ಜೆಕರ್ಯ 1 : 1 (OCVKN)
ಯೆಹೋವ ದೇವರ ಕಡೆಗೆ ತಿರುಗಬೇಕೆಂಬ ಕರೆ
ಜೆಕರ್ಯ 1 : 2 (OCVKN)
ಪರ್ಷಿಯಾದ ಅರಸ ದಾರ್ಯಾವೆಷನ ಎರಡನೆಯ ವರ್ಷ, ಎಂಟನೆಯ ತಿಂಗಳಿನಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು: “ಯೆಹೋವ ದೇವರು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿದ್ದಾರೆ.
ಜೆಕರ್ಯ 1 : 3 (OCVKN)
ಆದ್ದರಿಂದ ನೀನು ಅವರಿಗೆ ಹೇಳತಕ್ಕದ್ದೇನೆಂದರೆ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನನ್ನ ಬಳಿಗೆ ತಿರುಗಿಕೊಳ್ಳಿರಿ,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ. ಆಗ, ‘ನಾನು ನಿಮ್ಮ ಬಳಿಗೆ ತಿರುಗಿಕೊಳ್ಳುವೆನು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
ಜೆಕರ್ಯ 1 : 4 (OCVKN)
ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ, ನಿಮ್ಮ ಕೆಟ್ಟ ಮಾರ್ಗಗಳನ್ನೂ, ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸರ್ವಶಕ್ತರಾದ ಯೆಹೋವ ದೇವರು ಪ್ರಕಟಿಸುತ್ತಾರೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ. ನನ್ನಲ್ಲಿ ಲಕ್ಷ್ಯವಿಡಲಿಲ್ಲ ಎಂದು ಯೆಹೋವ ದೇವರು ಹೇಳುತ್ತಾರೆ.
ಜೆಕರ್ಯ 1 : 5 (OCVKN)
ನಿಮ್ಮ ಪಿತೃಗಳೋ, ಅವರು ಎಲ್ಲಿ? ಪ್ರವಾದಿಗಳು, ಅವರು ನಿತ್ಯವಾಗಿ ಬದುಕುತ್ತಾರೋ?
ಜೆಕರ್ಯ 1 : 6 (OCVKN)
ಆದರೆ ನಾನು ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿ, ನನ್ನ ವಾಕ್ಯಗಳೂ, ನನ್ನ ನಿಯಮಗಳೂ ನಿಮ್ಮ ಪಿತೃಗಳಿಗೆ ಸೇರಲಿಲ್ಲವೋ?
ಜೆಕರ್ಯ 1 : 7 (OCVKN)
“ಆಗ ಅವರು ತಿರುಗಿಕೊಂಡು, ‘ಸೇನಾಧೀಶ್ವರ ಯೆಹೋವ ದೇವರು ನಮಗೆ ಮಾಡುವುದಕ್ಕೆ ಯೋಚಿಸಿದ ಹಾಗೆಯೇ, ನಮ್ಮ ಮಾರ್ಗಗಳ ಪ್ರಕಾರವಾಗಿಯೂ, ನಮ್ಮ ಕ್ರಿಯೆಗಳ ಪ್ರಕಾರವಾಗಿಯೂ ನಮಗೆ ಮಾಡಿದ್ದಾರೆ,’ ಎಂದು ಹೇಳಿದರು.” ನಾಲ್ವರು ಸವಾರರ ವಿಷಯವಾದ ಕನಸು
ಜೆಕರ್ಯ 1 : 8 (OCVKN)
ದಾರ್ಯಾವೆಷನ ಎರಡನೆಯ ವರ್ಷದಲ್ಲಿ, ಹನ್ನೊಂದನೆಯ ತಿಂಗಳಾದ ಶೇಬಾಟ್ ಎಂಬ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಯೆಹೋವ ದೇವರ ವಾಕ್ಯವು ಇದ್ದೋನನ ಮೊಮ್ಮಗನೂ, ಬೆರಕ್ಯನ ಮಗನೂ ಆದ ಜೆಕರ್ಯನೆಂಬ ಪ್ರವಾದಿಗೆ ಬಂದಿತು:
ಜೆಕರ್ಯ 1 : 9 (OCVKN)
ರಾತ್ರಿಯಲ್ಲಿ ನನಗೆ ದರ್ಶನವಾಯಿತು. ಕೆಂಪು ಕುದುರೆಯ ಮೇಲೆ ಸವಾರಿ ಮಾಡುವ ಒಬ್ಬನು, ತಗ್ಗಿನಲ್ಲಿದ್ದ ಗಂಧದ ಗಿಡಗಳ ನಡುವೆ ನಿಂತಿದ್ದನು. ಅವನ ಹಿಂದೆ ಕೆಂಪು, ಕಂದು ಬಣ್ಣದ ಹಾಗು ಬಿಳಿಯ ಕುದುರೆಗಳು ಇದ್ದವು.
