ಪರಮ ಗೀತ 6 : 1 (OCVKN)
ಸ್ನೇಹಿತರು ನಿನ್ನ ಪ್ರಿಯನು ಎಲ್ಲಿಗೆ ಹೋದನು? ಸ್ತ್ರೀಯರಲ್ಲಿ ಅತಿ ಸುಂದರಿಯೇ, ನಾವು ಅವನನ್ನು ನಿನ್ನ ಸಂಗಡ ಹುಡುಕುವಂತೆ ನಿನ್ನ ಪ್ರಿಯನು ಯಾವ ಕಡೆಗೆ ಹೋಗಿದ್ದಾನೆ?
ಪರಮ ಗೀತ 6 : 2 (OCVKN)
ಪ್ರಿಯತಮೆ ನನ್ನ ಪ್ರಿಯನು ತೋಟಗಳಲ್ಲಿ ಮಂದೆ ಮೇಯಿಸುವುದಕ್ಕೂ, ನೆಲದಾವರೆಗಳನ್ನು ಕೊಯ್ದು ತರುವುದಕ್ಕೂ, ಸುಗಂಧ ಸಸ್ಯಗಳಿರುವ ಉದ್ಯಾನವನಕ್ಕೆ ಹೋಗಿದ್ದಾನೆ.
ಪರಮ ಗೀತ 6 : 3 (OCVKN)
ನನ್ನ ಪ್ರಿಯನು ನನ್ನವನೇ, ನಾನು ಅವನವಳೇ. ಅವನು ನೆಲದಾವರೆಗಳ ನಡುವೆ ಮಂದೆಯನ್ನು ಮೇಯಿಸುತ್ತಾನೆ.
ಪರಮ ಗೀತ 6 : 4 (OCVKN)
ಪ್ರಿಯಕರ ನನ್ನ ಪ್ರಿಯಳೇ, ನೀನು ತಿರ್ಚ ನಗರದಂತೆ ಸುಂದರಿ, ಯೆರೂಸಲೇಮಿನ ಹಾಗೆ ರಮ್ಯಳು, ಧ್ವಜಗಳಿರುವ ದಂಡಿನ ಹಾಗೆ ಗಂಭೀರಳೂ ಆಗಿರುವೆ.
ಪರಮ ಗೀತ 6 : 5 (OCVKN)
ನಿನ್ನ ಕಣ್ಣುಗಳನ್ನು ನನ್ನ ಕಡೆಯಿಂದ ತಿರುಗಿಸು, ಏಕೆಂದರೆ ಅವು ನನ್ನನ್ನು ಜಯಿಸಿವೆ. ನಿನ್ನ ತಲೆಗೂದಲು ಗಿಲ್ಯಾದ್ ಪರ್ವತದಿಂದ ಇಳಿಯುವ ಮೇಕೆಯ ಮಂದೆಯಂತಿದೆ.
ಪರಮ ಗೀತ 6 : 6 (OCVKN)
ನಿನ್ನ ಹಲ್ಲುಗಳ ಹೊಳಪು ಉಣ್ಣೆ ಕತ್ತರಿಸಿ ಸ್ನಾನಮಾಡಿಸಿದ ಕುರಿಮಂದೆಗೆ ಸಮಾನ. ಅವು ಜೊತೆಯಾಗಿಯೇ ಇರುತ್ತವೆ. ಅವುಗಳಲ್ಲಿ ಒಂದೂ ಒಂಟಿಯಾಗಿರದು.
ಪರಮ ಗೀತ 6 : 7 (OCVKN)
ಮುಸುಕಿನೊಳಗಿನ ನಿನ್ನ ಕೆನ್ನೆ ವಿಭಾಗಿಸಿದ ದಾಳಿಂಬೆಯ ಹಣ್ಣಿನ ಹಾಗೆ ಇದೆ.
