ಚೆಫನ್ಯ 3 : 1 (OCVKN)
ಯೆರೂಸಲೇಮಿನ ಭವಿಷ್ಯತ್ತು ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಕಷ್ಟ!
ಚೆಫನ್ಯ 3 : 2 (OCVKN)
ಅವಳು ಯಾರಿಗೂ ವಿಧೇಯಳಾಗಲಿಲ್ಲ; ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ; ಯೆಹೋವ ದೇವರಲ್ಲಿ ಭರವಸೆ ಇಡಲಿಲ್ಲ; ತನ್ನ ದೇವರ ಸಮೀಪಕ್ಕೆ ಬರಲಿಲ್ಲ.
ಚೆಫನ್ಯ 3 : 3 (OCVKN)
ಅವಳ ಪ್ರಮುಖರು ಗರ್ಜಿಸುವ ಸಿಂಹಗಳು. ಅವಳ ನ್ಯಾಯಾಧಿಪತಿಗಳು ಸಂಜೆಯ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.
ಚೆಫನ್ಯ 3 : 4 (OCVKN)
ಅವಳ ಪ್ರವಾದಿಗಳು ಬಡಾಯಿ ಕೊಚ್ಚಿಕೊಳ್ಳುವವರೂ ವಿಶ್ವಾಸದ್ರೋಹಿಗಳೂ ಆಗಿದ್ದಾರೆ. ಅವಳ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರಮಾಡುತ್ತಾರೆ, ದೈವನಿಯಮವನ್ನು ಭಂಗಪಡಿಸುತ್ತಾರೆ.
ಚೆಫನ್ಯ 3 : 5 (OCVKN)
ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ. ಅವರು ಅನ್ಯಾಯ ಮಾಡುವುದಿಲ್ಲ; ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ; ಅವರು ತಪ್ಪುವವರಲ್ಲ. ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.
ಚೆಫನ್ಯ 3 : 6 (OCVKN)
“ನಾನು ಜನಾಂಗಗಳನ್ನು ಕಡಿದು ಬಿಟ್ಟಿದ್ದೇನೆ. ಅವುಗಳ ಗೋಪುರಗಳು ಹಾಳಾಗಿವೆ. ಅವುಗಳ ಬೀದಿಗಳನ್ನು ಯಾರೂ ಹಾದುಹೋಗದ ಹಾಗೆ ಹಾಳುಮಾಡಿದ್ದೆನೆ. ಅವುಗಳ ಪಟ್ಟಣಗಳು ನಾಶವಾದವು. ಹೀಗೆ ಅಲ್ಲಿ ಯಾವನೂ ಇರುವುದಿಲ್ಲ; ಯಾವ ಮನುಷ್ಯನೂ ಅಲ್ಲಿ ವಾಸಿಸುವುದೂ ಇಲ್ಲ.
ಚೆಫನ್ಯ 3 : 7 (OCVKN)
‘ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವೆ,’ ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ನಾಶವಾಗುವುದಿಲ್ಲ. ಆದರೆ ಅವರು ಬೇಗನೆ ಎದ್ದು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.
ಚೆಫನ್ಯ 3 : 8 (OCVKN)
ಆದ್ದರಿಂದ ಯೆಹೋವ ದೇವರು ಹೀಗೆನ್ನುತ್ತಾರೆ: ನಾನು ಬೇಟೆ ಹಿಡಿಯಲಿಕ್ಕೆ ಏಳುವ ದಿವಸದವರೆಗೂ ನನಗೆ ಕಾದುಕೊಳ್ಳಿರಿ.” ಏಕೆಂದರೆ ಜನಾಂಗಗಳನ್ನು ಕೂಡಿಸುವುದಕ್ಕೂ ರಾಜ್ಯಗಳನ್ನು ಒಟ್ಟು ಸೇರಿಸುವುದಕ್ಕೂ ಅವುಗಳ ಮೇಲೆ ನನ್ನ ರೌದ್ರವನ್ನೂ ನನ್ನ ಕೋಪದ ಎಲ್ಲಾ ಉರಿಯನ್ನೂ ಹೊಯ್ಯುವುದಕ್ಕೂ ತೀರ್ಮಾನಿಸಿಕೊಂಡಿದ್ದೇನೆ. ಏಕೆಂದರೆ ನನ್ನ ರೋಷದ ಬೆಂಕಿಯಿಂದ ಭೂಮಿಯೆಲ್ಲಾ ದಹಿಸಲಾಗುವುದು.
ಚೆಫನ್ಯ 3 : 9 (OCVKN)
ಇಸ್ರಾಯೇಲಿನ ಅವಶೇಷಗಳ ಪುನಃಸ್ಥಾಪನೆ “ಆಗ ನಾನು ಜನರ ತುಟಿಗಳನ್ನು ಶುದ್ಧೀಕರಿಸುವೆನು. ಅವರೆಲ್ಲರೂ ಯೆಹೋವ ದೇವರ ಹೆಸರಿನಿಂದ ಮೊರೆಯಿಡುವರು. ಏಕಮನಸ್ಸಿನಿಂದ ಆತನಿಗೆ ಸೇವೆಮಾಡುವರು.
ಚೆಫನ್ಯ 3 : 10 (OCVKN)
ಕೂಷಿನ ನದಿಗಳ ಆಚೆಯಿಂದ ನನ್ನ ಭಕ್ತರೂ ಚದರಿಹೋದ ನನ್ನ ಜನರೂ ನನಗೆ ಕಾಣಿಕೆಗಳನ್ನು ತರುವರು.
ಚೆಫನ್ಯ 3 : 11 (OCVKN)
ಆ ದಿವಸದಲ್ಲಿ ನೀನು ನನಗೆ ವಿರೋಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನಾಚಿಕೆಗೆ ಗುರಿಯಾಗುವುದಿಲ್ಲ; ಏಕೆಂದರೆ ಆಗ ಗರ್ವದಿಂದ ಹೊಗಳಿಕೊಳ್ಳುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕುವೆನು. ನನ್ನ ಪರಿಶುದ್ಧ ಪರ್ವತದಲ್ಲಿ ಇನ್ನು ಮೇಲೆ ನೀನು ಗರ್ವಪಡದೇ ಬಾಳುವೆ.
ಚೆಫನ್ಯ 3 : 12 (OCVKN)
ಆದರೆ ನಿನ್ನ ಮಧ್ಯದಲ್ಲಿ ಸೌಮ್ಯರನ್ನೂ ದೀನರನ್ನೂ ಉಳಿಸುವೆನು. ಇವರು ಯೆಹೋವ ದೇವರ ಹೆಸರಿನಲ್ಲಿ ನಂಬಿಕೆ ಇಡುವರು.
ಚೆಫನ್ಯ 3 : 13 (OCVKN)
ಇಸ್ರಾಯೇಲಿನಲ್ಲಿ ಉಳಿದವರು ಅನ್ಯಾಯ ಮಾಡರು; ಸುಳ್ಳಾಡರು, ಅವರ ಬಾಯಲ್ಲಿ ಮೋಸವಿರದು. ಅವರು ಮಂದೆಯಂತೆ ಮೇದು ಮಲಗುವರು. ಅವರನ್ನು ಭಯಪಡಿಸುವವನು ಒಬ್ಬನೂ ಇರುವುದಿಲ್ಲ.”
ಚೆಫನ್ಯ 3 : 14 (OCVKN)
ಚೀಯೋನಿನ ಪುತ್ರಿಯೇ, ಹಾಡು. ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಪುತ್ರಿಯೇ, ಪೂರ್ಣಹೃದಯದಿಂದ ಸಂಭ್ರಮಿಸಿ ಉಲ್ಲಾಸಪಡು.
ಚೆಫನ್ಯ 3 : 15 (OCVKN)
ಯೆಹೋವ ದೇವರು ನಿನ್ನ ಶಿಕ್ಷೆಗಳನ್ನು ದೂರಮಾಡಿ ನಿನ್ನ ಶತ್ರುವನ್ನು ತೆಗೆದುಹಾಕಿದ್ದಾರೆ. ಇಸ್ರಾಯೇಲಿನ ಅರಸನಾದ ಯೆಹೋವ ದೇವರು ನಿನ್ನ ಮಧ್ಯದಲ್ಲಿ ಇದ್ದಾರೆ. ಇನ್ನು ಮೇಲೆ ನಿನಗೆ ಯಾವ ಕೇಡಿನ ಭಯವಿರುವುದಿಲ್ಲ.
ಚೆಫನ್ಯ 3 : 16 (OCVKN)
ಆ ದಿವಸದಲ್ಲಿ ಯೆರೂಸಲೇಮಿಗೆ ಹೀಗೆಂದು ಹೇಳುವರು, “ಚೀಯೋನೇ, ನೀನು ಭಯಪಡಬೇಡ; ನಿನ್ನ ಕೈಗಳು ಬಲಹೀನವಾಗದಿರಲಿ.
ಚೆಫನ್ಯ 3 : 17 (OCVKN)
ನಿನ್ನ ದೇವರಾದ ಯೆಹೋವ ದೇವರು ನಿನ್ನೊಂದಿಗಿದ್ದಾರೆ. ನಿನ್ನನ್ನು ರಕ್ಷಿಸಲು ಶಕ್ತರಾಗಿದ್ದಾರೆ. ನಿನ್ನಲ್ಲಿ ಬಹಳವಾಗಿ ಹರ್ಷಾನಂದಗೊಳ್ಳುವರು. ತಮ್ಮ ಪ್ರೀತಿಯ ನಿಮಿತ್ತ ಅವರು ಇನ್ನು ಮುಂದೆ ನಿನ್ನನ್ನು ಖಂಡಿಸುವುದಿಲ್ಲ, ಆದರೆ ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವರು.”
ಚೆಫನ್ಯ 3 : 18 (OCVKN)
“ನೇಮಕವಾದ ಹಬ್ಬಗಳ ನಷ್ಟಕ್ಕಾಗಿರುವ ನಿಮ್ಮ ದುಃಖವನ್ನು ನಿಮ್ಮಿಂದ ನಾನು ತೆಗೆದುಬಿಡುವೆನು. ಅವು ನಿನಗೆ ಭಾರವಾಗಿಯೂ ನಿಂದೆಯಾಗಿಯೂ ಇದ್ದವು.
ಚೆಫನ್ಯ 3 : 19 (OCVKN)
ಆ ಕಾಲದಲ್ಲಿ ನಿನ್ನನ್ನು ಪೀಡಿಸುವವರನ್ನೆಲ್ಲಾ ದಂಡಿಸುವೆನು, ಕುಂಟಾದದ್ದನ್ನು ರಕ್ಷಿಸಿ, ಚದರಿಹೋದವರನ್ನು ಕೂಡಿಸುವೆನು; ಅವರು ಅವಮಾನ ಹೊಂದಿದ ದೇಶಗಳಲ್ಲೆಲ್ಲಾ ಅವರಿಗೆ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.
ಚೆಫನ್ಯ 3 : 20 (OCVKN)
ಆ ಕಾಲದಲ್ಲಿ ನಾನು ನಿಮ್ಮನ್ನು ಒಟ್ಟುಗೂಡಿಸುವೆನು. ಆ ಸಮಯದಲ್ಲಿ ನಾನು ಮನೆಗೆ ನಿಮ್ಮನ್ನು ಕರೆದುಕೊಂಡು ಬರುವೆನು. ನಾನು ನಿಮ್ಮ ಸೌಭಾಗ್ಯವನ್ನು ನಿಮ್ಮ ಕಣ್ಣೆದುರಿಗೆ ಪುನಃಸ್ಥಾಪಿಸಿ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆಯನ್ನೂ ಉಂಟುಮಾಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
❮
❯
1
2
3
4
5
6
7
8
9
10
11
12
13
14
15
16
17
18
19
20