ಜೆಕರ್ಯ 1 : 10 (OCVKN)
ಆಗ ನಾನು, “ನನ್ನ ಒಡೆಯನೇ, ಇವೇನು?” ಎಂದೆನು. ಆಗ ನನ್ನ ಸಂಗಡ ಮಾತನಾಡಿದ ದೇವದೂತನು, “ಇವೇನೆಂದು ನಿನಗೆ ತೋರಿಸುತ್ತೇನೆ,” ಎಂದನು.
ಜೆಕರ್ಯ 1 : 11 (OCVKN)
ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು, “ಇವರು ಭೂಮಿಯ ಸುತ್ತಲೂ ನಡೆದಾಡುವುದಕ್ಕೆ ಯೆಹೋವ ದೇವರಿಂದ ಕಳುಹಿಸಲಾದವರು,” ಎಂದನು.
ಜೆಕರ್ಯ 1 : 12 (OCVKN)
ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಯೆಹೋವ ದೇವರ ದೂತನಿಗೆ, “ಭೂಮಿಯ ಸುತ್ತಲೂ ನಡೆದಾಡಿದ್ದೇವೆ. ಇಗೋ, ಭೂಮಿಯೆಲ್ಲಾ ನಿಶ್ಚಿಂತೆಯಿಂದ ಶಾಂತವಾಗಿದೆ,” ಎಂದನು. ಆಗ ಯೆಹೋವ ದೇವರ ದೂತನು ಉತ್ತರಕೊಟ್ಟು: “ಸರ್ವಶಕ್ತರಾದ ಯೆಹೋವ ದೇವರೇ, ನೀವು ಯೆರೂಸಲೇಮನ್ನೂ, ಯೆಹೂದದ ಪಟ್ಟಣಗಳನ್ನೂ ಎಷ್ಟರವರೆಗೆ ಕನಿಕರಿಸದೆ ಇರುವಿರಿ? ಅವುಗಳ ಮೇಲೆ ಈ ಎಪ್ಪತ್ತು ವರ್ಷಗಳು ಸಿಟ್ಟು ಮಾಡಿದ್ದೀರಲ್ಲವೋ?” ಎಂದನು.
ಜೆಕರ್ಯ 1 : 13 (OCVKN)
ಆಗ ಯೆಹೋವ ದೇವರು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೆಯ ಮಾತುಗಳಿಂದಲೂ, ಆದರಣೆಯ ಮಾತುಗಳಿಂದಲೂ ಉತ್ತರಕೊಟ್ಟರು.
ಜೆಕರ್ಯ 1 : 14 (OCVKN)
ನನ್ನ ಸಂಗಡ ಮಾತನಾಡಿದ ದೂತನು ನನಗೆ, “ಇದನ್ನು ಸಾರಿ ಹೇಳು: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಯೆರೂಸಲೇಮಿಗಾಗಿಯೂ, ಚೀಯೋನಿಗಾಗಿಯೂ ಮಹಾ ರೋಷವುಳ್ಳವನಾಗಿದ್ದೇನೆ.
