KNV
11. ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
ERVKN
11. “ಯೆರೆಮೀಯನೇ, ಯೆಹೂದದ ಜನರಿಗೆ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಜನರಿಗೆ ಯೆಹೋವನು ಹೀಗೆನ್ನುವನು: ‘ಈಗಲೇ ನಾನು ನಿಮಗೋಸ್ಕರ ತೊಂದರೆಗಳನ್ನು ಎಬ್ಬಿಸುತ್ತೇನೆ. ನಿಮ್ಮ ವಿರುದ್ಧ ಯೋಜನೆಗಳನ್ನು ಹಾಕುತ್ತಿದ್ದೇನೆ. ಆದ್ದರಿಂದ ನೀವು ಮಾಡುತ್ತಿರುವ ದುಷ್ಕೃತ್ಯಗಳನ್ನು ನಿಲ್ಲಿಸಬೇಕು. ಪ್ರತಿಯೊಬ್ಬನು ಪರಿವರ್ತನೆ ಹೊಂದಿ ಒಳ್ಳೆಯ ಕೆಲಸಗಳನ್ನು ಮಾಡಲು ಪ್ರಾರಂಭಿಸಬೇಕು’ ಎಂದು ಹೇಳು.
IRVKN
11. ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, ‘ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ’ ಎಂಬ ಮಾತನ್ನು ಹೇಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN