KNV
14. ನಾನು ಯಾವ ಹುಡುಗಿಗೆ--(ನೀರು) ಕುಡಿಯುವ ಹಾಗೆ ನಿನ್ನ ಕೊಡವನ್ನು ಇಳಿಸು ಎಂದು ಕೇಳಿ ಕೊಂಡಾಗ --ನೀನು ಕುಡಿ, ನಿನ್ನ ಒಂಟೆಗಳಿಗೆ ಸಹ ಕುಡಿಯುವದಕ್ಕೆ ಕೊಡುತ್ತೇನೆ ಎಂದು ಹೇಳುವಳೋ ಆಕೆಯನ್ನೇ ನೀನು ನಿನ್ನ ಸೇವಕನಾದ ಇಸಾಕನಿಗೆ ನೇಮಕ ಮಾಡಿದ್ದಾಗಿರಲಿ. ಇದರಿಂದ ನೀನು ನನ್ನ ಯಜಮಾನನಿಗೆ ದಯೆ ತೋರಿಸಿದ್ದೀ ಎಂದು ನಾನು ತಿಳುಕೊಳ್ಳುವೆನು ಎಂದು ಬೇಡಿಕೊಂಡನು.
ERVKN
14. ಇಸಾಕನಿಗೆ ಯೋಗ್ಯಳಾದ ಕನ್ಯೆಯನ್ನು ಕಂಡುಕೊಳ್ಳಲು ನಾನು ಒಬ್ಬಳಿಗೆ, ‘ದಯವಿಟ್ಟು ನಿನ್ನ ಕೊಡವನ್ನು ಕೆಳಗಿಳಿಸಿ ಕುಡಿಯಲು ನೀರು ಕೊಡು’ ಎನ್ನುವೆ. ಆಕೆ ನನಗೆ, ‘ನೀನೂ ಕುಡಿ, ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎಂದರೆ ಆಕೆಯೇ ನಿನ್ನಿಂದ ಆಯ್ಕೆಗೊಂಡ ಯೋಗ್ಯ ಕನ್ಯೆಯೆಂದೂ ನೀನು ನನ್ನ ಒಡೆಯನಿಗೆ ಕರುಣೆ ತೋರಿದೆಯೆಂದೂ ನಾನು ತಿಳಿದುಕೊಳ್ಳುವೆ” ಎಂದು ಪ್ರಾರ್ಥಿಸಿದನು.
IRVKN
14. ನಾನು ಯಾವ ಹುಡುಗಿಗೆ, ‘ನೀನು ದಯವಿಟ್ಟು ನಿನ್ನ ಕೊಡವನ್ನು ಇಳಿಸಿ ನನಗೆ ಕುಡಿಯುವುದಕ್ಕೆ ನೀರನ್ನು ಕೊಡು’ ಎಂದು ಹೇಳುವಾಗ, ‘ನೀನು ಕುಡಿಯಬಹುದು ಮತ್ತು ನಿನ್ನ ಒಂಟೆಗಳಿಗೂ ನೀರು ಕೊಡುತ್ತೇನೆ’ ಎನ್ನುವಳೋ, ಅವಳೇ ನಿನ್ನ ದಾಸನಾದ ಇಸಾಕನಿಗೆ ನೀನು ನೇಮಿಸಿರುವ ಕನ್ಯೆಯಾಗಲಿ. ನನ್ನ ದಣಿಯ ಮೇಲೆ ನಿನ್ನ ದಯೆಯಿದೆ ಎಂದು ಇದರಿಂದ ನನಗೆ ಗೊತ್ತಾಗುವುದು” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN