ಏನು ಮಾಡಬಹುದು?
ರೋಮಾಪುರದವರಿಗೆ 9 : 23 (OCVKN)
ದೇವರು ಯೆಹೂದ್ಯರೊಳಗಿಂದ ಮಾತ್ರವೇ ಕರೆಯದೆ, ಯೆಹೂದ್ಯರಲ್ಲದವರಿಂದಲೂ ಕರೆದು, ಮಹಿಮೆಗೆಂದು ಮೊದಲೇ ಸಿದ್ಧಮಾಡಿ, ತಮ್ಮ ಕರುಣೆಗೆ ಪಾತ್ರರಾದ ಜನರಿಗೆ ತಮ್ಮ ಮಹಿಮೆಯ ಐಶ್ವರ್ಯವನ್ನು ಪ್ರಕಟಿಸಲು ಇದನ್ನು ಮಾಡಿದರು.
ರೋಮಾಪುರದವರಿಗೆ 9 : 24 (OCVKN)
ಇದಕ್ಕಾಗಿಯೇ ದೇವರು ಯೆಹೂದ್ಯರನ್ನು ಮಾತ್ರವೇ ಕರೆಯದೆ ಯೆಹೂದ್ಯರಲ್ಲದವರನ್ನು ಸಹ ಕರೆದಿದ್ದಾರಲ್ಲಾ?
ರೋಮಾಪುರದವರಿಗೆ 9 : 25 (OCVKN)
ಹೋಶೇಯನ ಪ್ರವಾದನೆಯಲ್ಲಿ ದೇವರು, “ನನ್ನ ಜನರಲ್ಲದವರನ್ನು ‘ನನ್ನ ಜನರು,’ ಎಂದು ಕರೆಯುವರು. ನಾನು ಪ್ರೀತಿಸದವರನ್ನು ನನ್ನ ‘ಪ್ರಿಯರು’ ಎಂದೂ ಹೇಳುವರು.”§ ಹೋಶೇ 2:23
ರೋಮಾಪುರದವರಿಗೆ 9 : 26 (OCVKN)
26 ಮತ್ತು, “ಯಾವ ಸ್ಥಳದಲ್ಲಿ ‘ನೀವು ನನ್ನ ಜನರಲ್ಲ,’ ಎಂದು ಅವರಿಗೆ ಹೇಳಲಾಗಿತ್ತೋ, ಆ ಸ್ಥಳದಲ್ಲಿಯೇ, ‘ಅವರು ಜೀವಸ್ವರೂಪಿಯಾದ ದೇವರ ಮಕ್ಕಳು,’ ಎಂದು ಕರೆಯಲಾಗುವರು,”* ಹೋಶೇ 1:10 ಎಂದು ದೇವರು ಹೇಳುತ್ತಾರೆ.
ರೋಮಾಪುರದವರಿಗೆ 9 : 27 (OCVKN)
27 ಇದಲ್ಲದೆ ಯೆಶಾಯನು ಇಸ್ರಾಯೇಲರನ್ನು ಕುರಿತು ಕೂಗಿ ಹೇಳುವುದೇನೆಂದರೆ, “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಣೆಹೊಂದುವರು.
ರೋಮಾಪುರದವರಿಗೆ 9 : 28 (OCVKN)
ಏಕೆಂದರೆ ಕರ್ತನು ತಮ್ಮ ವಾಕ್ಯವನ್ನು ಭೂಮಿಯ ಮೇಲೆ ಅಂತಿಮವಾಗಿಯೂ ತ್ವರಿತವಾಗಿಯೂ ನೆರವೇರಿಸುವರು.”† ಯೆಶಾಯ 10:22,23
ರೋಮಾಪುರದವರಿಗೆ 9 : 29 (OCVKN)
29 ಯೆಶಾಯನು ಈ ಹಿಂದೆ, “ಸೇನಾಧೀಶ್ವರರಾದ ದೇವರು ನಮಗೆ ಸಂತತಿಯನ್ನು ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರದ ಹಾಗೆ ಇರುತ್ತಿದ್ದೆವು.”‡ ಯೆಶಾಯ 1:9 ಎಂದು ಹೇಳಿದ್ದಾನೆ.
ರೋಮಾಪುರದವರಿಗೆ 9 : 30 (OCVKN)
ಇಸ್ರಾಯೇಲಿನ ಅಪನಂಬಿಕೆ ಹಾಗಾದರೆ ನಾವು ಏನು ಹೇಳೋಣ? ನೀತಿಯನ್ನು ಅನುಸರಿಸದ ಯೆಹೂದ್ಯರಲ್ಲದವರು ನಂಬಿಕೆಯ ಮೂಲಕ ದೊರಕುವ ನೀತಿಯನ್ನು ಪಡೆದರು.
ರೋಮಾಪುರದವರಿಗೆ 9 : 31 (OCVKN)
ಆದರೆ ನೀತಿಯ ನಿಯಮವನ್ನು ಅನುಸರಿಸಿದ ಇಸ್ರಾಯೇಲರಾದರೋ ಆ ನೀತಿಯ ಮಾರ್ಗವನ್ನು ಪಡೆಯಲಿಲ್ಲ.
ರೋಮಾಪುರದವರಿಗೆ 9 : 32 (OCVKN)
ಏಕೆ? ಏಕೆಂದರೆ ಅವರು ನಂಬಿಕೆಯನ್ನು ಅನುಸರಿಸದೆ ಕೃತ್ಯಗಳನ್ನು ಅನುಸರಿಸಿದ್ದರಿಂದಲೇ. ಅವರು ಎಡವುಕಲ್ಲನ್ನು ಎಡವಿದರು.
ರೋಮಾಪುರದವರಿಗೆ 9 : 33 (OCVKN)
ಪವಿತ್ರ ವೇದದಲ್ಲಿ ಹೀಗೆ ಬರೆಯಲಾಗಿದೆ: “ಇಗೋ, ನಾನು ಚೀಯೋನಿನಲ್ಲಿ ಜನರು ಎಡವಿ ಬೀಳುವಂತೆ ಮಾಡುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇನೆ. ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗಪಡುವದೇ ಇಲ್ಲ.”§ ಯೆಶಾಯ 8:14; 28:16
❮
❯