ಪರಮ ಗೀತ 3 : 1 (OCVKN)
ರಾತ್ರಿಯೆಲ್ಲಾ ನನ್ನ ಹಾಸಿಗೆಯ ಮೇಲಿದ್ದೆನು; ನನ್ನ ಪ್ರಾಣ ಪ್ರಿಯನನ್ನು ಹುಡಕಿದೆನು. ಅವನನ್ನು ಎಷ್ಟು ಹುಡುಕಿದರೂ ಅವನು ಸಿಗಲಿಲ್ಲ.
ಪರಮ ಗೀತ 3 : 2 (OCVKN)
ನಾನು ಎದ್ದು, ಪಟ್ಟಣವನ್ನು ಸಂಚರಿಸಿ, ಬೀದಿಗಳಲ್ಲಿಯೂ, ಮಾರ್ಗಗಳಲ್ಲಿಯೂ ನನ್ನ ಪ್ರಾಣ ಪ್ರಿಯನನ್ನು ಹುಡುಕಾಡಿದೆನು. ಅವನನ್ನು ಎಷ್ಟು ಹುಡುಕಿದರೂ ಅವನು ಸಿಗಲೇ ಇಲ್ಲ.
ಪರಮ ಗೀತ 3 : 3 (OCVKN)
ನಾನು ಪಟ್ಟಣವನ್ನು ಕಾಯುವ ಕಾವಲುಗಾರರಿಗೆ ಸಿಕ್ಕಿಬಿದ್ದಾಗ, “ನನ್ನ ಪ್ರಾಣ ಪ್ರಿಯನನ್ನು ನೀವು ಕಂಡಿರಾ?” ಎಂದು ವಿಚಾರಿಸಿದೆ.
ಪರಮ ಗೀತ 3 : 4 (OCVKN)
ನಾನು ಅವರನ್ನು ಬಿಟ್ಟು ಸ್ವಲ್ಪ ದೂರ ಹೋದ ಮೇಲೆ, ನನ್ನ ಪ್ರಾಣ ಪ್ರಿಯನನ್ನು ಕಂಡುಕೊಂಡೆನು. ನಾನು ಅವನ ಕೈಯನ್ನು ಹಿಡಿದುಕೊಂಡು ನನ್ನ ತಾಯಿಯ ಮನೆಗೆ, ಹೌದು, ನನ್ನ ಹೆತ್ತವಳ ಕೋಣೆಗೆ ಅವನನ್ನು ಬಿಡದೆ ಕರೆದುಕೊಂಡು ಹೋದೆನು.
ಪರಮ ಗೀತ 3 : 5 (OCVKN)
ಯೆರೂಸಲೇಮಿನ ಪುತ್ರಿಯರೇ, ಮೆಚ್ಚುವ ಕಾಲಕ್ಕೆ ಮುಂಚೆ ನೀವು ಪ್ರೀತಿಯನ್ನು ಎಬ್ಬಿಸಬೇಡಿರಿ. ಎಚ್ಚರಿಸಲೂ ಬೇಡಿರಿ ಎಂದು ಅಡವಿಯ ಹುಲ್ಲೆ ಹರಿಣಿಗಳ ಮೇಲೆ ನಿಮ್ಮಿಂದ ಪ್ರಮಾಣಮಾಡಿಸುತ್ತೇನೆ.
ಪರಮ ಗೀತ 3 : 6 (OCVKN)
ರಕ್ತಬೋಳ, ಸಾಂಬ್ರಾಣಿಗಳಿಂದಲೂ ವರ್ತಕರು ಮಾರುವ ಸಕಲ ಸುಗಂಧ ದ್ರವ್ಯಗಳಿಂದಲೂ ಧೂಮಸ್ತಂಭಗಳಂತೆ ಅಡವಿಯಿಂದ ಬರುವ ಈ ಮೆರವಣೆಗೆ ಯಾರದು?
ಪರಮ ಗೀತ 3 : 7 (OCVKN)
ನೋಡಿರಿ! ಇದು ಸೊಲೊಮೋನನ ರಥ. ಇಸ್ರಾಯೇಲಿನ ಪರಾಕ್ರಮಶಾಲಿಗಳಲ್ಲಿ ಅರವತ್ತು ಮಂದಿ ಅದರ ಸುತ್ತಲಿದ್ದಾರೆ.
ಪರಮ ಗೀತ 3 : 8 (OCVKN)
ಯುದ್ಧ ನಿಪುಣರಾದ ಅವರೆಲ್ಲರೂ ಖಡ್ಗ ಹಿಡಿದಿದ್ದಾರೆ. ರಾತ್ರಿಯ ಅಪಾಯದ ನಿಮಿತ್ತ ಪ್ರತಿಯೊಬ್ಬರೂ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡಿದ್ದಾರೆ.
ಪರಮ ಗೀತ 3 : 9 (OCVKN)
ಅರಸನಾದ ಸೊಲೊಮೋನನು ಲೆಬನೋನಿನ ಮರದಿಂದ ಒಂದು ರಥವನ್ನು ತನಗೆ ಮಾಡಿಸಿಕೊಂಡಿದ್ದನು.
ಪರಮ ಗೀತ 3 : 10 (OCVKN)
ಅವನು ಅದರ ಸ್ತಂಭಗಳನ್ನು ಬೆಳ್ಳಿಯಿಂದಲೂ ಅದರ ಕೆಳಗಿನ ಭಾಗವನ್ನು ಬಂಗಾರದಿಂದಲೂ ಅದರ ಹೊದಿಕೆಯನ್ನು ಧೂಮ್ರವರ್ಣದ ವಸ್ತ್ರದಿಂದಲೂ ಮಾಡಿಸಿದ್ದನು. ಯೆರೂಸಲೇಮಿನ ಪುತ್ರಿಯರು ಪ್ರೀತಿಯಿಂದ ಅದನ್ನು ಅಲಂಕರಿಸಿದ್ದರು.
ಪರಮ ಗೀತ 3 : 11 (OCVKN)
ಚೀಯೋನಿನ ಪುತ್ರಿಯರೇ, ನೀವು ಹೊರಗೆ ಬನ್ನಿರಿ. ಅರಸನಾದ ಸೊಲೊಮೋನನನ್ನು ನೋಡಿರಿ. ಅವನ ಮದುವೆಯ ದಿನದಂದು, ಅವನ ಹೃದಯ ಸಂತೋಷಗೊಂಡ ದಿನದಲ್ಲಿ, ಅವನ ತಾಯಿ ಅವನಿಗೆ ತೊಡಿಸಿದ ಕಿರೀಟವನ್ನು ಅವನು ಧರಿಸಿರುವುದನ್ನು ಬಂದು ನೋಡಿರಿ.
❮
❯
1
2
3
4
5
6
7
8
9
10
11