ತೀತನಿಗೆ 3 : 1 (OCVKN)
ಒಳ್ಳೆಯದನ್ನು ಮಾಡುವುದು ಆಳುವವರಿಗೂ ಅಧಿಕಾರಿಗಳಿಗೂ ಅಧೀನರಾಗಿ ವಿಧೇಯರಾಗಿರಬೇಕೆಂತಲೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕೆ ಸಿದ್ಧರಾಗಿರಬೇಕೆಂತಲೂ ಅವರಿಗೆ ಜ್ಞಾಪಕಮಾಡು.
ತೀತನಿಗೆ 3 : 2 (OCVKN)
ಯಾರ ವಿಷಯವಾಗಿಯೂ ಕೆಟ್ಟದ್ದನ್ನಾಡದೆ, ಎಲ್ಲರೊಂದಿಗೆ ಸಮಾಧಾನವಾಗಿಯೂ ಇತರರನ್ನು ಅರ್ಥಮಾಡಿಕೊಳ್ಳುವವರಾಗಿಯೂ ಯಾವಾಗಲೂ ನಮ್ರರಾಗಿ ಇರಬೇಕೆಂತಲೂ ಅವರಿಗೆ ಜ್ಞಾಪಕಮಾಡು.
ತೀತನಿಗೆ 3 : 3 (OCVKN)
ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸ ಹೋದವರೂ ವಿವಿಧ ಆಶೆಗಳಿಗೂ ಭೋಗಗಳಿಗೂ ದಾಸರಾಗಿದ್ದೆವು. ಕೆಟ್ಟತನ ಹಾಗೂ ಮತ್ಸರಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ದ್ವೇಷಿಸುವವರೂ ಆಗಿದ್ದೆವು.
ತೀತನಿಗೆ 3 : 4 (OCVKN)
ಆದರೆ ನಮಗೆ ರಕ್ಷಕರೂ ದೇವರೂ ಆಗಿರುವ ಕ್ರಿಸ್ತ ಯೇಸುವಿನ ದಯೆಯೂ ಪ್ರೀತಿಯೂ ಮನುಷ್ಯರ ಕಡೆಗೆ ಪ್ರತ್ಯಕ್ಷವಾದಾಗ,
ತೀತನಿಗೆ 3 : 5 (OCVKN)
ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು.
ತೀತನಿಗೆ 3 : 6 (OCVKN)
ನಮಗೆ ರಕ್ಷಕರಾದ ಕ್ರಿಸ್ತ ಯೇಸುವಿನ ಮೂಲಕ ದೇವರು ಪವಿತ್ರಾತ್ಮ ದೇವರನ್ನು ನಮ್ಮ ಮೇಲೆ ಸಮೃದ್ಧವಾಗಿ ಸುರಿಸಿದರು.
ತೀತನಿಗೆ 3 : 7 (OCVKN)
ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು.
ತೀತನಿಗೆ 3 : 8 (OCVKN)
ಇದು ನಂಬತಕ್ಕ ಮಾತಾಗಿದೆ. ದೇವರನ್ನು ನಂಬಿದವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಇವುಗಳ ವಿಷಯವಾಗಿ ಪ್ರಾಮುಖ್ಯತೆಯನ್ನು ಕೊಡಬೇಕೆಂದು ಅಪೇಕ್ಷಿಸುತ್ತೇನೆ. ಇವು ಮನುಷ್ಯರಿಗೆ ಹಿತಕರವೂ ಪ್ರಯೋಜನಕರವೂ ಆಗಿವೆ.
ತೀತನಿಗೆ 3 : 9 (OCVKN)
ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.
ತೀತನಿಗೆ 3 : 10 (OCVKN)
ಭೇದ ಹುಟ್ಟಿಸುವವರನ್ನು ಒಂದೆರಡು ಸಾರಿ ಬುದ್ಧಿ ಹೇಳಿದ ಮೇಲೆ ಬಿಟ್ಟುಬಿಡು. ಅಂಥವರ ಸಹವಾಸ ಮಾಡದಿರು.
ತೀತನಿಗೆ 3 : 11 (OCVKN)
ಅಂಥವರು ಸನ್ಮಾರ್ಗ ತಪ್ಪಿದವರೂ ತಮ್ಮನ್ನು ತಾವೇ ಖಂಡಿಸಿಕೊಳ್ಳುವವರಾಗಿ ಪಾಪಮಾಡುವವರೂ ಆಗಿದ್ದಾರೆಂದು ನಿಶ್ಚಯವಾಗಿ ತಿಳಿದುಕೊ.
ತೀತನಿಗೆ 3 : 12 (OCVKN)
ಕಡೇ ಮಾತುಗಳು ನಾನು ಅರ್ತೆಮನನ್ನಾಗಲಿ, ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದಾಗ ನೀನು ನಿಕೊಪೊಲಿಯಲ್ಲಿ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನ ಮಾಡು. ಅಲ್ಲಿಯೇ ಚಳಿಗಾಲವನ್ನು ಕಳೆಯಬೇಕೆಂದು ನಾನು ತೀರ್ಮಾನಿಸಿದ್ದೇನೆ.
ತೀತನಿಗೆ 3 : 13 (OCVKN)
ನಿಯಮ ಪಂಡಿತನಾದ ಜೇನನನ್ನೂ ಅಪೊಲ್ಲೋಸನನ್ನೂ ಜಾಗ್ರತೆಯಾಗಿ ಸಾಗಕಳುಹಿಸು. ಅವರಿಗೇನೂ ಕೊರತೆಯಾಗಬಾರದು.
ತೀತನಿಗೆ 3 : 14 (OCVKN)
ನಮ್ಮವರು ಸತ್ಕ್ರಿಯೆಗಳನ್ನು ಮಾಡುವುದಕ್ಕಾಗಿಯೂ ಅಗತ್ಯವಾಗಿರುವ ಕೊರತೆಗಳನ್ನು ನೀಗಿಸುವುದಕ್ಕೂ ಕಲಿತುಕೊಳ್ಳಲಿ. ಆಗ ಅವರು ನಿಷ್ಪಲರಾಗದೇ ಇರುವರು.
ತೀತನಿಗೆ 3 : 15 (OCVKN)
ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ವಿಶ್ವಾಸದಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ!
❮
❯
1
2
3
4
5
6
7
8
9
10
11
12
13
14
15