ಜೆಕರ್ಯ 6 : 1 (OCVKN)
ನಾಲ್ಕು ರಥಗಳು ನಾನು ಕಣ್ಣೆತ್ತಿ ನೋಡಿದಾಗ, ನಾಲ್ಕು ರಥಗಳು ಎರಡು ಬೆಟ್ಟಗಳ ಮಧ್ಯದಿಂದ ಹೊರಟು ಬಂದವು. ಆ ಬೆಟ್ಟಗಳು ಕಂಚಿನ ಬೆಟ್ಟಗಳಾಗಿದ್ದವು.
ಜೆಕರ್ಯ 6 : 2 (OCVKN)
ಮೊದಲನೆಯ ರಥಕ್ಕೆ ಕೆಂಪು ಕುದುರೆಗಳಿದ್ದವು, ಎರಡನೆಯ ರಥಕ್ಕೆ ಕಪ್ಪು ಕುದುರೆಗಳು,
ಜೆಕರ್ಯ 6 : 3 (OCVKN)
ಮೂರನೆಯ ರಥಕ್ಕೆ ಬಿಳಿ ಕುದುರೆಗಳು, ನಾಲ್ಕನೆಯ ರಥಕ್ಕೆ ಮಚ್ಚೆ ಮಚ್ಚೆಯ ಕುದುರೆಗಳಿದ್ದವು. ಇವೆಲ್ಲವೂ ಬಲವಾದ ಕುದುರೆಗಳು.
ಜೆಕರ್ಯ 6 : 4 (OCVKN)
ಆಗ ನನ್ನ ಸಂಗಡ ಮಾತನಾಡಿದ ದೂತನಿಗೆ, “ನನ್ನ ಒಡೆಯನೇ, ಇದೇನು?” ಎಂದೆನು.
ಜೆಕರ್ಯ 6 : 5 (OCVKN)
ದೂತನು ನನಗೆ, “ಇವು ಸ್ವರ್ಗದ ನಾಲ್ಕು ಆತ್ಮಗಳು. ಇವು ಇಡೀ ಜಗತ್ತಿನ ಕಡೆಗೆ ಯೆಹೋವ ದೇವರ ಮುಂದೆ ನಿಂತಲ್ಲಿಂದ ಹೊರಟಿವೆ.
ಜೆಕರ್ಯ 6 : 6 (OCVKN)
ಕಪ್ಪು ಕುದುರೆಗಳ ರಥ, ಉತ್ತರ ದೇಶಕ್ಕೆ ಹೊರಟಿತು. ಬಿಳಿ ಕುದುರೆಗಳು ಪಶ್ಚಿಮಕ್ಕೆ ಹಿಂದೆ ಹೋಯಿತು. ಮಚ್ಚೆ ಮಚ್ಚೆಯ ಕುದುರೆಯ ರಥ ದಕ್ಷಿಣಕ್ಕೆ ಹೊರಟಿತು.”
ಜೆಕರ್ಯ 6 : 8 (OCVKN)
ಕೆಂಪು ಕುದುರೆಗಳ ರಥ ಹೊರಟು ಲೋಕದಲ್ಲಿ ಸಂಚಾರ ಮಾಡಲು ಹೋಗುವುದಕ್ಕೆ ನೋಡಿದವು. ಆಗ ಅವನು, “ಹೋಗಿ ಲೋಕದಲ್ಲಿ ಅತ್ತಿತ್ತ ನಡೆದಾಡುವುದಕ್ಕೆ ಇಲ್ಲಿಂದ ಹೋಗಿರಿ,” ಎಂದನು. ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.
ಜೆಕರ್ಯ 6 : 9 (OCVKN)
ಆಗ ದೂತನು ನನಗೆ ಕೂಗಿ, “ನೋಡು, ಉತ್ತರ ದೇಶಕ್ಕೆ ಹೊರಟವುಗಳು, ಉತ್ತರ ದೇಶದಲ್ಲಿ ನನ್ನ ಆತ್ಮವನ್ನು ಶಾಂತಿ ಪಡಿಸಿವೆ,” ಎಂದನು. ಯೆಹೋಶುವನಿಗೆ ಕಿರೀಟ ಯೆಹೋವ ದೇವರ ವಾಕ್ಯವು ನನಗೆ ಬಂದಿತು:
ಜೆಕರ್ಯ 6 : 10 (OCVKN)
“ಆ ಸೆರೆಯವರಿಂದ, ಅಂದರೆ ಬಾಬಿಲೋನಿನಿಂದ ಬಂದಿರುವ ಹೆಲ್ದಾಯನಿಂದಲೂ, ತೋಬೀಯನಿಂದಲೂ, ಯೆದಾಯನಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು, ಅದೇ ದಿವಸದಲ್ಲಿ ನೀನು ಜೆಫನ್ಯನ ಮಗ ಯೋಷೀಯನ ಮನೆಗೆ ಹೋಗು.
ಜೆಕರ್ಯ 6 : 11 (OCVKN)
ಅಲ್ಲಿ ಬೆಳ್ಳಿ, ಬಂಗಾರವನ್ನು ತೆಗೆದುಕೊಂಡು, ಕಿರೀಟಗಳನ್ನು ಮಾಡಿ, ಅವುಗಳನ್ನು ಯೆಹೋಚಾದಾಕನ ಮಗ ಮತ್ತು ಮಹಾಯಾಜಕನಾದ ಯೆಹೋಶುವನ ತಲೆಯ ಮೇಲೆ ಇಟ್ಟು,
ಜೆಕರ್ಯ 6 : 12 (OCVKN)
ಅವನಿಗೆ ಹೇಳತಕ್ಕದ್ದೇನೆಂದರೆ: ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ರೆಂಬೆ,’ ಎಂದು ಹೆಸರುಳ್ಳ ಮನುಷ್ಯನು, ತನ್ನ ಸ್ಥಳದೊಳಗಿಂದ ರೆಂಬೆಯನ್ನು ತೆಗೆದುಹಾಕಿ, ಯೆಹೋವ ದೇವರ ಆಲಯವನ್ನು ಕಟ್ಟುವನು.
ಜೆಕರ್ಯ 6 : 13 (OCVKN)
ಅವನೇ ಯೆಹೋವ ದೇವರ ದೇವಾಲಯವನ್ನು ಕಟ್ಟಿದ ಮೇಲೆ, ರಾಜವೈಭವವನ್ನು ಧರಿಸಿ ಸಿಂಹಾಸನದ ಮೇಲೆ ಆಸೀನನಾಗಿ ಆಳುವನು. ಅವನ ಸಿಂಹಾಸನದಲ್ಲಿ ಒಬ್ಬ ಯಾಜಕನಾಗಿರುವನು. ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವುದು.
ಜೆಕರ್ಯ 6 : 14 (OCVKN)
ಆ ಕಿರೀಟಗಳು ಹೇಲೆಮ್, ತೋಬೀಯ, ಯೆದಾಯ ಮತ್ತು ಜೆಫನ್ಯನ ಮಗ ಹೇನ್ ಇವರ ಜ್ಞಾಪಕಾರ್ಥವಾಗಿ ಯೆಹೋವ ದೇವರ ಆಲಯದಲ್ಲಿ ಇರುವುವು.
ಜೆಕರ್ಯ 6 : 15 (OCVKN)
ದೂರದಲ್ಲಿರುವವರು ಬಂದು ಯೆಹೋವ ದೇವರ ಆಲಯವನ್ನು ಕಟ್ಟುವುದಕ್ಕೆ ಸಹಾಯ ಮಾಡುವರು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ನೀವು ತಿಳಿಯುವಿರಿ. ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಜಾಗ್ರತೆಯಾಗಿ ಕಿವಿಗೊಟ್ಟರೆ, ಇದು ನೆರವೇರುವುದು.”
❮
❯
1
2
3
4
5
6
7
8
9
10
11
12
13
14
15