ಜೆಕರ್ಯ 7 : 1 (OCVKN)
ನ್ಯಾಯ ಮತ್ತು ಕರುಣೆ, ಉಪವಾಸವಲ್ಲ ಅರಸನಾದ ದಾರ್ಯಾವೆಷನ ನಾಲ್ಕನೆಯ ವರ್ಷದಲ್ಲಿ ಒಂಬತ್ತನೆಯ ತಿಂಗಳಿನ ಅಂದರೆ ಕಿಸ್ಲೇವ್ ತಿಂಗಳಿನ ನಾಲ್ಕನೆಯ ದಿವಸದಲ್ಲಿ ಯೆಹೋವ ದೇವರ ವಾಕ್ಯವು ಜೆಕರ್ಯನಿಗೆ ಬಂದಿತು.
ಜೆಕರ್ಯ 7 : 2 (OCVKN)
ಅಷ್ಟರಲ್ಲಿ ಬೇತೇಲಿನ ಜನರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವರ ಮನುಷ್ಯರನ್ನೂ ಯೆಹೋವ ದೇವರ ಪ್ರಸನ್ನತೆಯನ್ನು ಕೋರಲು ದೇವಾಲಯಕ್ಕೆ ಕಳುಹಿಸಿದರು.
ಜೆಕರ್ಯ 7 : 3 (OCVKN)
ಆಗ ಸರ್ವಶಕ್ತರಾದ ಯೆಹೋವ ದೇವರ ಆಲಯದಲ್ಲಿದ್ದ ಯಾಜಕರ ಸಂಗಡ ಮತ್ತು ಪ್ರವಾದಿಗಳ ಸಂಗಡ ನಾನು ಮಾತನಾಡಿ, “ಇಷ್ಟು ವರ್ಷ ಮಾಡಿದ ಪ್ರಕಾರ, ಐದನೆಯ ತಿಂಗಳಿನಲ್ಲಿ ಉಪವಾಸವಿದ್ದು, ಪ್ರಲಾಪಿಸಬೇಕೋ?” ಎಂದು ವಿಚಾರಿಸಿಕೊಂಡು ಬರಬೇಕೆಂದು ಅವರಿಗೆ ಆಜ್ಞಾಪಿಸಿದರು.
ಜೆಕರ್ಯ 7 : 4 (OCVKN)
ಆಗ ಸರ್ವಶಕ್ತರಾದ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,
ಜೆಕರ್ಯ 7 : 5 (OCVKN)
“ದೇಶದ ಜನರೆಲ್ಲರಿಗೂ, ಯಾಜಕರಿಗೂ ಹೀಗೆ ಹೇಳು: ‘ನೀವು ಈ ಎಪ್ಪತ್ತು ವರ್ಷಗಳು ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸ ಮಾಡಿ, ದುಃಖಿಸುತ್ತಿದ್ದಾಗ, ಆ ನಿಮ್ಮ ಉಪವಾಸವು ನಿಜವಾಗಿಯೂ ನನಗಾಗಿ ಮಾಡಿದ್ದೀರೋ?
ಜೆಕರ್ಯ 7 : 6 (OCVKN)
ನೀವು ಉಂಡು ಕುಡಿಯುತ್ತಿದ್ದಾಗ, ನಿಮಗಾಗಿಯೇ ಉಂಡು ಕುಡಿದಿರಲ್ಲಾ?
ಜೆಕರ್ಯ 7 : 7 (OCVKN)
ಯೆರೂಸಲೇಮು, ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳವುಗಳಾಗಿಯೂ, ಸುಖವಾಗಿಯೂ, ಸಮೃದ್ಧಿಯಾಗಿಯೂ ದಕ್ಷಿಣವೂ, ಪಶ್ಚಿಮ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ, ಯೆಹೋವ ದೇವರು ಪೂರ್ವದ ಪ್ರವಾದಿಗಳ ಮೂಲಕ ಸಾರಿದ ಮಾತುಗಳು ಅವು ಅಲ್ಲವೋ?’ ಎಂಬುದು.”
ಜೆಕರ್ಯ 7 : 8 (OCVKN)
ಯೆಹೋವ ದೇವರ ವಾಕ್ಯವು ಜೆಕರ್ಯನಿಗೆ ಪುನಃ ಬಂದು ಹೇಳಿದ್ದೇನೆಂದರೆ,
ಜೆಕರ್ಯ 7 : 9 (OCVKN)
“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಪ್ರೀತಿಯನ್ನೂ, ಕನಿಕರವನ್ನೂ ತೋರಿಸಿರಿ;
ಜೆಕರ್ಯ 7 : 10 (OCVKN)
ವಿಧವೆಗೂ, ದಿಕ್ಕಿಲ್ಲದವನಿಗೂ, ಅನ್ಯನಿಗೂ, ಬಡವನಿಗೂ ಹಿಂಸಾಚಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ,’ ” ಎಂಬುದು.
ಜೆಕರ್ಯ 7 : 11 (OCVKN)
“ಆದರೆ ಅವರು ಕೇಳುವುದಕ್ಕೆ ನಿರಾಕರಿಸಿದರು. ಅವರು ಬೆನ್ನನ್ನು ತಿರುಗಿಸಿ, ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದ ಮಾಡಿಕೊಂಡರು.
ಜೆಕರ್ಯ 7 : 12 (OCVKN)
ಅವರು ನಿಯಮವನ್ನೂ, ಸರ್ವಶಕ್ತದರಾದ ಯೆಹೋವ ದೇವರು ತಮ್ಮ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯಗಳನ್ನೂ ಕೇಳದ ಹಾಗೆ, ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಕಠಿಣಮಾಡಿಕೊಂಡರು. ಆದ್ದರಿಂದ ಸರ್ವಶಕ್ತರಾದ ಯೆಹೋವ ದೇವರ ಮಹಾಕೋಪಕ್ಕೆ ಗುರಿಯಾದರು.
ಜೆಕರ್ಯ 7 : 13 (OCVKN)
“ಆಗ, ‘ನಾನು ಕೂಗಲು, ಅವರು ಕೇಳದೆ ಇದ್ದ ಪ್ರಕಾರ, ಅವರು ಕೂಗಲು ನಾನು ಕೇಳದೆ ಇದ್ದೇನೆಂದು,’ ಸರ್ವಶಕ್ತರಾದ ಯೆಹೋವ ದೇವರು ಹೇಳುತ್ತಾರೆ.
ಜೆಕರ್ಯ 7 : 14 (OCVKN)
ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರಗಾಳಿಯಿಂದ ಚದರಿಸಿ ಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು. ಹಾದು ಹೋಗುವವನೂ, ತಿರುಗಿಕೊಳ್ಳುವವನೂ ಇಲ್ಲದೆ ಹೋಯಿತು. ಏಕೆಂದರೆ ರಮ್ಯವಾದ ದೇಶವನ್ನು ಹಾಳುಮಾಡಿದರು.”
❮
❯
1
2
3
4
5
6
7
8
9
10
11
12
13
14