KNV
20. ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು.
ERVKN
20. ನಾನು ಅವರ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಕರೆದುಕೊಂಡು ಹೋಗುವೆನು. ಆ ದೇಶವು ಹಾಲೂಜೇನೂ ಹರಿಯುವ ದೇಶವಾಗಿರುತ್ತದೆ. ಅವರಿಗೆ ಇಷ್ಟ ಬಂದದ್ದನ್ನೆಲ್ಲಾ ತಿನ್ನಲು ಅವರಿಗೆ ಸಿಗುವುದು. ಅವರಿಗೆ ಸಮೃದ್ಧಿಯಾದ ಜೀವಿತವು ಇರುವುದು. ಆದರೆ ಅವರು ಸುಳ್ಳುದೇವರ ಕಡೆಗೆ ತಿರುಗಿ ಅವುಗಳನ್ನು ಪೂಜಿಸುವರು. ಅವರು ನನ್ನಿಂದ ತೊಲಗಿ ನನ್ನ ಒಡಂಬಡಿಕೆಯನ್ನು ಮುರಿದುಬಿಡುವರು.
IRVKN
20. ನಾನು ಪ್ರಮಾಣಮಾಡಿಕೊಟ್ಟ ದೇಶದಲ್ಲಿ ಇವರು ಸೇರುವುದಕ್ಕಿಂತ ಮುಂಚಿತವಾಗಿಯೇ ಇವರು ಈಗಲೂ ಮಾಡುವ ದುರಾಲೋಚನೆಗಳನ್ನು ನಾನು ಬಲ್ಲೆನು. ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿದಂತೆ ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಇವರನ್ನು ಸೇರಿಸಿದ ಮೇಲೆ ಇವರು ಚೆನ್ನಾಗಿ ಊಟಮಾಡಿ ಕೊಬ್ಬಿದವರಾದಾಗ ಇತರ ದೇವರುಗಳನ್ನು ಅವಲಂಬಿಸಿ, ಸೇವಿಸಿ ನನ್ನನ್ನು ತಾತ್ಸಾರಮಾಡಿ ನನ್ನ ನಿಬಂಧನೆಯನ್ನು ಮೀರುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN