KNV
25. ಆದರೆ ಎಜ್ರನೇ, ನೀನು ನಿನ್ನ ದೇವರ ನ್ಯಾಯ ಪ್ರಮಾಣಗಳನ್ನು ತಿಳಿದಿರುವದರಿಂದ ನದಿಯ ಆಚೆಯ ಲ್ಲಿರುವ ಸಮಸ್ತ ಜನರಿಗೆ ನ್ಯಾಯತೀರಿಸುವ ಹಾಗೆಯೂ ಅವುಗಳನ್ನು ಅರಿಯದವರಿಗೆ ಬೋಧಿಸುವ ಹಾಗೆಯೂ ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನದ ಪ್ರಕಾರ ಯಜಮಾನರನ್ನೂ ನ್ಯಾಯಾಧಿಪತಿಗಳನ್ನೂ ನೇಮಿಸು.
ERVKN
25. ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.
IRVKN
25. “ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN