KNV
19. ಅವನನ್ನು ಯೆಹೂದ ಅರಸನಾದ ಹಿಜ್ಕೀಯನೂ ಸಮಸ್ತ ಯೆಹೂದವೂ ಕೊಂದುಹಾಕಿದರೋ? ಅವನು ಕರ್ತನಿಗೆ ಭಯಪಟ್ಟು ಕರ್ತನ ಸಮ್ಮುಖದಲ್ಲಿ ಮೊರೆ ಯಿಟ್ಟನಲ್ಲವೋ? ಆ ಮೇಲೆ ಕರ್ತನು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು.
ERVKN
19. “ಹಿಜ್ಕೀಯನು ಯೆಹೂದದ ರಾಜನಾಗಿದ್ದನು. ಹಿಜ್ಕೀಯನು ಮೀಕಾಯನ ಕೊಲೆ ಮಾಡಲಿಲ್ಲ. ಯೆಹೂದದ ಯಾರೂ ಮೀಕಾಯನನ್ನು ಕೊಲೆಮಾಡಲಿಲ್ಲ. ಹಿಜ್ಕೀಯನು ಯೆಹೋವನನ್ನು ಗೌರವಿಸುತ್ತಿದ್ದನೆಂಬುದು ನಿಮಗೆ ಗೊತ್ತು. ಅವನು ಯೆಹೋವನನ್ನು ಸಂತೋಷಪಡಿಸಲು ಬಯಸಿದನು. ಯೆಹೂದಕ್ಕೆ ಕೇಡನ್ನು ತರುವೆನೆಂದು ಯೆಹೋವನು ಹೇಳಿದ್ದನು. ಆದರೆ ಹಿಜ್ಕೀಯನು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ತನ್ನ ಮನಸ್ಸನ್ನು ಬದಲಾಯಿಸಿ ಕೇಡನ್ನು ಬರಮಾಡಲಿಲ್ಲ. ನಾವು ಯೆರೆಮೀಯನನ್ನು ಕೊಂದರೆ ಅನೇಕ ಕಷ್ಟಗಳನ್ನು ತಂದುಕೊಳ್ಳುವೆವು. ಆ ಕಷ್ಟಗಳಿಗೆ ನಮ್ಮ ತಪ್ಪೇ ಕಾರಣವಾಗುವುದು.”
IRVKN
19. ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN