ಜೆಕರ್ಯ 2 : 1 (OCVKN)
ಅಳತೆಯ ನೂಲಿನವನು ಆಗ ನಾನು ಕಣ್ಣೆತ್ತಿ ನೋಡಲು, ತನ್ನ ಕೈಯಲ್ಲಿ ಅಳೆಯುವ ನೂಲು ಉಳ್ಳ ಒಬ್ಬ ಮನುಷ್ಯನನ್ನು ಕಂಡೆನು.
ಜೆಕರ್ಯ 2 : 2 (OCVKN)
ಆಗ ನಾನು, “ನೀನು ಎಲ್ಲಿಗೆ ಹೋಗುತ್ತೀ?” ಎಂದೆನು.
ಜೆಕರ್ಯ 2 : 3 (OCVKN)
ಅದಕ್ಕೆ ಆತನು ನನಗೆ, “ಯೆರೂಸಲೇಮನ್ನು ಅಳತೆಮಾಡಿ, ಅದರ ಅಗಲವೆಷ್ಟು? ಅದರ ಉದ್ದವೆಷ್ಟು? ಎಂದು ನೋಡುವುದಕ್ಕೆ ಹೋಗುತ್ತೇನೆ,” ಎಂದನು. ನನ್ನ ಸಂಗಡ ಮಾತನಾಡಿದ ದೂತನು ಬರುತ್ತಿರಲು, ಇನ್ನೊಬ್ಬ ದೂತನು ಅವನನ್ನು ಎದುರುಗೊಂಡು,
ಜೆಕರ್ಯ 2 : 4 (OCVKN)
“ಓಡಿಹೋಗಿ ಈ ಯೌವನಸ್ಥನಿಗೆ, ‘ಯೆರೂಸಲೇಮು, ಅದರಲ್ಲಿರುವ ಮನುಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾಗಿರುವುದು. ಯೆರೂಸಲೇಮು ಗೋಡೆ ಇಲ್ಲದ ಊರುಗಳಂತೆ ಇರುವುದು.
ಜೆಕರ್ಯ 2 : 5 (OCVKN)
ನಾನೇ ಅದರ ಸುತ್ತಲೂ ಬೆಂಕಿಯ ಗೋಡೆಯಾಗಿಯೂ, ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನು ಎಂದು ಹೇಳು,’ ಎಂದನು,” ಎಂದು ಯೆಹೋವ ದೇವರು ಹೇಳುತ್ತಾರೆ.
ಜೆಕರ್ಯ 2 : 6 (OCVKN)
ಜೆಕರ್ಯ 2 : 7 (OCVKN)
“ಎಲೈ, ನೀವು ಹೊರಗೆ ಬಂದು ಉತ್ತರ ದೇಶದಿಂದ ಓಡಿಹೋಗಿರಿ. ಏಕೆಂದರೆ ಆಕಾಶದ ನಾಲ್ಕು ದಿಕ್ಕುಗಳಿಗೆ ನಿಮ್ಮನ್ನು ಚದರಿಸಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. “ಚೀಯೋನೇ, ಬನ್ನಿರಿ, ಬಾಬಿಲೋನಿನ ಪುತ್ರಿಯ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.”
ಜೆಕರ್ಯ 2 : 8 (OCVKN)
ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.
ಜೆಕರ್ಯ 2 : 9 (OCVKN)
ನಾನು ನನ್ನ ಕೈಯನ್ನು ಅವರ ಮೇಲೆ ಎತ್ತುವೆನು. ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ಕಳುಹಿಸಿದರೆಂದು ನೀವು ತಿಳಿಯುವಿರಿ.
ಜೆಕರ್ಯ 2 : 10 (OCVKN)
“ಚೀಯೋನ್ ಪುತ್ರಿಯೇ, ಹಾಡಿ ಹರ್ಷಿಸು. ಏಕೆಂದರೆ, ನಾನು ಬರುವೆನು ಮತ್ತು ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
ಜೆಕರ್ಯ 2 : 11 (OCVKN)
“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.
ಜೆಕರ್ಯ 2 : 12 (OCVKN)
ಇದಲ್ಲದೆ ಯೆಹೋವ ದೇವರು ತಮ್ಮ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸೊತ್ತಾಗಿ ಹೊಂದುವರು. ಯೆರೂಸಲೇಮನ್ನು ತಿರುಗಿ ಆಯ್ದುಕೊಳ್ಳುವರು.
ಜೆಕರ್ಯ 2 : 13 (OCVKN)
ಎಲ್ಲಾ ಮನುಷ್ಯರೇ, ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಅವರು ತಮ್ಮ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾರೆ.”

1 2 3 4 5 6 7 8 9 10 11 12 13