KNV
10. ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ.
ERVKN
10. “ಆದರೆ ಆ ದಿನ ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನು ಗೆಲ್ಲುವನು. ಆಗ ಆ ಜನರಿಗೆ ತಕ್ಕ ಶಿಕ್ಷೆಯನ್ನು ಕೊಡುವನು. ಯೆಹೋವನ ವೈರಿಗಳು ತಕ್ಕ ಶಿಕ್ಷೆಯನ್ನು ಅನುಭವಿಸುವರು. ಖಡ್ಗವು ಸರ್ವರನ್ನು ಕೊಲೆ ಮಾಡುವುದು. ಖಡ್ಗವು ತನ್ನ ರಕ್ತದ ದಾಹ ತೀರುವವರೆಗೂ ಕೊಲೆ ಮಾಡುವುದು. ನಮ್ಮ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಗೆ ಬಲಿ ನಡೆಯಬೇಕಾಗಿರುವುದರಿಂದ ಹೀಗೆಲ್ಲ ಆಗುವುದು. ಈಜಿಪ್ಟಿನ ಸೈನ್ಯವನ್ನು ಉತ್ತರದಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಯಾಗಿ ಕೊಡಲಾಗುವುದು.
IRVKN
10. ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN