ಚೆಫನ್ಯ 1 : 1 (OCVKN)
ಯೆಹೂದದ ಅರಸನಾದ ಆಮೋನನ ಮಗನಾದ ಯೋಷೀಯನ ಕಾಲದಲ್ಲಿ ಕೂಷಿಯ ಮಗನೂ ಗೆದಲ್ಯನ ಮೊಮ್ಮಗನೂ ಹಿಜ್ಕೀಯನಿಗೆ ಹುಟ್ಟಿದ ಅಮರ್ಯನ ಮರಿಮಗನೂ ಆದ ಚೆಫನ್ಯನಿಗೆ ಯೆಹೋವ ದೇವರು ದಯಪಾಲಿಸಿದ ವಾಕ್ಯ:
ಚೆಫನ್ಯ 1 : 2 (OCVKN)
ಯೆಹೋವ ದೇವರ ದಿನದಂದು ಇಡೀ ಭೂಮಿಯ ಮೇಲೆ ತೀರ್ಪು ಯೆಹೋವ ದೇವರು ಹೇಳುವುದೇನೆಂದರೆ, “ನಾನು ದೇಶದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶಮಾಡುವೆನು.”
ಚೆಫನ್ಯ 1 : 3 (OCVKN)
“ಮನುಷ್ಯರನ್ನೂ ಮೃಗಗಳನ್ನೂ ನಾಶಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ಮೀನುಗಳನ್ನೂ ನಾಶಮಾಡುವೆನು.” “ಮನುಷ್ಯರನ್ನು ದೇಶದೊಳಗಿಂದ ಕಡಿದು ಬಿಡುವಾಗ ದುಷ್ಟರಿಗೆ ಉಳಿಯುವುದು ಕಸದರಾಶಿಯೇ,” ಎಂದು ಯೆಹೋವ ದೇವರು ಹೇಳುತ್ತಾರೆ.
ಚೆಫನ್ಯ 1 : 4 (OCVKN)
“ಯೆಹೂದದ ಮೇಲೆಯೂ ಯೆರೂಸಲೇಮಿನ ಎಲ್ಲಾ ನಿವಾಸಿಗಳ ಮೇಲೆಯೂ ನನ್ನ ಕೈಚಾಚುವೆನು. ಈ ಸ್ಥಳದಲ್ಲಿ ಬಾಳನ ಪೂಜೆಗಳನ್ನು ಮತ್ತು ಉಳಿದಿರುವ ವಿಗ್ರಹಾರಾಧಕ ಯಾಜಕರ ಹೆಸರುಗಳನ್ನು ತೆಗೆದುಬಿಡುವೆನು.
ಚೆಫನ್ಯ 1 : 5 (OCVKN)
ಮಾಳಿಗೆಗಳ ಮೇಲೆ ತಲೆಬಾಗಿಸಿ ಆಕಾಶದ ನಕ್ಷತ್ರಗಣಕ್ಕೆ ಆರಾಧಿಸುವವರನ್ನೂ ಯೆಹೋವ ದೇವರ ಮೇಲೆಯೂ ಮಲ್ಕಾಮನ ಮೇಲೆಯೂ ಆಣೆ ಇಟ್ಟುಕೊಳ್ಳುವವರನ್ನೂ
ಚೆಫನ್ಯ 1 : 6 (OCVKN)
ಯೆಹೋವ ದೇವರನ್ನು ಅನುಸರಿಸದೆ ಹಿಂತಿರುಗಿ ಹೋಗುವವರನ್ನು ಯೆಹೋವ ದೇವರನ್ನು ಹುಡುಕದೆಯೂ ವಿಚಾರಿಸದೆಯೂ ಇರುವವರನ್ನೂ ಕಡಿದುಬಿಡುವೆನು.”
ಚೆಫನ್ಯ 1 : 7 (OCVKN)
ಸಾರ್ವಭೌಮ ಯೆಹೋವ ದೇವರ ಮುಂದೆ ಮೌನವಾಗಿರಿ. ಏಕೆಂದರೆ ಯೆಹೋವ ದೇವರ ದಿನವು ಸಮೀಪವಾಗಿದೆ. ಯೆಹೋವ ದೇವರು ಯಜ್ಞವನ್ನು ಸಿದ್ಧಮಾಡಿದ್ದಾರೆ. ಅವರು ಆಮಂತ್ರಿಸಿದವರನ್ನು ಅವರು ಪವಿತ್ರೀಕರಿಸಿದ್ದಾರೆ.
ಚೆಫನ್ಯ 1 : 8 (OCVKN)
ಯೆಹೋವ ದೇವರ ಯಜ್ಞದ ದಿನದಲ್ಲಿ ನಾನು ಪ್ರಧಾನರನ್ನು, ರಾಜಪುತ್ರರನ್ನು ಮತ್ತು ವಿದೇಶಿಯರ ಉಡುಪನ್ನು ತೊಟ್ಟುಕೊಳ್ಳುವವರೆಲ್ಲರನ್ನೂ ದಂಡಿಸುವೆನು.
ಚೆಫನ್ಯ 1 : 9 (OCVKN)
ಆ ದಿನದಲ್ಲಿ ಹೊಸ್ತಿಲನ್ನು ದಾಟುವವರೆಲ್ಲರನ್ನೂ ತಮ್ಮ ದೇವರುಗಳ ಆಲಯಗಳನ್ನು ಹಿಂಸಾಚಾರದಿಂದಲೂ ಮೋಸದಿಂದಲೂ ತುಂಬಿಸುವವರನ್ನೂ ದಂಡಿಸುವೆನು.
ಚೆಫನ್ಯ 1 : 10 (OCVKN)
“ಆ ದಿನದಲ್ಲಿ, ಮೀನಿನ ಬಾಗಿಲಿನಿಂದ ಕೂಗಿನ ಶಬ್ದವೂ ಹೊಸ ಮನೆಯಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ಮುರಿಯುವ ಬಲವಾದ ಶಬ್ದವೂ ಕೇಳಿಬರುವುದು, ಎಂದು ಯೆಹೋವ ದೇವರು ಹೇಳುತ್ತಾರೆ.
ಚೆಫನ್ಯ 1 : 11 (OCVKN)
ಮಾರುಕಟ್ಟೆಗಳ ಜಿಲ್ಲೆಯಲ್ಲಿ ವಾಸಿಸುವವರೇ, ಗೋಳಾಡಿರಿ. ಏಕೆಂದರೆ ವರ್ತಕರ ಜನರೆಲ್ಲಾ ಸಂಹಾರವಾದರು. ಬೆಳ್ಳಿಯ ವ್ಯಾಪಾರಿಗಳೆಲ್ಲರೂ ನಾಶವಾದರು.
ಚೆಫನ್ಯ 1 : 12 (OCVKN)
ಆ ಕಾಲದಲ್ಲಿ, ನಾನು ಯೆರೂಸಲೇಮನ್ನು ದೀಪಗಳಿಂದ ಹುಡುಕಿಬಿಡುವೆನು. ‘ಯೆಹೋವ ದೇವರು ಒಳ್ಳೆಯದನ್ನಾದರೂ ಕೆಟ್ಟದ್ದನ್ನಾದರೂ ಮಾಡುವುದಿಲ್ಲ’ ಎಂದುಕೊಂಡು ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನೂ ದಂಡಿಸುವೆನು.
ಚೆಫನ್ಯ 1 : 13 (OCVKN)
ಆದ್ದರಿಂದ ಅವರ ಸಂಪತ್ತು ಕೊಳ್ಳೆಯಾಗುವುದು, ಅವರ ಮನೆಗಳು ಹಾಳಾಗುವುವು. ಅವರು ಮನೆಗಳನ್ನು ಕಟ್ಟಿಕೊಂಡರೂ ಅವುಗಳಲ್ಲಿ ವಾಸಮಾಡರು. ದ್ರಾಕ್ಷಿತೋಟಗಳನ್ನು ನೆಟ್ಟು ಅವುಗಳ ರಸವನ್ನು ಕುಡಿಯರು.”
ಚೆಫನ್ಯ 1 : 14 (OCVKN)
ಯೆಹೋವ ದೇವರ ಮಹಾದಿವಸವು ಸಮೀಪವಾಗಿದೆ, ಬಹು ತ್ವರೆಯಾಗಿ ಬರುತ್ತಿದೆ. ಕೇಳಿರಿ. ಯೆಹೋವ ದೇವರ ದಿನದಂದು ಕೂಗು ಕಹಿಯಾಗಿರುವುದು. ಶೂರನು ಅಲ್ಲಿ ಬೊಬ್ಬೆ ಹಾಕುವನು.
ಚೆಫನ್ಯ 1 : 15 (OCVKN)
ಆ ದಿವಸವು ರೌದ್ರದ ದಿವಸವು, ಇಕ್ಕಟ್ಟು ಸಂಕಟಗಳ ದಿವಸವು, ಹಾಳುಪಾಳುಗಳ ದಿವಸವು, ಕತ್ತಲೆ ಮಬ್ಬುಗಳ ದಿವಸವು, ಕಾರ್ಮುಗಿಲ ಕಗ್ಗತ್ತಲ ದಿವಸವು,
ಚೆಫನ್ಯ 1 : 16 (OCVKN)
ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಆರ್ಭಟಗಳ ದಿವಸವು.
ಚೆಫನ್ಯ 1 : 17 (OCVKN)
“ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು. ಅವರು ಕುರುಡರ ಹಾಗೆ ತಡಕುವರು. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ. ಅವರ ರಕ್ತವು ಧೂಳಿನಂತೆಯೂ ಅವರ ಮಾಂಸವು ಗೊಬ್ಬರದಂತೆಯೂ ಸುರಿದಿರುವುದು.
ಚೆಫನ್ಯ 1 : 18 (OCVKN)
ಯೆಹೋವ ದೇವರ ರೌದ್ರದಿನದಂದು ಅವರ ಬೆಳ್ಳಿಯಾದರೂ ಅವರ ಬಂಗಾರವಾದರೂ ಅವರನ್ನು ರಕ್ಷಿಸಲಾರವು.” ಅವರ ಅಸೂಯೆಯ ಬೆಂಕಿಯು ದೇಶವನ್ನೆಲ್ಲಾ ನುಂಗುವುದು. ಏಕೆಂದರೆ ದೇಶದ ನಿವಾಸಿಗಳನ್ನೆಲ್ಲಾ ಬೇಗ ನಿರ್ಮೂಲ ಮಾಡಿಬಿಡುವರು.

1 2 3 4 5 6 7 8 9 10 11 12 13 14 15 16 17 18