ಪರಮ ಗೀತ 7 : 1 (OCVKN)
ಓ ರಾಜಪುತ್ರಿಯೇ! ಕೆರಗಳನ್ನು ಮೆಟ್ಟಿರುವ ನಿನ್ನ ಪಾದಗಳು ಎಷ್ಟು ಸುಂದರವಾಗಿವೆ! ನಿನ್ನ ಅಂದದ ಕಾಲುಗಳು ಶಿಲ್ಪಿಯ ಕೈಕೆಲಸದ ಆಭರಣಗಳಂತಿವೆ.
ಪರಮ ಗೀತ 7 : 2 (OCVKN)
ನಿನ್ನ ಹೊಕ್ಕಳು ಮಿಶ್ರಪಾನಕ ತುಂಬಿದ ದುಂಡು ಬಟ್ಟಲಿನ ಹಾಗಿದೆ. ನಿನ್ನ ಹೊಟ್ಟೆ ನೆಲದಾವರೆಗಳಿಂದ ಸುತ್ತಿಕೊಂಡಿರುವ ಹೂವುಗಳು ಸುತ್ತಿಕೊಂಡಿರುವ ಗೋಧಿಯ ರಾಶಿಯಾಗಿದೆ.
ಪರಮ ಗೀತ 7 : 3 (OCVKN)
ನಿನ್ನ ಸ್ತನಗಳೆರಡೂ ಹುಲ್ಲೆಯ ಅವಳಿಮರಿಗಳ ಹಾಗಿವೆ.
ಪರಮ ಗೀತ 7 : 4 (OCVKN)
ನಿನ್ನ ಕೊರಳು ದಂತದ ಗೋಪುರ. ನಿನ್ನ ಕಣ್ಣುಗಳು ಬತ್ ರಬ್ಬೀಮ್ ಬಾಗಿಲ ಬಳಿಯಲ್ಲಿರುವ ಹೆಷ್ಬೋನಿನ ಕೊಳಗಳು. ನಿನ್ನ ಮೂಗು, ದಮಸ್ಕದ ಕಡೆಗಿರುವ ಲೆಬನೋನಿನ ಗೋಪುರದ ಹಾಗಿದೆ.
ಪರಮ ಗೀತ 7 : 5 (OCVKN)
ನಿನ್ನ ತಲೆಯು ಕರ್ಮೆಲ್ ಬೆಟ್ಟದಂತೆ ವೈಭವ. ನಿನ್ನ ತಲೆಕೂದಲು ಧೂಮ್ರ ಬಣ್ಣದ ಹಾಗೆ ಇದೆ. ಹೆಣೆದ ಆ ಜಡೆಯಿಂದ ಅರಸನಿಗೂ ಆಕರ್ಷಣ.
ಪರಮ ಗೀತ 7 : 6 (OCVKN)
ನನ್ನ ಪ್ರೇಮವೇ, ನೀನು ನಿನ್ನ ಹರ್ಷದಿಂದ ಎಷ್ಟೋ ಸುಂದರಿಯೂ ಎಷ್ಟೋ ಮನೋಹರಳೂ ಆಗಿರುವೆ.
ಪರಮ ಗೀತ 7 : 7 (OCVKN)
ನಿನ್ನ ನೀಳ ಆಕಾರವು ಖರ್ಜೂರ ಮರದಂತಿದೆ. ನಿನ್ನ ಸ್ತನಗಳು ಅದರ ಗೊಂಚಲುಗಳು.
ಪರಮ ಗೀತ 7 : 8 (OCVKN)
ನಾನು, “ಆ ಖರ್ಜೂರದ ಮರವನ್ನು ಹತ್ತಿ ಅದರ ಗರಿಗಳನ್ನು ಹಿಡಿಯುವೆ,” ಎಂದುಕೊಂಡೆನು. ನಿನ್ನ ಸ್ತನಗಳು ದ್ರಾಕ್ಷಿ ಗೊಂಚಲುಗಳಂತಿರಲಿ, ನಿನ್ನ ಉಸಿರು ಸೇಬು ಹಣ್ಣಿನ ಪರಿಮಳದಂತೆಯೂ ಇರಲಿ.
ಪರಮ ಗೀತ 7 : 9 (OCVKN)
ನಿನ್ನ ಬಾಯಿಯ ಮುದ್ದುಗಳು ಉತ್ತಮ ದ್ರಾಕ್ಷಾರಸದ ಹಾಗಿರಲಿ. ಪ್ರಿಯತಮೆ ನನ್ನ ಪ್ರಿಯಕರನ ತುಟಿ, ಹಲ್ಲುಗಳಲ್ಲಿ ದ್ರಾಕ್ಷಾರಸವು ನೇರವಾಗಿ ಹರಿದು ಇಂಪಾಗಿ ರುಚಿಸಲಿ.
ಪರಮ ಗೀತ 7 : 10 (OCVKN)
ನಾನು ನನ್ನ ಪ್ರಿಯನವಳು. ಅವನ ಆಸೆಯು ನನ್ನ ಕಡೆಗಿರುವುದು.
ಪರಮ ಗೀತ 7 : 11 (OCVKN)
ನನ್ನ ಪ್ರಿಯನೇ, ಬಾ ಹೋಗೋಣ. ನಾವು ಗ್ರಾಮಗಳಲ್ಲಿ ವಸತಿಯಾಗಿರೋಣ ಬಾ.
ಪರಮ ಗೀತ 7 : 12 (OCVKN)
ನಾವು ಬೆಳಗ್ಗೆ ಹೊರಟು, ದ್ರಾಕ್ಷಿ ತೋಟಗಳಿಗೆ ಹೋಗೋಣ ಬಾ. ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂಬಿಟ್ಟಿದೆಯೋ ನೋಡೋಣ ಬಾ. ಅಲ್ಲಿ ನನ್ನ ಪ್ರೀತಿಯನ್ನು ನಿನಗೆ ಅರ್ಪಿಸುವೆನು.
ಪರಮ ಗೀತ 7 : 13 (OCVKN)
ನನ್ನ ಪ್ರಿಯನೇ, ಕಾಮಜನಕ ವೃಕ್ಷಗಳು ಪರಿಮಳ ಬೀರುತ್ತಿವೆ. ನಮ್ಮ ಬಾಗಿಲ ಬಳಿಯಲ್ಲಿ ನಿನಗೋಸ್ಕರ ನಾನು ರುಚಿಯುಳ್ಳ ಮಾಗಿದ ಹೊಸ ಹಣ್ಣುಗಳನ್ನು ಸಿದ್ಧಪಡಿಸಿದ್ದೇನೆ.
❮
❯
1
2
3
4
5
6
7
8
9
10
11
12
13