KNV
11. ಯಾವ ಪ್ರಕಾರ ದಟ್ಟಿಯು ಮನುಷ್ಯನ ನಡುವಿಗೆ ಹತ್ತಿಕೊ ಳ್ಳುವದೋ ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ ಯೆಹೂದದ ಮನೆತನವ ನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು; ಆದರೆ ಅವರು ಕೇಳಲಿಲ್ಲ.
ERVKN
11. ಪುರುಷನೊಬ್ಬನು ನಡುಪಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆಹೋದರು.”
IRVKN
11. ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN