KNV
8. ಬಾಬೆಲಿನ ಅರಸನಾದ ನೆಬೂಕ ದ್ನೇಚ್ಚರನಿಗೆ ಸೇವೆಮಾಡದೆ ಬಾಬೆಲಿನ ಅರಸನ ನೊಗಕ್ಕೆ ತನ್ನ ಕುತ್ತಿಗೆಯನ್ನು ಕೊಡದೆ ಇರುವ ಜನಾಂಗವೂ ರಾಜ್ಯವೂ ಯಾವದೋ ಆ ಜನಾಂಗವನ್ನು ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಇವನ ಕೈಯಿಂದ ಅವುಗಳನ್ನು ನಾಶಮಾಡಿಬಿಡುವ ವರೆಗೆ ದಂಡಿಸುವೆನೆಂದು ಕರ್ತನು ಅನ್ನುತ್ತಾನೆ.
ERVKN
8. “ ‘ಆದರೆ ಈಗ ಕೆಲವು ಜನಾಂಗಗಳು ಅಥವಾ ರಾಜ್ಯಗಳು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಸೇವಿಸಲು ಒಪ್ಪಲಿಲ್ಲ. ಅವುಗಳು ಅವನ ನೊಗವನ್ನು ತಮ್ಮ ಕತ್ತಿನ ಮೇಲೆ ಇಟ್ಟುಕೊಳ್ಳಲು ಒಪ್ಪಲಿಲ್ಲ. ಆದ್ದರಿಂದ ನಾನು ಆ ಜನಾಂಗವನ್ನು ಖಡ್ಗ, ಹಸಿವು ಮತ್ತು ಭಯಂಕರ ವ್ಯಾಧಿಗಳಿಂದ ಶಿಕ್ಷಿಸುತ್ತೇನೆ, ಇದು ಯೆಹೋವನಿಂದ ಬಂದ ಸಂದೇಶ. ನಾನು ಆ ಜನಾಂಗವನ್ನು ನಾಶಗೊಳಿಸುವವರೆಗೂ ಹಾಗೆ ಮಾಡುವೆನು. ಅವನ ವಿರುದ್ಧ ಹೋರಾಡುವ ಜನಾಂಗವನ್ನು ನಾಶಮಾಡುವದಕ್ಕಾಗಿ ನಾನು ನೆಬೂಕದ್ನೆಚ್ಚರನನ್ನು ಉಪಯೋಗಿಸುತ್ತೇನೆ.
IRVKN
8. ಯಾವ ಜನಾಂಗ, ಯಾವ ರಾಜ್ಯ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಅಡಿಯಾಳಾಗಲಿಕ್ಕೂ, ಬಾಬೆಲಿನ ಅರಸನ ನೊಗಕ್ಕೆ ಹೆಗಲು ಕೊಡಲಿಕ್ಕೂ ಒಪ್ಪದೆ ಇರುವನೋ ಆ ಜನಾಂಗವನ್ನು ನಾನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ದಂಡಿಸುತ್ತಾ ಬಂದು, ಕಡೆಯಲ್ಲಿ ಅವನ ಕೈಯಿಂದಲೇ ನಿರ್ಮೂಲ ಮಾಡಿಸುವೆನು’ ಇದು ಯೆಹೋವನ ನುಡಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN