ಜೆಕರ್ಯ 9 : 1 (OCVKN)
ಇಸ್ರಾಯೇಲಿನ ವೈರಿಗಳಿಗಾಗುವ ನ್ಯಾಯತೀರ್ಪು; ಒಂದು ಪ್ರವಾದನೆ: ಹದ್ರಾಕ್ ದೇಶದ ವಿಷಯವಾದ ಯೆಹೋವ ದೇವರ ವಾಕ್ಯ: ಅದು ದಮಸ್ಕದಲ್ಲಿ ತಂಗುವುದು. ಮನುಷ್ಯನ ಕಣ್ಣುಗಳು, ಇಸ್ರಾಯೇಲಿನ ಎಲ್ಲಾ ಗೋತ್ರಗಳು ಯೆಹೋವ ದೇವರ ಮೇಲೆ ಇರುವುವು.
ಜೆಕರ್ಯ 9 : 2 (OCVKN)
ಹಮಾತು, ಬಹಳ ಜ್ಞಾನವಿರುವ ಟೈರ್, ಸೀದೋನ್ ಸಹ ಅದರ ಮೇರೆಯಾಗಿದೆ.
ಜೆಕರ್ಯ 9 : 3 (OCVKN)
ಟೈರ್ ತನಗಾಗಿ ಬಲವಾದ ಕೋಟೆಯನ್ನು ಕಟ್ಟಿಕೊಂಡು, ಬೆಳ್ಳಿಯನ್ನು ಧೂಳಿನಂತೆಯೂ, ಚೊಕ್ಕ ಬಂಗಾರವನ್ನು ಬೀದಿಗಳ ಕೆಸರಿನಂತೆಯೂ ಕೂಡಿಸಿಕೊಂಡಿತು.
ಜೆಕರ್ಯ 9 : 4 (OCVKN)
ಯೆಹೋವ ದೇವರು ಅದರ ಆಸ್ತಿಪಾಸ್ತಿಯನ್ನು ಕಿತ್ತುಹಾಕುವರು. ಅದೆಲ್ಲವನ್ನು ಸಮುದ್ರದಲ್ಲಿ ಎಸೆದುಬಿಡುವರು. ಅದು ಬೆಂಕಿಯಿಂದ ದಹಿಸಿಬಿಡುವುದು.
ಜೆಕರ್ಯ 9 : 5 (OCVKN)
ಅಷ್ಕೆಲೋನು ಕಂಡು ಭಯಪಡುವುದು, ಗಾಜವು ಸಹ ಅದನ್ನು ಕಂಡು ವೇದನೆ ಪಡುವುದು. ಎಕ್ರೋನಿಗೂ ಸಹ ಹೀಗೆ ಆಗುವುದು. ಏಕೆಂದರೆ ಅವಳ ನಿರೀಕ್ಷೆಯು ಬಾಡುವುದು. ಗಾಜದೊಳಗಿಂದ ಅರಸನು ನಾಶವಾಗುವನು. ಅಷ್ಕೆಲೋನು ನಿವಾಸ ಇಲ್ಲದೆ ಇರುವುದು.
ಜೆಕರ್ಯ 9 : 6 (OCVKN)
ಅಷ್ಡೋದಿನಲ್ಲಿ ಮಿಶ್ರಜಾತಿಯವರು ವಾಸಿಸುವರು. ಫಿಲಿಷ್ಟಿಯರ ಗರ್ವವನ್ನು ನಾನು ತೆಗೆದುಬಿಡುವೆನು.
ಜೆಕರ್ಯ 9 : 7 (OCVKN)
ಅವರ ರಕ್ತವನ್ನು ಅವರ ಬಾಯೊಳಗಿಂದಲೂ, ಅವರು ಕಚ್ಚುವ ಅಸಹ್ಯ ಪದಾರ್ಥಗಳನ್ನು ನಾನು ತೆಗೆದುಹಾಕಿಬಿಡುವೆನು. ಅವರು ಸಹ ನಮ್ಮ ದೇವರಿಗಾಗಿ ಉಳಿಯುವರು. ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವರು. ಎಕ್ರೋನು ಯೆಬೂಸಿಯನ ಹಾಗೆ ಇರುವರು.
ಜೆಕರ್ಯ 9 : 8 (OCVKN)
ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ, ಸೈನ್ಯದ ನಿಮಿತ್ತವೂ ನನ್ನ ಆಲಯದ ಹತ್ತಿರ ಪಾಳೆಯ ಮಾಡುತ್ತೇನೆ. ಇನ್ನು ಮೇಲೆ ಉಪದ್ರವ ಕೊಡುವವನು, ಅವರ ಮೇಲೆ ಹಾದು ಹೋಗುವುದಿಲ್ಲ. ಏಕೆಂದರೆ ಈಗ ನನ್ನ ಕಣ್ಣುಗಳಿಂದ ನೋಡುತ್ತಿದ್ದೇನೆ.
ಜೆಕರ್ಯ 9 : 9 (OCVKN)
ಚೀಯೋನಿನ ಅರಸನ ಆಗಮನ ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.
ಜೆಕರ್ಯ 9 : 10 (OCVKN)
ಎಫ್ರಾಯೀಮಿನೊಳಗಿಂದ ರಥಗಳನ್ನೂ ಯೆರೂಸಲೇಮಿನೊಳಗಿಂದ ಯುದ್ಧದ ಕುದುರೆಗಳನ್ನೂ ತೆಗೆದುಬಿಡುವೆನು. ಯುದ್ಧದ ಬಿಲ್ಲು ಸಹ ಮುರಿದು ಹಾಕಲಾಗುವುದು. ಇತರ ರಾಷ್ಟ್ರಗಳಿಗೆ ಸಮಾಧಾನಕರವಾಗಿರುವುದು. ಆತನ ದೊರೆತನವು ಸಮುದ್ರದಿಂದ ಸಮುದ್ರಕ್ಕೂ, ನದಿಯಿಂದ ಭೂಮಿಯ ಅಂತ್ಯಗಳವರೆಗೂ ಇರುವುದು.
ಜೆಕರ್ಯ 9 : 11 (OCVKN)
ನೀನು ನನ್ನೊಡನೆ ಒಡಂಬಡಿಕೆಯನ್ನು ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ನಿನ್ನ ಸೆರೆಯವರನ್ನು ನೀರಿಲ್ಲದ ಬಾವಿಯೊಳಗಿಂದ ಬಿಡುಗಡೆಮಾಡುವೆನು.
ಜೆಕರ್ಯ 9 : 12 (OCVKN)
ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರುಗಿರಿ. ಎರಡರಷ್ಟು ಕೊಡುವೆನೆಂದು ನಿನಗೆ ಈ ಹೊತ್ತೇ ಪ್ರಕಟಿಸುತ್ತೇನೆ.
ಜೆಕರ್ಯ 9 : 13 (OCVKN)
ನಾನು ನನ್ನ ಬಿಲ್ಲನ್ನು ಬಗ್ಗಿಸುವಂತೆ ಯೆಹೂದವನ್ನು ಬಗ್ಗಿಸುತ್ತೇನೆ. ಎಫ್ರಾಯೀಮಿನಿಂದ ಅದನ್ನು ತುಂಬಿಸುತ್ತೇನೆ. ಚೀಯೋನೇ, ನಿನ್ನ ಪುತ್ರರನ್ನು ಗ್ರೀಕ್ ಪುತ್ರರ ವಿರೋಧವಾಗಿ ಎಬ್ಬಿಸಿ, ನಿನ್ನನ್ನು ಶೂರನ ಖಡ್ಗದಂತೆ ಮಾಡಿದ್ದೇನೆ.
ಜೆಕರ್ಯ 9 : 14 (OCVKN)
ಯೆಹೋವ ದೇವರು ಕಾಣಿಸಿಕೊಳ್ಳುವರು ಇದಲ್ಲದೆ ಯೆಹೋವ ದೇವರು ಅವರ ಮೇಲೆ ಕಾಣಿಸಿಕೊಳ್ಳುವರು. ಆತನ ಬಾಣಗಳು ಮಿಂಚಿನ ಹಾಗೆ ಹೊರಡುವುವು. ಸಾರ್ವಭೌಮ ಯೆಹೋವ ದೇವರು ತುತೂರಿಯನ್ನು ಊದಿ, ದಕ್ಷಿಣದ ಸುಳಿಗಾಳಿಯಲ್ಲಿ ಹೋಗುವರು.
ಜೆಕರ್ಯ 9 : 15 (OCVKN)
ಸೇನಾಧೀಶ್ವರ ಯೆಹೋವ ದೇವರು ಅವರನ್ನು ಕಾಪಾಡುವರು. ಅವರು ನಾಶಮಾಡಿ, ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿಕೊಳ್ಳುವರು. ಕುಡಿದು, ದ್ರಾಕ್ಷಾರಸದಿಂದಾದ ಹಾಗೆ ತೂಗಾಡುವರು. ಅವರು ಬಲಿಪೀಠದ ಮೂಲೆಗಳಿಗೆ ಚಿಮುಕಿಸಲು ಬಳಸುವ ಪಾತ್ರೆಯ ಹಾಗೆಯೂ ತುಂಬಿರುವರು.
ಜೆಕರ್ಯ 9 : 16 (OCVKN)
ಅವರ ದೇವರಾದ ಯೆಹೋವ ದೇವರು ಆ ದಿವಸದಲ್ಲಿ, ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು, ಅವರು ಕಿರೀಟದ ರತ್ನಗಳಂತೆ ಆತನ ದೇಶದಲ್ಲಿ ಹೊಳೆಯುವರು.
ಜೆಕರ್ಯ 9 : 17 (OCVKN)
ಅವರ ಒಳ್ಳೆಯತನವು ಎಷ್ಟೋ ದೊಡ್ಡದು. ಅವರು ಸೌಂದರ್ಯವು ಎಷ್ಟು ಮಹತ್ತಾದದ್ದು! ಧಾನ್ಯವು ಯೌವನಸ್ಥರನ್ನೂ, ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವುವು.
❮
❯
1
2
3
4
5
6
7
8
9
10
11
12
13
14
15
16
17