ಪರಮ ಗೀತ 6 : 8 (OCVKN)
ಅರಸನಿಗೆ ಅರವತ್ತು ಮಂದಿ ರಾಣಿಯರೂ ಎಂಬತ್ತು ಮಂದಿ ಉಪಪತ್ನಿಯರೂ ಲೆಕ್ಕವಿಲ್ಲದ ಕನ್ಯೆಯರೂ ಇದ್ದಾರೆ.
ಪರಮ ಗೀತ 6 : 9 (OCVKN)
ಆದರೆ ನನಗೆ ನನ್ನ ಪಾರಿವಾಳವು, ನನ್ನ ಪರಿಪೂರ್ಣಳು ಒಬ್ಬಳೇ. ಇವಳು ತನ್ನ ತಾಯಿಗೆ ಒಬ್ಬಳೇ ಮಗಳು. ತನ್ನ ಹೆತ್ತವಳಿಗೆ ಪ್ರಿಯಳು. ಕನ್ನಿಕೆಯರು ಇವಳನ್ನು ಕಂಡು ಆಶೀರ್ವದಿಸಿದರು. ಹೌದು, ರಾಣಿಯರೂ ಉಪಪತ್ನಿಯರೂ ಇವಳನ್ನು ಹೀಗೆಂದು ಹೊಗಳಿದರು:
ಪರಮ ಗೀತ 6 : 10 (OCVKN)
ಸ್ನೇಹಿತರು ಮೆರವಣೆಗೆಯಲ್ಲಿ ನಕ್ಷತ್ರಗಳ ಹಾಗೆ ಗಂಭೀರಳೂ, ಚಂದ್ರನ ಹಾಗೆ ಸುಂದರಿಯೂ, ಸೂರ್ಯನ ಹಾಗೆ ಪ್ರಕಾಶಿಸುವವಳೂ ಆಗಿರುವ ಈ ಉದಯವಂತೆ ಯಾರು?
ಪರಮ ಗೀತ 6 : 11 (OCVKN)
ಪ್ರಿಯಕರ ದ್ರಾಕ್ಷಿಬಳ್ಳಿಯು ಚಿಗುರಿದೆಯೋ, ದಾಳಿಂಬೆ ಗಿಡ ಹೂಬಿಟ್ಟಿದೆಯೋ ಎಂದು ಕಣಿವೆಯಲ್ಲಿನ ಫಲಗಳನ್ನು ನೋಡಲು ನಾನು ಬಾದಾಮಿಯ ತೋಟಕ್ಕೆ ಹೋದೆನು.
ಪರಮ ಗೀತ 6 : 12 (OCVKN)
ನಾನು ಅದನ್ನು ಅರಿತುಕೊಳ್ಳುವ ಮೊದಲು, ನನ್ನ ಆಸೆ ನನ್ನ ಜನ ಪ್ರಧಾನರ ನಡುವೆ ರಥದ ಮೇಲೆ ಕೂತಿರುವಂತೆ ನನ್ನನ್ನು ನಡೆಸಿತು.
ಪರಮ ಗೀತ 6 : 13 (OCVKN)
ಸ್ನೇಹಿತರು ತಿರುಗಿ ಬಾ, ತಿರುಗಿ ಬಾ, ಶೂಲಮ್ ಊರಿನವಳೇ, ನಾವು ನಿನ್ನನ್ನು ನೋಡುವಂತೆ ತಿರುಗಿ ಬಾ, ತಿರುಗಿ ಬಾ! ಪ್ರಿಯಕರ ಎರಡು ಗುಂಪಿನ* ಎರಡು ಗುಂಪಿನ ಹೀಬ್ರೂ ಭಾಷೆಯಲ್ಲಿ ಮಹನಯಿಮ್ ನರ್ತಕಿಯರ ನಡುವೆ ಕುಣಿಯುತ್ತಿರುವ, ಶೂಲಮ್ ಊರಿನವಳನ್ನು ನೀವು ನೋಡುವುದೇಕೆ?
❮
❯
1
2
3
4
5
6
7
8
9
10
11
12
13