ಜೆಕರ್ಯ 1 : 15 (OCVKN)
ನಿಶ್ಚಿಂತೆಯುಳ್ಳವರಾಗಿರುವ ಇತರ ರಾಷ್ಟ್ರಗಳ ಮೇಲೆ ನಾನು ಬಹಳ ಕೋಪವಾಗಿದ್ದೇನೆ. ಆದರೆ ಯೆರೂಸಲೇಮಿನ ಮೇಲೆ ನಾನು ಸ್ವಲ್ಪ ಮಾತ್ರ ಸಿಟ್ಟುಗೊಂಡಿರಲು, ಅವರು ಸಂಕಟಕ್ಕೆ ಇನ್ನು ಹೆಚ್ಚು ಕೇಡು ಕೂಡಿಸಿದರು.
ಜೆಕರ್ಯ 1 : 17 (OCVKN)
“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾನೆ: ‘ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ. ನನ್ನ ಆಲಯವು ಅದರಲ್ಲಿ ಕಟ್ಟಲಾಗುವುದು. ಯೆರೂಸಲೇಮಿನ ಮೇಲೆ ಅಳತೆಯ ನೂಲು ಚಾಚಲಾಗುವುದು,’ ಎಂದು ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
ಜೆಕರ್ಯ 1 : 18 (OCVKN)
“ಪುನಃ ನೀನು ಸಾರಿ, ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವುವು. ಯೆಹೋವ ದೇವರು ಚೀಯೋನನ್ನು ಆದರಿಸುವರು. ಯೆರೂಸಲೇಮನ್ನು ಆರಿಸಿಕೊಳ್ಳುವರು, ಎಂದು ಹೇಳಿದನು.” ನಾಲ್ಕು ಕೊಂಬುಗಳು ಮತ್ತು ನಾಲ್ವರು ಕಮ್ಮಾರರು ನಾನು ನನ್ನ ಕಣ್ಣುಗಳನ್ನು ಎತ್ತಿದಾಗ, ನಾಲ್ಕು ಕೊಂಬುಗಳನ್ನು ನೋಡಿದೆನು.
ಜೆಕರ್ಯ 1 : 19 (OCVKN)
ಆಗ ನನ್ನ ಸಂಗಡ ಮಾತನಾಡಿದ ದೂತನಿಗೆ ನಾನು, “ಇದೇನು?” ಎಂದೆನು.
ಜೆಕರ್ಯ 1 : 20 (OCVKN)
ಅದಕ್ಕೆ ಅವನು ನನಗೆ ಉತ್ತರಕೊಟ್ಟು, “ಇವು ಯೆಹೂದ, ಇಸ್ರಾಯೇಲ್, ಯೆರೂಸಲೇಮನ್ನೂ ಚದರಿಸಿದ ಕೊಂಬುಗಳು,” ಎಂದನು. ಆಗ ಯೆಹೋವ ದೇವರು ನನಗೆ ನಾಲ್ಕು ಕಮ್ಮಾರರನ್ನು ತೋರಿಸಿದರು.
ಜೆಕರ್ಯ 1 : 21 (OCVKN)
ನಾನು, “ಇವರು ಏನು ಮಾಡುವುದಕ್ಕೆ ಬರುತ್ತಾರೆ?” ಎಂದೆನು. ಅದಕ್ಕೆ ಅವರು, “ಯೆಹೂದ್ಯರಲ್ಲಿ ಯಾರೂ ತಲೆಯೆತ್ತದಂತೆ ಅವುಗಳನ್ನು ಚದರಿಸುವ ಕೊಂಬುಗಳು ಅವು. ಆದರೆ ಇವರು ಯೆಹೂದ ದೇಶವನ್ನು ಚದರಿಸಬೇಕೆಂದು ತಲೆಯೆತ್ತಿದ ರಾಷ್ಟ್ರಗಳನ್ನೇ ಚದರಿಸಿ, ಅದರ ಕೊಂಬುಗಳನ್ನು ಕೆಡವಿ ಹಾಕುವುದಕ್ಕೆ ಬಂದಿದ್ದಾರೆ,” ಎಂದು ಹೇಳಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21