KNV
16. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
ERVKN
16. ಎದೋಮೇ, ನೀನು ಬೇರೆ ಜನಾಂಗಗಳನ್ನು ಹೆದರಿಸಿದೆ. ಆದ್ದರಿಂದ ನೀನು ನಿನ್ನನ್ನೇ ಪ್ರಮುಖನೆಂದು ಭಾವಿಸಿಕೊಂಡೆ. ಆದರೆ ಅದು ನಿನ್ನ ಮೂರ್ಖತನ. ನಿನ್ನ ಅಹಂಭಾವ ನಿನಗೆ ಮೋಸಮಾಡಿದೆ. ಎದೋಮೇ, ನೀನು ಎತ್ತರದ ಬೆಟ್ಟಗಳಲ್ಲಿರುವೆ. ಬೆಟ್ಟಗುಡ್ಡಗಳಿಂದ ರಕ್ಷಿತವಾದ ಸ್ಥಳಗಳಲ್ಲಿ ನೀನು ವಾಸಿಸುವೆ. ಆದರೆ ರಣಹದ್ದು ಗೂಡುಕಟ್ಟುವಷ್ಟು ಎತ್ತರದ ಸ್ಥಳದಲ್ಲಿ ನೀನು ಮನೆಕಟ್ಟಿದರೂ ನಾನು ನಿನ್ನನ್ನು ಹಿಡಿಯುತ್ತೇನೆ. ಅಲ್ಲಿಂದ ನಿನ್ನನ್ನು ಕೆಳಗೆ ತರುತ್ತೇನೆ.” ಇದು ಯೆಹೋವನ ನುಡಿ.
IRVKN
16. ಆಹಾ, ನಿನ್ನ ಭೀಕರತ್ವವೆಲ್ಲಿ! ಪರ್ವತಾಗ್ರದಲ್ಲಿ ನೆಲೆಗೊಂಡು ಬಂಡೆಯ ಬಿರುಕುಗಳಲ್ಲಿ ವಾಸಿಸುವ ಜನವೇ, ನಿನ್ನೆದೆಯ ಹೆಮ್ಮೆಯು ನಿನ್ನನ್ನು ಮೋಸಗೊಳಿಸಿದೆ; ನೀನು ಹದ್ದಿನಂತೆ ನಿನ್ನ ಗೂಡನ್ನು ಉನ್ನತಸ್ಥಾನದಲ್ಲಿ ಕಟ್ಟಿಕೊಂಡರೂ, ನಿನ್ನನ್ನು ಅಲ್ಲಿಂದ ಇಳಿಸಿಬಿಡುವೆನು. ಇದು ಯೆಹೋವನ ನುಡಿ.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN