ಪರಮ ಗೀತ 5 : 1 (OCVKN)
ಪ್ರಿಯಕರ ನನ್ನ ಪ್ರಿಯಳೇ, ನನ್ನ ವಧುವೇ, ನಾನು ನನ್ನ ತೋಟಕ್ಕೆ ಬಂದಿರುವೆ. ನನ್ನ ರಕ್ತಬೋಳ ಸುಗಂಧಗಳನ್ನೂ ಕೂಡಿಸಿರುವೆ. ನನ್ನ ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ. ನನ್ನ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿದ್ದೇನೆ.
ಪರಮ ಗೀತ 5 : 2 (OCVKN)
ಸ್ನೇಹಿತರು ಸ್ನೇಹಿತರೇ, ಊಟಮಾಡಿರಿ, ಕುಡಿಯಿರಿ. ಹೌದು ಪ್ರಿಯರೇ, ಸಮೃದ್ಧಿಯಾಗಿ ಪಾನಮಾಡಿರಿ. ಪ್ರಿಯತಮೆ ನಾನು ನಿದ್ರಿಸುತ್ತಿದ್ದರೂ, ನನ್ನ ಹೃದಯವು ಎಚ್ಚರವಾಗಿತ್ತು. ಇಗೋ! ಬಾಗಿಲು ತಟ್ಟುವ ನನ್ನ ಪ್ರಿಯನ ಶಬ್ದವಿದು: “ನನ್ನ ಪ್ರಿಯಳೇ, ನನ್ನ ವಧುವೇ, ನನ್ನ ಪಾರಿವಾಳವೇ, ಪರಿಪೂರ್ಣಳೇ, ಬಾಗಿಲು ತೆಗೆ! ನನ್ನ ತಲೆ ಮಂಜಿನಿಂದ ನೆನೆದಿದೆ. ನನ್ನ ಕೂದಲು ರಾತ್ರಿಯ ಹನಿಗಳಿಂದ ತೋಯ್ದಿದೆ.”
ಪರಮ ಗೀತ 5 : 3 (OCVKN)
ನಾನು ನನ್ನ ಅಂಗಿಯನ್ನು ತೆಗೆದು ಹಾಕಿರಲು, ಅದನ್ನು ಮತ್ತೆ ಹಾಕಿಕೊಳ್ಳುವುದು ಹೇಗೆ? ನಾನು ನನ್ನ ಕಾಲುಗಳನ್ನು ತೊಳೆದುಕೊಂಡಿರಲು, ನಾನು ಮತ್ತೆ ಅವುಗಳನ್ನು ಕೊಳೆ ಮಾಡುವುದು ಹೇಗೆ?
ಪರಮ ಗೀತ 5 : 4 (OCVKN)
ಅನಂತರ ನನ್ನ ಪ್ರಿಯನು ಬಾಗಿಲ ಸಂದಿನಲ್ಲಿ ತನ್ನ ಕೈ ಹಾಕಿದನು. ನನ್ನ ಹೃದಯವು ಅವನಿಗಾಗಿ ಮಿಡಿಯಿತು.
ಪರಮ ಗೀತ 5 : 5 (OCVKN)
ನಾನು ನನ್ನ ಪ್ರಿಯನಿಗೆ ಬಾಗಿಲು ತೆರೆಯಲು ಎದ್ದಾಗ, ಬೀಗದ ಹಿಡಿಗಳ ಮೇಲೆ ನನ್ನ ಕೈಗಳಿಂದ ರಕ್ತಬೋಳವು ತೊಟ್ಟಿಕ್ಕಿತು. ನನ್ನ ಬೆರಳುಗಳಿಂದಲೂ ರಕ್ತಬೋಳವು ಸುರಿಯಿತು.
ಪರಮ ಗೀತ 5 : 6 (OCVKN)
ನಾನು ನನ್ನ ಪ್ರಿಯನಿಗೆ ಬಾಗಿಲು ತೆರೆದೆನು. ಆದರೆ ಅಷ್ಟರಲ್ಲಿ ನನ್ನ ಪ್ರಿಯನು ಹಿಂದಿರುಗಿ ಹೋಗಿಬಿಟ್ಟಿದ್ದನು. ಅವನು ಹೋಗಿದ್ದರಿಂದ ನನ್ನ ಹೃದಯ ಕುಗ್ಗಿಹೋಯಿತು. ಅವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ. ಅವನನ್ನು ಕರೆದೆನು, ಉತ್ತರವೇ ಇಲ್ಲ.
ಪರಮ ಗೀತ 5 : 7 (OCVKN)
ಪಟ್ಟಣದಲ್ಲಿ ಸಂಚರಿಸುವ ಕಾವಲುಗಾರರು ನನ್ನನ್ನು ಕಂಡುಹಿಡಿದರು. ನನ್ನನ್ನು ಹೊಡೆದು, ಗಾಯ ಮಾಡಿದರು. ಗೋಡೆಗಳನ್ನು ಕಾಯುವವರು ನನ್ನ ಮುಸುಕನ್ನು ಕಸಿದುಕೊಂಡರು.
ಪರಮ ಗೀತ 5 : 8 (OCVKN)
ಯೆರೂಸಲೇಮಿನ ಪುತ್ರಿಯರೇ, ನಿಮಗೆ ಆಣೆಯಿಟ್ಟು ಹೇಳುತ್ತೇನೆ. ನೀವು ನನ್ನ ಪ್ರಿಯನನ್ನು ಕಂಡರೆ, ನಾನು ಪ್ರೀತಿಯಿಂದ ಅಸ್ವಸ್ಥಳಾಗಿದ್ದೇನೆಂದು ಅವನಿಗೆ ತಿಳಿಸಿರಿ.
ಪರಮ ಗೀತ 5 : 9 (OCVKN)
ಸ್ನೇಹಿತರು ಸ್ತ್ರೀಯರಲ್ಲಿ ಅತಿ ಸುಂದರಿಯೇ, ಬೇರೆಯವರ ಪ್ರಿಯನಿಗಿಂತ ನಿನ್ನ ಪ್ರಿಯನ ಅತಿಶಯವೇನು? ನೀನು ನಮಗೆ ಹೀಗೆ ಆಣೆ ಇಡುವುದಕ್ಕೆ ಬೇರೆಯವರ ಪ್ರಿಯರಿಗಿಂತ ನಿನ್ನ ಪ್ರಿಯನ ವಿಶೇಷವೇನು?
ಪರಮ ಗೀತ 5 : 10 (OCVKN)
ಪ್ರಿಯತಮೆ ನನ್ನ ಪ್ರಿಯನು, ತೇಜೋಮಯನು, ಕೆಂಪೂ ಬಣ್ಣವುಳ್ಳವನು. ಹತ್ತು ಸಾವಿರ ಜನರಲ್ಲಿ ಶ್ರೇಷ್ಠನು.
ಪರಮ ಗೀತ 5 : 11 (OCVKN)
ಅವನ ತಲೆಯು ಚೊಕ್ಕ ಬಂಗಾರದಂತಿದೆ. ಅವನ ಗುಂಗುರು ಕೂದಲು ಕಾಗೆಯಂತೆ ಕಪ್ಪಾಗಿದೆ.
ಪರಮ ಗೀತ 5 : 12 (OCVKN)
ಅವನ ಕಣ್ಣುಗಳು ತುಂಬುತೊರೆಗಳ ಬಳಿ ತಂಗುವ, ಹಾಲಿನಿಂದ ತೊಳೆದಿರುವ, ಪಾರಿವಾಳಗಳ ಕಣ್ಣುಗಳಂತಿವೆ.
ಪರಮ ಗೀತ 5 : 13 (OCVKN)
ಅವನ ಕೆನ್ನೆಗಳು ಸುಗಂಧ ಸಸ್ಯಗಳು ಬೆಳೆಯುವ ದಿಬ್ಬಗಳಂತಿವೆ. ಅವನ ತುಟಿಗಳು ಸುಗಂಧ ರಕ್ತಬೋಳವನ್ನು ಸುರಿಸುವ ಕೆಂದಾವರೆಗಳು.
ಪರಮ ಗೀತ 5 : 14 (OCVKN)
ಅವನ ಕೈಗಳು ಗೋಮೇಧಿಕ ರತ್ನದ ಬಂಗಾರದ ಸಲಾಕೆಗಳಂತಿವೆ. ಅವನ ದೇಹ ಇಂದ್ರನೀಲಗಳಿಂದ ಹೊಳೆಯುವ ದಂತದ ಹಾಗೆ ಇದೆ.
ಪರಮ ಗೀತ 5 : 15 (OCVKN)
ಅವನ ಕಾಲುಗಳು ಶುದ್ಧ ಬಂಗಾರದ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ತೋರಿಕೆಯು ಲೆಬನೋನಿನ ದೇವದಾರುಗಳ ಹಾಗೆ ಶ್ರೇಷ್ಠವಾಗಿವೆ.
ಪರಮ ಗೀತ 5 : 16 (OCVKN)
ಅವನ ಬಾಯಿ ಮಾತು ಬಹು ಮಧುರ. ಹೌದು, ಅವನು ಸರ್ವಾಂಗ ಸುಂದರ. ಯೆರೂಸಲೇಮಿನ ಪುತ್ರಿಯರೇ, ಇವನೇ ನನ್ನ ಪ್ರಿಯನು, ಇವನೇ ನನ್ನ ಸ್ನೇಹಿತನು.
❮
❯
1
2
3
4
5
6
7
8
9
10
11
12
13
14
15
16